ಭಾರತವನ್ನು ಸೋಲಿಸಿದರೆ ‘ಡೇಟ್’: ಬಾಂಗ್ಲಾ ಕ್ರಿಕೆಟಿಗರಿಗೆ ಪಾಕ್ ನಟಿಯಿಂದ ಆಫರ್!

Date:

Advertisements

ಏಕದಿನ ವಿಶ್ವಕಪ್ ಟೂರ್ನಿಯಲ್ಲಿ ಅ.19(ಇಂದು) ಭಾರತ- ಬಾಂಗ್ಲಾದೇಶ ತಂಡದೊಂದಿಗೆ ಸೆಣಸಾಡಲಿದೆ. ಈ ನಡುವೆಯೇ ಪಾಕಿಸ್ತಾನದ ನಟಿ ಸೆಹರ್ ಶಿನ್ವಾರಿ ಅವರು ಭಾರತವನ್ನು ಸೋಲಿಸಿದರೆ ನಿಮ್ಮೊಂದಿಗೆ ಡೇಟ್‌ಗೆ ಬರುತ್ತೇನೆ ಎಂದು ಬಾಂಗ್ಲಾ ಕ್ರಿಕೆಟಿಗರಿಗೆ ಡೇಟಿಂಗ್ ಆಫರ್ ನೀಡಿದ್ದಾರೆ.

ಈ ಕುರಿತು ಅವರು ಟ್ವಿಟ್ಟರ್‌ನಲ್ಲಿ ಪೋಸ್ಟ್ ಹಾಕಿಕೊಂಡಿದ್ದು, ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿದೆ.

ಟ್ವೀಟ್‌ನಲ್ಲಿ, ‘ನನ್ನ ಬಂಗಾಳಿ ಸಹೋದರರು ಮುಂದಿನ ಪಂದ್ಯದಲ್ಲಿ ಸೇಡು ತೀರಿಸಿಕೊಳ್ಳುತ್ತಾರೆ. ಅವರ ತಂಡ ಭಾರತವನ್ನು ಸೋಲಿಸುವಲ್ಲಿ ಯಶಸ್ವಿಯಾದರೆ ನಾನು ಢಾಕಾಕ್ಕೆ ಹೋಗಿ ಬಾಂಗ್ಲಾ ಹುಡುಗರೊಂದಿಗೆ ಫಿಶ್ ಡಿನ್ನರ್ ಡೇಟ್(ಮೀನೂಟ) ಮಾಡುತ್ತೇನೆ’ ಎಂದು ಪಾಕ್ ನಟಿ ಬರೆದುಕೊಂಡಿದ್ದಾರೆ.

Advertisements

ಸೆಹರ್ ಶಿನ್ವಾರಿ ಅವರ ಈ ಪೋಸ್ಟ್ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಈ ಮೂಲಕ ಬಾಂಗ್ಲಾ ಕ್ರಿಕೆಟಿಗರಿಗೆ ಪಾಕ್ ನಟಿ ಬೆಂಬಲಿಸಿದ್ದಾರೆ. ಗುಜರಾತ್‌ನ ಅಹಮದಾಬಾದ್‌ನಲ್ಲಿ ನಡೆದಿದ್ದ ಕಳೆದ ಪಂದ್ಯದಲ್ಲಿ ಟೀಮ್ ಇಂಡಿಯಾವು, ಪಾಕಿಸ್ತಾನ ತಂಡವನ್ನು ಹೀನಾಯವಾಗಿ ಸೋಲಿಸಿತ್ತು. ಹೀಗಾಗಿ, ಇದಕ್ಕೆ ಬಾಂಗ್ಲಾದೇಶ ತಂಡ ಪ್ರತೀಕಾರ ತೀರಿಸುವಂತೆ ನಟಿ ಕರೆಕೊಟ್ಟಿದ್ದಾರೆ.

ಅ.19(ಇಂದು) ಪುಣೆಯಲ್ಲಿ ಭಾರತ- ಬಾಂಗ್ಲಾದೇಶ ನಡುವಿನ ಪಂದ್ಯ ನಡೆಯಲಿದೆ. ಭಾರತ ತಂಡ ಆಡಿದ ಮೂರು ಪಂದ್ಯಗಳನ್ನು ಗೆದ್ದಿದೆ. ಇದೀಗ ಭಾರತಕ್ಕೆ ಸೆಮಿಫೈನಲ್ ಹಾದಿ ಸುಲಭವಾಗುತ್ತಿದೆ. ಬಾಂಗ್ಲಾದೇಶದ ವಿರುದ್ಧವೂ ಭಾರತ ಗೆದ್ದರೆ ಭಾರತಕ್ಕೆ ಸೆಮಿಫೈನಲ್ ಹಾದಿ ಇನ್ನಷ್ಟು ಸುಲಭವಾಗಲಿದೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬುಲಾ ಚೌಧರಿ ಪದ್ಮಶ್ರೀ ಪದಕ ಕಳವು: ‘ಎಲ್ಲವನ್ನೂ ಕಳೆದುಕೊಂಡೆ’ ಎಂದ ಈಜುಪಟು

ಪಶ್ಚಿಮ ಬಂಗಾಳದ ಹೂಗ್ಲಿ ಜಿಲ್ಲೆಯ ತಮ್ಮ ಪೂರ್ವಜರ ಮನೆಯಿಂದ ಪದ್ಮಶ್ರೀ ಪದಕ...

ಕೇರಳ | ಟ್ರಕ್‌ಗೆ ಕಾರು ಡಿಕ್ಕಿ; ಮಲಯಾಳಂ ನಟನಿಗೆ ಗಾಯ

ಮಲಯಾಳಂ ನಟ ಬಿಜು ಕುಟ್ಟನ್‌ ಅವರು ಇಂದು ರಸ್ತೆ ಅಪಘಾತದಲ್ಲಿ ಗಾಯಗೊಂಡಿರುವ...

RCBಯದ್ದು ಕಳ್ಳ ಒಪ್ಪಂದ; ಆರ್‌ ಅಶ್ವಿನ್ ಬಹಿರಂಗ ಟೀಕೆ

2025ರ ಐಪಿಎಲ್‌ ಟೂರ್ನಿಗಾಗಿ ನಡೆದ ಮೆಗಾ ಹರಾಜಿನ ಸಮಯದಲ್ಲಿ ಆಸ್ಟ್ರೇಲಿಯಾದ ಬ್ಯಾಟ್ಸ್‌ಮನ್...

‘ಶೋಲೆ’ @ 50: ಇವತ್ತಿಗೂ ಅದೇ ತಾಜಾತನ, ಅದೇ ಆಕರ್ಷಣೆ, ಅದೇ ಕುತೂಹಲ

'ಶೋಲೆ' ಚಿತ್ರ ಬಿಡುಗಡೆಯಾಗಿ 50 ವರ್ಷಗಳಾದರೂ ಇವತ್ತಿಗೂ ಅದೇ ತಾಜಾತನ, ಅದೇ...

Download Eedina App Android / iOS

X