ಸರ್ಕಾರದ ಯೋಜನೆಗಳಡಿ ಸಾಲ ಮಂಜೂರಾತಿಗೆ ಸಿಬಿಲ್ ಸ್ಕೋರ್ ಪರಿಗಣಿಸಬೇಡಿ: ಕೇಂದ್ರ ಸಚಿವ ನಾರಾಯಣಸ್ವಾಮಿ

Date:

Advertisements

ಸರ್ಕಾರದ ವಿವಿಧ ಯೋಜನೆಗಳಡಿ ಸಾಲ ಮಂಜೂರಾತಿಗೆ ಬ್ಯಾಂಕುಗಳು ಸಿಬಿಲ್ ಸ್ಕೋರ್ ಪರಿಗಣಿಸಬಾರದು. ಹಾಲು ಉತ್ಪಾದಕ ಸಂಘಗಳ ಸಹಯೋಗದಲ್ಲಿ ಹಸು ಸಾಕಾಣಿಕೆಗೆ, ಸಣ್ಣ ಘಟಕಗಳ ಆಧಾರದಲ್ಲಿ ಪಾರಂಪರಿಕವಾಗಿ ಕುರಿ ಸಾಕಾಣಿಕೆ ಮಾಡಿಕೊಂಡು ಬಂದ ಸಮುದಾಯಗಳಿಗೆ ರಿಯಾಯಿತಿ ಬಡ್ಡಿದರದಲ್ಲಿ ಸಾಲ ಒದಗಿಸಬೇಕು ಎಂದು ಕೇಂದ್ರ ಸಾಮಾಜಿಕ ನ್ಯಾಯ ಹಾಗೂ ಸಬಲೀಕರಣ ಇಲಾಖೆ ರಾಜ್ಯ ಖಾತೆ ಸಚಿವ ಎ.ನಾರಾಯಣಸ್ವಾಮಿ ಹೇಳಿದ್ದಾರೆ.

ದಾವಣಗೆರೆ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಹಿಂದುಳಿದ ಅಭಿವೃದ್ಧಿ ನಿಗಮಗಳ ಅನುದಾನದಡಿ ಸಾಲ ಸೌಲಭ್ಯ ಯೋಜನೆಗಳ ಅನುಷ್ಠಾನದ ಕುರಿತು ಚಿತ್ರದುರ್ಗ, ತುಮಕೂರು, ದಾವಣಗೆರೆ ಜಿಲ್ಲೆಯ ಜಿಲ್ಲಾ ಮಟ್ಟದ ಅಧಿಕಾರಿಗಳು, ಬ್ಯಾಂಕ್ ಅಧಿಕಾರಿಗಳೊಂದಿಗೆ ಸಬೆ ನಡೆಸಿ, ಅವರು ಮಾತನಾಡಿದರು.

“ಸಾಮಾಜಿಕವಾಗಿ ಹಾಗೂ ಹಿಂದುಳಿದವರು ಸ್ವಂತ ಉದ್ಯೋಗ ಕೈಗೊಂಡು ಸ್ವಾವಲಂಬಿ ಜೀವನ ನಡೆಸಲು ಅನುಕೂಲವಾಗುವಂತೆ, ಕೇಂದ್ರ ಸರ್ಕಾರ ಹಲವು ನಿಗಮಗಳನ್ನು ಸ್ಥಾಪಿಸಿ, ಬ್ಯಾಂಕುಗಳ ಮೂಲಕ ಫಲಾನುಭವಿಗಳಿಗೆ ರಿಯಾಯಿತಿ ಬಡ್ಡಿದರದಲ್ಲಿ ಸಾಲ ಸೌಲಭ್ಯ ನೀಡುವ ಯೋಜನೆ ಜಾರಿಗೊಳಿಸಿದೆ. ಆದರೆ, ಬ್ಯಾಂಕ್‌ಗಳು ಈ ಸೌಲಭ್ಯದ ಕುರಿತು ಸಾರ್ವಜನಿಕರಿಗೆ ಯಾವುದೇ ಮಾಹಿತಿ ನೀಡುತ್ತಿಲ್ಲ” ಎಂದು ಅಸಮಾಧಾನ ವ್ಯಕ್ತಪಡಿಸಿದರು.

Advertisements

“ನಿಗಮಗಳು ಬ್ಯಾಂಕ್‌ಗಳಲ್ಲಿ ಠೇವಣಿ ಇರಿಸಿದ ಹಣದ ಬಳಕೆಯೇ ಆಗಿಲ್ಲ. ಸಿಬಿಲ್ ಸ್ಕೋರ್, ಸಾಲ ಮರುಪಾವತಿ ಅರ್ಹತೆ ಮುಂತಾದ ನೆಪಗಳನ್ನು ಹೇಳಿ ಸಾಲ ಸೌಲಭ್ಯಕ್ಕೆ ಸಲ್ಲಿದ ಅರ್ಜಿಯನ್ನು ಬ್ಯಾಂಕುಗಳಿಂದ ತಿರಸ್ಕರಿಸಲಾಗುತ್ತಿದೆ ಎಂಬ ದೂರುಗಳು ಕೇಳಿಬರುತ್ತಿವೆ. ಕೇಂದ್ರ ಸರ್ಕಾರವು ಸಾಮಾಜಿಕವಾಗಿ ಹಿಂದುಳಿದ ವ್ಯಕ್ತಿಗಳು, ಬಡವರು ಉದ್ಯೋಗ ಕೈಗೊಂಡು ಅಭಿವೃದ್ಧಿ ಹೊಂದಲು ಸೌಲಭ್ಯ ನೀಡುವಾಗ, ಇದಕ್ಕೆ ಬ್ಯಾಂಕುಗಳು ಸ್ಕೋರ್ ಹಾಗೂ ಆಸ್ತಿ ಭದ್ರತೆಯನ್ನು ಬಯಸುವುದು ಎಷ್ಟು ಸರಿ” ಎಂದು ಕಡಿಕಾರಿದರು.

“ಸಿಬಿಲ್‌ ಸ್ಕೋರ್‌ಅನ್ನು ಮಾನದಂಡ ಮಾಡಿಕೊಳ್ಳುವುದು ಸರ್ಕಾರ ಜಾರಿ ಮಾಡಿರುವ ಯೋಜನೆಗಳ ಆಶಯಕ್ಕೆ ವಿರುದ್ಧವಾಗಿದೆ. ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಇಲಾಖೆಯ ಐದು ನಿಗಮಗಳ ಯೋಜನೆಯಡಿ ಬ್ಯಾಂಕುಗಳು ಇದವರೆಗೆ ಎಷ್ಟುಜನರಿಗೆ ಸಾಲ ಸೌಲಭ್ಯ ನೀಡಿವೆ” ಎಂದು ಸಚಿವ ಎ.ನಾರಾಯಣಸ್ವಾಮಿ ಬ್ಯಾಂಕ್ ಅಧಿಕಾರಿಗಳನ್ನು ಪ್ರಶ್ನಿಸಿದರು.

“ಕೇಂದ್ರ ಸರ್ಕಾರ ಪ್ರತಿ ವರ್ಷವೂ ಸೌಲಭ್ಯ ಯೋಜನೆಗೆ ಅನುದಾನವನ್ನು ಮೀಸಲಿಡುತ್ತದೆ. ಆದರೆ, ಕಳೆದ ವರ್ಷಗಳಲ್ಲಿ ಬ್ಯಾಂಕುಗಳಲ್ಲಿ ಸರ್ಕಾರದಿಂದ ಇರಿಸಿದ ಠೇವಣ ಹಣವೇ ಬಳಕೆಯಾಗಿಲ್ಲ. ಇದು ವಿರ್ಪಯಾಸದ ಸಂಗತಿಯಾಗಿದೆ. ಬ್ಯಾಂಕುಗಳು ಸರ್ಕಾರದ ಯೋಜನೆಗಳನ್ನು ಜನರಿಗೆ ತಲುಪಿಸುವಲ್ಲಿ ನಿರ್ಲಕ್ಷ್ಯ ಧೋರಣೆ ತೋರಿಸುತ್ತಿವೆ. ಇದು ಸಲ್ಲದು, ಯೋಜನೆಗಳನ್ನು ಜನರಿಗೆ ಬ್ಯಾಂಕುಗಳು ತಲುಪಿಸದಿದ್ದರೆ, ನಿಗಮಗಳಿಂದ ಇರಿಸಿದ ಠೇವಣಿ ಹಣವನ್ನು ಹಿಂಪಡೆದು ಬೇರೆ ಮಾರ್ಗವಾಗಿ ಜನರಿಗೆ ತಲುಪಿಸುವ ಬಗ್ಗೆ ಚಿಂತಿಸಬೇಕಾಗುವುದು” ಎಂದರು.

“ನಾಯಕರು, ಬೋವಿ, ಗೊಲ್ಲರು ಹಾಗೂ ಕುರುಬ ಸಮುದಾಯಗಳಿಗೆ ಸೇರಿದಂತೆ ಹಲವು ಸಮುದಾಯಗಳು ಸಾಂಪ್ರದಾಯಕವಾಗಿ ಕುರಿ ಸಾಕಾಣಿಕೆ ಮಾಡಿಕೊಂಡು ಬರುತ್ತಿದ್ದಾರೆ. ಹೊಸದಾಗಿ ಕುರಿ ಮೇಕೆ ಸಾಕಾಣಿಕೆ ಮಾಡಲು ಅಥವಾ 50 ಇಚ್ಛಿಸುವವರಿಗೆ 25 ಕುರಿಗಳ ಘಟಕಕ್ಕೆ ಕುರಿ, ಮೇಕೆ ಸಾಕಾಣಿಕೆ ಸಾಲವನ್ನು ಮಂಜೂರು ಮಾಡಬೇಕು.ಈ ಸಾಲಗಳನ್ನು ಮಂಜೂರು ಮಾಡುವಾಗ ಅಗತ್ಯ ದಾಖಲೆಗಳನ್ನು ಹೊರತುಪಡಿಸಿ, ಅನಗತ್ಯವಾಗಿ ಹೆಚ್ಚಿನ ದಾಖಲೆಗಳನ್ನು ಕೇಳಬಾರದು. ಪ್ರತಿ ಬ್ಯಾಂಕ್ ಶಾಖೆಗಳಿಗೂ ಗುರಿ ನಿಗದಿಪಡಿಸಿ, ಫಲಾನುಭವಿಗಳನ್ನು ಆಯ್ಕೆ ಮಾಡಿ ಯೋಜನೆಗಳನ್ನು ಅನುಷ್ಠಾನಗೊಳಿಸಬೇಕು” ಎಂದರು.

ಸಭೆಯಲ್ಲಿ ದಾವಣಗೆರೆ ಜಿಲ್ಲಾಧಿಕಾರಿ ದಿವ್ಯಪ್ರಭು ಜಿ.ಆರ್, ತುಮಕೂರು ಜಿಲ್ಲಾಧಿಕಾರಿ ಕೆ.ಶ್ರೀನಿವಾಸ, ತುಮಕೂರು ಜಿ.ಪಂ. ಸಿಇಓ ಪ್ರಭು.ಜಿ, ದಾವಣಗೆರೆ ಅಪರ ಜಿಲ್ಲಾಧಿಕಾರಿ ಪಿ.ಎನ್. ಲೋಕೇಶ್ ಪರಿಶಿಷ್ಟ ಜಾತಿ ರಾಷ್ಟ್ರೀಯ ಹಣಕಾಸು ಹಾಗೂ ಅಭಿವೃದ್ಧಿ ನಿಗಮದ ರಂಜನೀಶ್ ಕುಮಾರ್ ಜೆನ್ಹಾ, ರಾಜ್ಯ ಮಟ್ಟದ ಬ್ಯಾಂಕ‌ ಸಮಿತಿ ಪ್ರಧಾನ ವ್ಯವಸ್ಥಾಪಕ ಪ್ರವೀಣ್ ಕುಮಾರ್, ಕರ್ನಾಟಕ ಗ್ರಾಮೀಣ ಬ್ಯಾಂಕ್ ಪ್ರಧಾನ ವ್ಯವಸ್ಥಾಪಕ ಜಿ.ಆರ್.ದಿಲ್ ಸೇರಿದಂತೆ ಜಿಲ್ಲಾ ಮಟ್ಟದ ಅಧಿಕಾರಿಗಳು, ವಿವಿಧ ಬ್ಯಾಂಕುಗಳು ಪ್ರಧಾನ ವ್ಯವಸ್ಥಾಪಕರು ಇದ್ದರು.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

Download Eedina App Android / iOS

X