ವಿಜಯಪುರ | ರಸ್ತೆ ಬದಿ ಕುಳಿತಿದ್ದವರ ಮೇಲೆ ಹರಿದ ಲಾರಿ; ನಾಲ್ವರು ಯುವಕರ ದುರ್ಮರಣ

Date:

Advertisements

ಹೆದ್ದಾರಿಯ ಬದಿಯ ಡಿವೈಡರ್‌ ಮೇಲೆ ಕುಳಿತಿದ್ದ ನಾಲ್ವರು ಬೈಕ್‌ ಸವಾರರ ಮೇಲೆ ಲಾರಿಯೊಂದು ಹರಿದಿದ್ದು, ನಾಲ್ವರೂ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ವಿಜಯಪುರ ಜಿಲ್ಲೆಯಲ್ಲಿ ನಡೆದಿದೆ.

ಮೃತರನ್ನು ವಿಜಯಪುರದ ವಜ್ರಹನುಮಾನ ನಗರದ ನಿವಾಸಿ ಶಿವಾನಂದ ಚೌಧರಿ (25), ಸುನೀಲ ಖಾನಾಪೂರ (26), ಈರಣ್ಣ ಕೋಲಾರ (26) ಮತ್ತು ಪ್ರವೀಣ ಪಾಟೀಲ್ (30) ಎಂದು ಗುರುತಿಸಲಾಗಿದೆ.

ಮಂಗಳವಾರ ರಾತ್ರಿ ಈ ನಾಲ್ವರು ಸ್ನೇಹಿತರು ಊಟಕ್ಕೆಂದು ಹೊರಗೆ ಹೋಗಿದ್ದರು. ಊಟ ಮುಗಿಸಿ, ಹೆದ್ದಾರಿಯಲ್ಲಿದ್ದ ಟೋಲ್‌ಗೇಟ್‌ ಸಮೀಪದ ಟ್ರಕ್‌-ಬೇ ಬಳಿಯ ಡಿವೈಡರ್‌ ಮೇಲೆ ಕುಳಿತಿದ್ದರು. ಈ ವೇಳೆ, ವೇಗವಾಗಿ ಬಂದ ಲಾರಿ ಯುವಕರ ಮೇಲೆ ಹರಿದಿದೆ.

Advertisements

ತೀವ್ರ ಗಾಯಗೊಂಡಿದ್ದ ಯುವಕರನ್ನು ಆಸ್ಪತ್ರೆಗೆ ಸಾಗಿಸಲು ಸ್ಥಳೀಯರು ಯತ್ನಿಸಿದ್ದಾರೆ. ಆದರೆ, ಯುವಕರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಲಾರಿ ಚಾಲಕ ಪರಾರಿಯಾಗಿದ್ದಾನೆ.

ಸ್ಥಳಕ್ಕೆ ಡಿವೈಎಸ್‌ಪಿ ಗಿರಿಮಲ್ಲ ತಳಕಟ್ಟಿ ಹಾಗೂ ಪೊಲೀಸರು ಭೇಟಿ ನೀಡಿದ್ದು, ಪರಿಶೀಲನೆ ನಡೆಸಿದ್ದಾರೆ. ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗೆ ಆಸ್ಪತ್ರೆಗೆ ರವಾನಿಸಿದ್ದಾರೆ. ವಿಜಯಪುರ ಸಂಚಾರಿ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ತೆಂಗಿನಕಾಯಿ ಕಳ್ಳತನ ಆರೋಪ: ವ್ಯಕ್ತಿಯ ಹತ್ಯೆ; ಆರೋಪಿಗಳ ಬಂಧನ

ತೆಂಗಿನಕಾಯಿ ಕಳ್ಳತನ ಮಾಡಿದ್ದಾನೆ ಎಂಬ ಕಾರಣಕ್ಕೆ ವ್ಯಕ್ತಿಯನ್ನು ಹತ್ಯೆ ಮಾಡಿರುವ ಘಟನೆ...

ಗದಗ | ಒಳಮೀಸಲಾತಿ ಅಂಗೀಕಾರ ಸ್ವಾಗತಾರ್ಹ: ಬಸವರಾಜ ಕಡೇಮನಿ

"ಒಳಮೀಸಲಾತಿ ಜಾರಿಗಾಗಿ ಒತ್ತಾಯಿಸಿ ಮೂವತ್ತೈದು ವರ್ಷಗಳ ನಿರಂತರ ಹೋರಾಟದ ಫಲದಿಂದ ರಾಜ್ಯ...

ಸಕಲೇಶಪುರ | ವ್ಯಸನಮುಕ್ತ ರಾಜ್ಯ ಆಂದೋಲನಕ್ಕೆ ಸರ್ಕಾರ ಸಂಪೂರ್ಣ ಬೆಂಬಲ ನೀಡಬೇಕು: ಬಿ ಆರ್‌ ಪಾಟೀಲ್

ವ್ಯಸನಮುಕ್ತ ರಾಜ್ಯ ಆಂದೋಲನಕ್ಕೆ ಸರ್ಕಾರ ಸಂಪೂರ್ಣವಾಗಿ ಬೆಂಬಲ ನೀಡಿದಾಗ ಮಾತ್ರ ವ್ಯಸನವನ್ನು...

ಚಿಕ್ಕಮಗಳೂರು l ಸಭಾಧ್ಯಕ್ಷರೇ ಮಲೆನಾಡಿನ ಸಮಸ್ಯೆ ಬಗ್ಗೆ ಚರ್ಚಿಸಲು ಅವಕಾಶ ಕಲ್ಪಿಸಿ; ಹೆಚ್.ಡಿ ತಮ್ಮಯ್ಯ

ಮಲೆನಾಡಿನಲ್ಲಿ ಕಾಡುತ್ತಿರುವ ಕಾಡು-ಪ್ರಾಣಿ-ಮಾನವ ಸಂಘರ್ಷದಿಂದ ಜನಜೀವನ ಅಸ್ತವ್ಯಸ್ಥವಾಗಿದೆ. ಇಂತಹ ಗಂಭೀರ ಸಮಸ್ಯೆಗಳ...

Download Eedina App Android / iOS

X