ಆದಾಯ ತೆರಿಗೆ ಅಧಿಕಾರಿಗಳ ದಾಳಿಯ ಸಂದರ್ಭದಲ್ಲಿ ಕೋಟ್ಯಂತರ ರೂಪಾಯಿ ಹಣ ಸಿಕ್ಕಿರುವ ವಿಚಾರವನ್ನು ಮುಂದಿಟ್ಟುಕೊಂಡು ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ಪ್ರತಿಭಟನೆ ನಡೆಸಿದರೆ, ಜೆಡಿಎಸ್ ಸೋಷಿಯಲ್ ಮೀಡಿಯಾದಲ್ಲಿ ವಾಗ್ದಾಳಿ ನಡೆಸಿದೆ.
ಮಂಗಳವಾರ(ಅ.17) ಸುದೀರ್ಘವಾದ ಟ್ವೀಟ್ ಮಾಡಿರುವ ಜೆಡಿಎಸ್ ಐಟಿ ಸೆಲ್, ‘ಕಾಂಗ್ರೆಸ್ ಪಕ್ಷವೇ ಪರ್ಸಂಟೇಜ್ ಪಟಾಲಂ, ಕಮಿಷನ್ ಕೈಂಕರ್ಯವೇ ರಾಜಧರ್ಮ’ ಎಂದು ಟೀಕಿಸಿದೆ.
‘ಕಾಂಗ್ರೆಸ್ ಪಕ್ಷವೇ ಪರ್ಸಂಟೇಜ್ ಪಟಾಲಂ. ಕಮೀಷನ್ ಕೈಂಕರ್ಯವೇ ಅದರ ರಾಜಧರ್ಮ. ಲೂಟಿ, ದಂಧೆ, ಅಕ್ರಮವೇ ಅದರ ಗ್ಯಾರಂಟಿ. ಅನ್ಯರಾಜ್ಯಗಳ ಚುನಾವಣೆ ಇವರಿಗೆ ಚಿನ್ನದ ಗಣಿ. ಹೈಕಮಾಂಡ್ ಆಸರೆಯೇ ಅಕ್ಷಯ ಪಾತ್ರೆ. ಇಂಥವರಿಗೆ ಕುಮಾರಸ್ವಾಮಿಯವರ ಕೂಗು ಕೇಳುವುದೇ? ಇಲಾಖೆಗೊಂದು ಹಿಟಾಚಿ ಇಟ್ಟುಕೊಂಡು 24X7 ಬಾಚುತ್ತಿದ್ದಾರೆ’ ಎಂದು ಜೆಡಿಎಸ್, ಸಿದ್ದರಾಮಯ್ಯ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದೆ.
ಡಿ ಕೆ ಶಿವಕುಮಾರ್ ವಿರುದ್ಧವೂ ಉರಿದು ಬಿದ್ದಿರುವ ಜೆಡಿಎಸ್, ‘ಅವರು ರಾಜ್ಯಕ್ಕೆ ಉಪ ಮುಖ್ಯಮಂತ್ರಿ. ಅವರನ್ನು ಮೂರ್ಖ ಶಿಖಾಮಣಿ ಎನ್ನುವುದು ತರವಲ್ಲ. ಅಸಲಿಗೆ, ಹಾಗೆಂದು ಹೇಳಲು ನಮಗೂ ಇಷ್ಟವಿಲ್ಲ ಬಿಡಿ. ಲೂಟಿಯನ್ನೇ ನಿತ್ಯಕಾಯಕ, ದಂಧೆಯನ್ನೇ ದಿನವಹಿ ಧನಾರ್ಜನೆಗೆ ರಹದಾರಿ ಮಾಡಿಕೊಂಡಿರುವ, ಕಂಡ ಕಂಡವರ ಜಮೀನುಗಳಿಗೆ ಬೇಲಿ ಬಿಗಿದು ಅವರ ರಕ್ತ ಹೀರುತ್ತಿರುವ ವ್ಯಕ್ತಿ ರಾಜ್ಯಕ್ಕೆ ಉಪ ಮುಖ್ಯಮಂತ್ರಿ. ಇದಲ್ಲವೇ ಕನ್ನಡಿಗರ ದೌರ್ಭಾಗ್ಯ’ ಎಂದಿದೆ.
ಅವರು ರಾಜ್ಯಕ್ಕೆ ಉಪ ಮುಖ್ಯಮಂತ್ರಿ. ಅವರನ್ನು ‘ಮೂರ್ಖ ಶಿಖಾಮಣಿ ‘ ಎನ್ನುವುದು ತರವಲ್ಲ. ಅಸಲಿಗೆ, ಹಾಗೆಂದು ಹೇಳಲು ನಮಗೂ ಇಷ್ಟವಿಲ್ಲ ಬಿಡಿ. ಲೂಟಿಯನ್ನೇ ನಿತ್ಯಕಾಯಕ, ದಂಧೆಯನ್ನೇ ದಿನವಹಿ ಧನಾರ್ಜನೆಗೆ ರಹದಾರಿ ಮಾಡಿಕೊಂಡಿರುವ, ಕಂಡ ಕಂಡವರ ಜಮೀನುಗಳಿಗೆ ಬೇಲಿ ಬಿಗಿದು ಅವರ ರಕ್ತ ಹಿರುತ್ತಿರುವ ವ್ಯಕ್ತಿ ರಾಜ್ಯಕ್ಕೆ ಉಪ ಮುಖ್ಯಮಂತ್ರಿ!!…
— Janata Dal Secular (@JanataDal_S) October 17, 2023
‘ಅವರ ‘ಅಂತ್ಯವಿಲ್ಲದ ಹೈಕಮಾಂಡ್ ಕೃಪಾಪೋಷಿತ ಅಕ್ರಮ’ಗಳಿಗೆ ಕೊನೆ ಎಂಬುದಿಲ್ಲವೇ? ಎಂದು ಜನ ಕೇಳುತ್ತಿದ್ದಾರೆ. ಕೊನೆ ಇದೆ, ಇದ್ದೇ ಇರುತ್ತದೆ.. ಕಾಯಬೇಕಷ್ಟೇ. ವಾಕ್ಯ ಎಂದ ಮೇಲೆ ಫುಲ್ ಸ್ಟಾಪ್ ಇರಲೇಬೇಕು.’ ಎಂದು ತಿಳಿಸಿದೆ.
‘ಸೂರ್ಯ ಪಶ್ಚಿಮಕ್ಕೆ ವಾಲಿದೊಡನೆ ಕಂಡವರ ಪಕ್ಷಗಳವರ ಮನೆ ಬಾಗಿಲ ಮುಂದೆ ಪರ್ಸಂಟೇಜ್ ಪಟಾಲಂ ಪ್ರತ್ಯಕ್ಷ. ಇಂಥಾ ಕಲುಷಿತ ರಾಜಕಾರಣ ಶೋಭೆಯೇ? ನುಡಿದಂತೆ ನಡೆಯುತ್ತೇವೆ ಎಂದರೆ ಇದೇನಾ? ಜನರ ದುಡ್ಡು, ಇವರದ್ದು ಜಾತ್ರೆ. ಇದೇ ಇವತ್ತಿನ ಕರ್ನಾಟಕದ ಚಿತ್ರಣ. ರಾಜ್ಯದ ಜನರಿಗೆ ಇವರ ಭಂಡಾರವೆಲ್ಲ ಗೊತ್ತಾಗಿದೆ. ಆ ಭಂಡಾರ ಬಿಚ್ಚಿಕೊಂಡ ಕೂಡಲೇ ಬಾಲಸುಟ್ಟ ಬೆಕ್ಕಿನಂತೆ ವಿಲವಿಲನೆ ಒದ್ದಾಡಿದರೆ ಹೇಗೆ? ಅವರ ಫಸಲು, ಅವರವರ ಫಲ’ ಎಂದು ಕಾಂಗ್ರೆಸ್ ವಿರುದ್ಧ ಜೆಡಿಎಸ್ ಮುಗಿಬಿದ್ದಿದೆ.
‘ಕರ್ನಾಟಕವನ್ನು ಹೈಕಮಾಂಡ್ಗೆ ಒತ್ತೆ ಇಟ್ಟ ಭೂಪತಿ, ಆಧುನಿಕ ಈಸ್ಟ್ ಇಂಡಿಯಾ ಕಂಪನಿಗಳ ಪೊಲಿಟಿಕಲ್ ಏಜೆಂಟ್, ಕರುನಾಡಿನ ಕರೋಡ್ ಪತಿ, ಬದುಕೆಲ್ಲ ಬ್ರೋಕರೇಜ್ ಮಾಡಿಕೊಂಡೇ ಕೊಳ್ಳೆ ಹೊಡೆದ ವ್ಯಕ್ತಿ, ಈಗ ಹೆಚ್.ಡಿ.ಕುಮಾರಸ್ವಾಮಿ ಅವರ ಬಗ್ಗೆ ಲಘುವಾಗಿ ಮಾತನಾಡುವುದೇ? ಅರೆರೆ.. ಇವರ SST, YST ಅಬ್ಬರ ಕಂಡು GSTಯೇ ಬೆಚ್ಚಿದೆ. ಇದೇ ನೋಡಿ ಕರ್ನಾಟಕದ ಮಾದರಿ’ ಎಂದು ತಿಳಿಸಿದೆ.
ಕಾಂಗ್ರೆಸ್ ಸ್ವತಃ ತಾನೇ ಕೊಳೆತು ನಾರುತ್ತಿದೆ. ಆದರೆ, ಪಕ್ಕದ ಮನೆ ಕಾಂಪೌಡಿನ ಮೇಲೆ ಮರದೆಲೆ ಬಿದ್ದಿದೆ ಎಂದು ಅಂಗೈ ಪರಚಿಕೊಳ್ಳುತ್ತಿದೆ. ಪರಚಿಕೊಳ್ಳುವುದರ ಜತೆಗೆ, ಕರ್ನಾಟಕವನ್ನೇ ಪಾಪರ್ ಮಾಡುವುದೇ ಪರ್ಸಂಟೇಜ್ ಪಟಾಲಂ ಹಾಕಿಕೊಂಡಿರುವ ಏಕೈಕ ಗುರಿ. ಅದರ ಪಾಲಿಗೆ ಹೈಕಮಾಂಡ್ ಸೇವೆಯೇ ಆನಂದದಾಯಕ ಸೇವೆ’ ಎಂದು ಜೆಡಿಎಸ್ ವಾಗ್ದಾಳಿ ನಡೆಸಿದೆ.