ಬೆಂಗಳೂರು | ಕೋರಮಂಗಲದ ಪಬ್‌ವೊಂದರಲ್ಲಿ ಬೆಂಕಿ ಅವಘಡ

Date:

Advertisements

ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಕಳೆದ ಒಂದು ತಿಂಗಳಿನಲ್ಲಿ ಸಾಲು ಸಾಲು ಬೆಂಕಿ ಅವಘಡಗಳು ಸಂಭವಿಸಿದ್ದು, ಇದೀಗ ನಗರದ ಕೋರಮಂಗಲದಲ್ಲಿರುವ ಪಬ್‌ವೊಂದರಲ್ಲಿ ಬೆಂಕಿ ಅವಘಡ ಸಂಭವಿಸಿದೆ.

ಕೋರಮಂಗಲದ ತಾವರೆಕರೆ ಮುಖ್ಯರಸ್ತೆಯಲ್ಲಿರುವ ಫೋರಂ ಮಾಲ್‌ ಎದುರಿಗಿರುವ ಕಟ್ಟಡದ ನಾಲ್ಕನೇ ಅಂತಸ್ತಿನಲ್ಲಿರುವ ಪಬ್‌ಗೆ ಬೆಂಕಿ ಹೊತ್ತಿದೆ. ಅಲ್ಲದೇ, ಪಬ್‌ನ ಪಕ್ಕದ ಕಟ್ಟಡಗಳಿಗೂ ಬೆಂಕಿ ವ್ಯಾಪಿಸಿದೆ. ನಾಲ್ಕರಿಂದ ಐದು ವಾಹನಗಳು ಸುಟ್ಟು ಕರಕಲಾಗಿವೆ.

ಕಟ್ಟಡದ ನಾಲ್ಕನೇ ಅಂತಸ್ತಿನಲ್ಲಿರುವ ಪಬ್‌ನಲ್ಲಿ ಅಗ್ನಿ ಅವಘಡ ಸಂಭವಿಸಿದ್ದು, ಕಟ್ಟಡದ ಕೆಳ ಮಹಡಿಯಲ್ಲಿರುವ ನೆಕ್ಸಾ ಕಾರ್​ ಷೋ ರೂಂನಲ್ಲಿಯೂ ಬೆಂಕಿ ಕಾಣಿಸಿಕೊಂಡಿದೆ. ಕಟ್ಟಡದ ಎರಡು ಮತ್ತು ಮೂರನೇ ಫ್ಲೋರ್​​ನಲ್ಲಿ ಹುಕ್ಕಾ ಬಾರ್ ನಡೆಸಲಾಗುತ್ತಿದೆ ಎನ್ನಲಾಗಿದೆ.

Advertisements

ಘಟನೆ ಬಗ್ಗೆ ಮಾಹಿತಿ ತಿಳಿದ ಕೂಡಲೇ ಬೆಂಕಿ ನಂದಿಸಲು ಅಗ್ನಿ ಶಾಮಕ ದಳದ ಮೂರು ವಾಹನಗಳು ಸ್ಥಳಕ್ಕೆ ಆಗಮಿಸಿದ್ದು, ಬೆಂಕಿ ನಂದಿಸಲು ಅಗ್ನಿ ಶಾಮಕ ದಳದ ಸಿಬ್ಬಂದಿ ಹರಸಾಹಸ ಪಡುತ್ತಿದ್ದಾರೆ.

ಬೆಂಕಿ ವ್ಯಾಪಕವಾಗಿ ಹಬ್ಬಿದ ಹಿನ್ನೆಲೆ, ವ್ಯಕ್ತಿಯೋರ್ವ ಜೀವ ಉಳಿಸಿಕ್ಕೊಳ್ಳಲು ನಾಲ್ಕನೇ ಮಹಡಿಯಿಂದ ಹಾರಿ ಬಿದ್ದಿದ್ದಾರೆ. ಸದ್ಯ ವ್ಯಕ್ತಿಯನ್ನು ಆಟೋ ಮೂಲಕ ಸ್ಥಳೀಯ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.

ಈ ಸುದ್ದಿ ಓದಿದ್ದೀರಾ? ಅತ್ತಿಬೆಲೆ ಅಗ್ನಿ ದುರಂತ | ಮತ್ತೋರ್ವ ಗಾಯಾಳು ಸಾವು; ಮೃತರ ಸಂಖ್ಯೆ 17ಕ್ಕೆ ಏರಿಕೆ

“ಬೆಳಗ್ಗೆ ಸುಮಾರು 11 ಗಂಟೆಗೆ ಪಬ್‌ನಲ್ಲಿ ಸ್ಪಾರ್ಕ್‌ ಕಾಣಿಸಿತು. ಆಗಲೇ ಎಚ್ಚೆತ್ತು ಎಲ್ಲ ಸಿಬ್ಬಂದಿಗಳನ್ನು ಹೊರಗೆ ಕರೆಸಿದೆವು. ಸ್ಪಾರ್ಕ್‌ ಆದ ತಕ್ಷಣ ಎರಡು ಸಿಲಿಂಡರ್ ಬ್ಲಾಸ್ಟ್‌ ಆಗಿವೆ” ಎಂದು ಪ್ರತ್ಯಕ್ಷದರ್ಶಿಗಳು ಹೇಳಿದ್ದಾರೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದೀಕ್ಷಾ ಭೂಮಿ ಯಾತ್ರೆಗೆ ಡಾ. ಬಿ.ಆರ್.ಅಂಬೇಡ್ಕರ್ ಅನುಯಾಯಿಗಳ ನಿಯೋಜನೆ – ಅರ್ಜಿ ಆಹ್ವಾನ

ಸಮಾಜ ಕಲ್ಯಾಣ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಪರಿಶಿಷ್ಟ ಜಾತಿ ಮತ್ತು...

ಉಡುಪಿ | ಪರಿಸರ ಸ್ನೇಹಿ ಗೌರಿ, ಗಣೇಶ ಹಬ್ಬ ಆಚರಿಸಿ

ಪ್ರಸಕ್ತ ಸಾಲಿನ ಸ್ವರ್ಣಗೌರಿ ಹಾಗೂ ವರಸಿದ್ದಿ ವಿನಾಯಕ ಚತುರ್ಥಿ ಹಬ್ಬವು ಸಮೀಪಿಸುತ್ತಿದ್ದು....

ಜಾತಿ ನಿಂದನೆ ಆರೋಪ: ಬಿಗ್‌ಬಾಸ್‌ನ ಮಾಜಿ ಸ್ಪರ್ಧಿ ವಕೀಲ ಕೆ ಎನ್ ಜಗದೀಶ್ ಬಂಧನ

ಜಾತಿ ನಿಂದನೆ ಮಾಡಿದ ಆರೋಪದಲ್ಲಿ ಬಿಗ್‌ ಬಾಸ್‌ನಲ್ಲಿ ಸ್ಪರ್ಧಿಸಿದ ಬಳಿಕ ಸೋಷಿಯಲ್...

ಕಲಬುರಗಿ | ಚುನಾವಣಾ ನೀತಿ ಬದಲಾಗಬೇಕೆಂಬುದು ಸಿಪಿಐ(ಎಂ) ನಿಲುವು : ಕೆ.ಪ್ರಕಾಶ

ದೇಶದಲ್ಲಿ ಸರ್ವಾಧಿಕಾರವು ತಾಂಡವವಾಡುತ್ತಿದ್ದು, ಅಘೋಷಿತವಾಗಿ ತುರ್ತುಸ್ಥಿತಿ ಎದುರಿಸುತ್ತಿದ್ದೇವೆ. ಚುನಾವಣೆ ಆಯೋಗದ ಇಂದಿನ...

Download Eedina App Android / iOS

X