ರಾಜ್ಯಾದ್ಯಂತ ಪಟಾಕಿ ನಿಷೇಧಕ್ಕೆ ಚಿಂತನೆ: ಗೃಹ ಸಚಿವ ಜಿ ಪರಮೇಶ್ವರ್

Date:

Advertisements

ಅತ್ತಿಬೆಲೆ ಪಟಾಕಿ ದುರಂತ ಪ್ರಕರಣ ನಮಗೆ ಪಾಠ ಕಲಿಸಿದ್ದು, ಹಾಗಾಗಿ ರಾಜ್ಯಾದ್ಯಂತ ಪಟಾಕಿ ನಿಷೇಧಕ್ಕೆ ಚಿಂತನೆ ಮಾಡಲಾಗುವುದು ಎಂದು ಗೃಹ ಸಚಿವ ಜಿ. ಪರಮೇಶ್ವರ್ ಹೇಳಿದ್ದಾರೆ.

ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, “ಸಾಧಕ ಬಾಧಕ ಗಮನಿಸಿ ಮೊದಲ ಬಾರಿಗೆ ಬೆಂಗಳೂರಿನಲ್ಲಿ ಪಟಾಕಿ ನಿಷೇಧ ಪ್ರಾಯೋಗಿಕ ಜಾರಿಗೊಳಿಸಿ ಯಶಸ್ವಿಯಾದರೆ ಇಡೀ ರಾಜ್ಯಕ್ಕೆ ವಿಸ್ತರಿಸಲಾಗುವುದು. ಇತ್ತೀಚೆಗೆ ಪಟಾಕಿ ಅವಘಡಗಳಲ್ಲಿ ಅಮಾಯಕರು ಮೃತಪಟ್ಟಿದ್ದಾರೆ. ದೆಹಲಿ ಮಾದರಿಯಲ್ಲಿ ರಾಜ್ಯದಲ್ಲಿ ಪಟಾಕಿ ನಿಷೇಧಕ್ಕೆ ಚಿಂತನೆ ಮಾಡಲಾಗುವುದು” ಎಂದು ಜಿ ಪರಮೇಶ್ವರ್ ಹೇಳಿದ್ದಾರೆ.

ಈ ಸುದ್ದಿ ಓದಿದ್ದೀರಾ? ವಿಷಾಹಾರ ಸೇವನೆ: ಅಲಿಗಢ ಮುಸ್ಲಿಂ ವಿವಿಯ 300ಕ್ಕೂ ಹೆಚ್ಚು ವಿದ್ಯಾರ್ಥಿನಿಯರು ಅಸ್ವಸ್ಥ

Advertisements

ಅಕ್ರಮ ದಸ್ತಾನು ಪರಿಶೀಲನೆ ವೇಳೆ ತಹಸೀಲ್ದಾರ್ ಸೇರಿದಂತೆ ಕಂದಾಯ ಅಧಿಕಾರಿಗಳು, ಪೊಲೀಸ್, ಅಗ್ನಿಶಾಮಕ ಮತ್ತು ಸಾರಿಗೆ ಅಧಿಕಾರಿಗಳು ನಿರ್ಲಕ್ಷ್ಯ ವಹಿಸಿದ್ದು, ಗಡಿಯಲ್ಲಿ ಆರ್‌ಟಿಓ ಅಧಿಕಾರಿಗಳು ಪರಿಶೀಲಿಸಿ ಕ್ರಮ ವಹಿಸಿಲ್ಲ. ಹಾಗಾಗಿ ತಹಸೀಲ್ದಾರ್ ಸೇರಿದಂತೆ ಹಲವು ಅಧಿಕಾರಿಗಳ ಮೇಲೆ ಕ್ರಮ ಕೈಗೊಳ್ಳಲಾಗುವುದು ಎಂದು ಪರಮೇಶ್ವರ್ ಹೇಳಿದ್ದಾರೆ.

ದುರಂತ ನಡೆದ ಸ್ಥಳಕ್ಕೆ ಭೇಟಿ

ಅತ್ತಿಬೆಲೆ ಪಟಾಕಿ ಗೋದಾಮಿನಲ್ಲಿ ಅಗ್ನಿ ದುರಂತ ನಡೆದ ಸ್ಥಳಕ್ಕೆ ಗೃಹ ಇಲಾಖೆ ಸಚಿವ ಪರಮೇಶ್ವರ್​ ಇಂದು ಭೇಟಿ ಮಾಡಿದ್ದು, ಘಟನೆ ಅಗ್ನಿಶಾಮಕ ಡಿಐಜಿ ಪಂತ್, ಐಜಿಪಿ ರವಿಕಾಂತೇಗೌಡರಿಂದ ಮಾಹಿತಿ ಪಡೆದುಕೊಂಡಿದ್ದಾರೆ.​ ಮಳಿಗೆ ಮಾಲೀಕನ ಬಗ್ಗೆ ಡಿಸಿ ದಯಾನಂದ್ ಅವರಿಂದ ಮಾಹಿತಿ ಪಡೆದರು.

ಸ್ಥಳದಲ್ಲಿ ಬೆಂಗಳೂರು ಜಿಲ್ಲಾಧಿಕಾರಿ ದಯಾನಂದ್, ಎಎಸ್ಪಿ ಪುರುಷೋತ್ತಮ್, ಡಿವೈಎಸ್ಪಿ ಮೋಹನ್, ತಹಸೀಲ್ದಾರ್ ಶಿವಪ್ಪ ಲಮ್ಹಾಣಿ ಸೇರಿದಂತೆ ಪ್ರಮುಖರು ಹಾಜರಿದ್ದರು.

ಅತ್ತಿಬೆಲೆ ಪಟಾಕಿ ದುರಂತದಲ್ಲಿ 17 ಮಂದಿ ಸಾವು ವಿಷಾದನೀಯ. ಪಟಾಕಿ ಮಳಿಗೆ ಮಾಲೀಕರು 2017 ರಿಂದ 2022 ವರೆಗೆ ನೂತನ ಪರವಾನಗಿ ನವೀಕರಣ ನಡುವೆ ನಕಲಿ ಲೈಸೆನ್ಸ್ ಸೃಷ್ಟಿ ಮಾಡಿದ್ದಾರೆ. ಕೇವಲ 1 ಸಾವಿರ ಕೆಜಿ ಪಟಾಕಿ ಮಾರಾಟಕ್ಕೆ ಪರವಾನಗಿ ನೀಡಲಾಗಿದೆ. ಆದರೆ 50 ಟನ್​ಗೂ ಅಧಿಕ ಪಟಾಕಿ ಅಕ್ರಮವಾಗಿ ದಸ್ತಾನು ಮಾಡಲಾಗಿತ್ತು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೂಕರ್ ಪ್ರಶಸ್ತಿ ಪುರಸ್ಕೃತೆ ಬಾನು‌ ಮುಷ್ತಾಕ್‌ರಿಂದ ಮೈಸೂರು ದಸರಾ ಉದ್ಘಾಟನೆ: ಸಿಎಂ ಸಿದ್ದರಾಮಯ್ಯ

ಈ ಬಾರಿಯ 'ಮೈಸೂರು ದಸರಾ' ಉದ್ಘಾಟನೆಯನ್ನು ಬೂಕರ್ ಪ್ರಶಸ್ತಿ ವಿಜೇತೆ ಲೇಖಕಿ...

ದಸರಾ ಉದ್ಘಾಟನೆಗೆ ಸೋನಿಯಾ ಗಾಂಧಿಗೆ ಆಹ್ವಾನ ಸಂಪೂರ್ಣ ಸುಳ್ಳು: ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ

ಈ ಬಾರಿಯ ದಸರಾ ಉದ್ಘಾಟನೆಗೆ ಕಾಂಗ್ರೆಸ್ ಅಧಿನಾಯಕಿ ಸೋನಿಯಾ ಗಾಂಧಿಯನ್ನು ಆಹ್ವಾನಿಸಲಾಗಿದೆ...

BREAKING NEWS | ಬೆಂಗಳೂರು ನಗರ ಸಿವಿಲ್ ನ್ಯಾಯಾಲಯಕ್ಕೆ ಬಾಂಬ್​ ಬೆದರಿಕೆ ಇಮೇಲ್

ಬೆಂಗಳೂರು ನಗರ ಸಿವಿಲ್ ನ್ಯಾಯಾಲಯಕ್ಕೆ ಬಾಂಬ್​ ಬೆದರಿಕೆ ಇಮೇಲ್ ಬಂದಿದೆ ಎಂದು...

Download Eedina App Android / iOS

X