ರಾಮನಗರ | ಜಿಲ್ಲಾಧಿಕಾರಿ ಜನತಾದರ್ಶನ: ಜನರಿಲ್ಲದೆ ಖಾಲಿ ಹೊಡೆಯುತ್ತಿದ್ದ ಸಭಾಂಗಣ

Date:

Advertisements

ರಾಮನಗರ ಜಿಲ್ಲೆಯ ಕನಕಪುರದ ಅಂಬೇಡ್ಕರ್ ಭವನದಲ್ಲಿ ಅ.18ರಂದು ಜಿಲ್ಲಾಧಿಕಾರಿ ನೇತೃತ್ವದಲ್ಲಿ ಪ್ರಥಮ ಜನತಾದರ್ಶನ ಕಾರ್ಯಕ್ರಮ ನಡೆದಿದೆ. ಆದರೆ, ಜನರೇ ಇಲ್ಲದೆ ಸಭಾಭವನ ಖಾಲಿ ಹೊಡೆದಿದ್ದು, ಕೇವಲ 27 ಅರ್ಜಿ ಸಲ್ಲಿಕೆಯಾಗಿವೆ.

ಅರ್ಜಿ ಹಿಡಿದು ಜನ ಬರಬೇಕಿದ್ದ ಜಾಗದಲ್ಲಿ, ಕಡತಗಳೊಂದಿಗೆ ಬಂದಿದ್ದ ಅಧಿಕಾರಿಗಳ ಸಂಖ್ಯೆಯೇ ಹೆಚ್ಚಿತ್ತು. ಹೀಗಾಗಿ, ಸಾರ್ವಜನಿಕರು ದೂರದ ಜಿಲ್ಲಾ ಕೇಂದ್ರಕ್ಕೆ ಬರುವ ಬದಲು ಜಿಲ್ಲಾಡಳಿತವೇ ಅವರಿಗೆ ಹತ್ತಿರವಾಗುವ ಸ್ಥಳಕ್ಕೆ ಹೋಗಿ ಜನರ ಸಮಸ್ಯೆ ಬಗೆಹರಿಸಬೇಕೆಂಬ ಆಶಯದ ʼಜನತಾದರ್ಶನʼ ವಿಫಲವಾಗಿದೆ. ತಮ್ಮೂರಿಗೆ ಜಿಲ್ಲಾಧಿಕಾರಿ ಸೇರಿದಂತೆ ಇಡೀ ಜಿಲ್ಲಾಡಳಿತವೇ ಬಂದಿದ್ದರೂ ಸಹ, ಜನ ತಮ್ಮ ಸಮಸ್ಯೆಗಳನ್ನು ಹೊತ್ತು ತರಲಿಲ್ಲ. ರೈತರು ಮತ್ತು ಕೆಲ ಸಂಘಟನೆಗಳ ಬೆರಣಿಕೆಯ ಮುಖಂಡರು ಜಿಲ್ಲಾಧಿಕಾರಿ ಡಾ. ಅವಿನಾಶ್ ಮೆನನ್ ರಾಜೇಂದ್ರನ್ ಅವರಿಗೆ ತಮ್ಮ ಅಹವಾಲಿನ ಅರ್ಜಿ ಸಲ್ಲಿಸಿದರು.

ಓಎಪಿ, ವಿಧವಾ ವೇತನ, ಅಂಗವಿಕಲ ಭತ್ಯೆ, ಸರ್ಕಾರದ ಗ್ಯಾರಂಟಿ ಯೋಜನೆ ಸವಲತ್ತಿಗಾಗಿ ಜನ ಅಲೆದಾಡಿದರೂ ಅಧಿಕಾರಿಗಳಿಂದ ಪರಿಹಾರ ಸಿಕ್ಕಿಲ್ಲ. ಈ ಅಲೆದಾಟ ತಪ್ಪಿಸಲು ಕ್ರಮ ತೆಗೆದುಕೊಳ್ಳಿ ಎಂದು ಅಚ್ಚರಿ ಸ್ವಾಮಿ ಒತ್ತಾಯಿಸಿದರು.

Advertisements

ರೈತ ಮುಖಂಡ ಅಂತೋನಿ ರಾಜ್, ಹಾರೋಬೆಲೆ ಗ್ರಾಮದಲ್ಲಿ ಪ್ರಯಾಣಿಕರಿಗಾಗಿ ನಿರ್ಮಾಣ ಮಾಡಿರುವ ತಂಪುತನವನ್ನು ಅಕ್ರಮವಾಗಿ ರಸಗೊಬ್ಬರ ಮಳಿಗೆ ಮಾಡಿದ್ದಾರೆ. ಇದನ್ನು ವಿರೋಧಿಸಿ ಪ್ರತಿಭಟನೆ ನಡೆದಿದೆ. ಆದರೆ, ನ್ಯಾಯ ದೊರೆತಿಲ್ಲ. ಅಧಿಕಾರಿಗಳಿಂದ ತಪ್ಪುಗಳಾಗುತ್ತಿರುವುದು ಬೇಸರ ಎಂದು ಅಸಮಾಧಾನ ಹೊರಹಾಕಿದರು.

ದಮ್ಮ ದೀವಿಗೆ ಚಾರಿಟೇಬಲ್ ಟ್ರಸ್ಟ್ ಅಧ್ಯಕ್ಷ ಮಲ್ಲಿಕಾರ್ಜುನ್, ಎಷ್ಟೋ ಗ್ರಾಮಗಳಲ್ಲಿ ದಲಿತರಿಗೆ ಸ್ಮಶಾನಗಳಿಲ್ಲ. ಸ್ಮಶಾನ ಕಲ್ಪಿಸುವ ಅವಕಾಶಗಳಿದ್ದರೂ ತಾಲೂಕು ಆಡಳಿತವಾಗಲಿ, ಜಿಲ್ಲಾಡಳಿತವಾಗಲಿ ಈ ಬಗ್ಗೆ ಕಾಳಜಿ ವಹಿಸುತ್ತಿಲ್ಲ. ತಾಲೂಕಿನಲ್ಲಿ ಆಗುತ್ತಿರುವ ಅನ್ಯಾಯ ಮತ್ತು ಅಕ್ರಮಗಳ ವಿರುದ್ಧ ಹೋರಾಟಗಾರರು ಹೋರಾಟ ನಡೆಸುತ್ತಿದ್ದಾರೆ. ಮಾಧ್ಯಮಗಳಲ್ಲಿ ಸಹ ಈ ಬಗ್ಗೆ ವರದಿ ಪ್ರಕಟವಾಗಿದ್ದರೂ ಜಿಲ್ಲಾಡಳಿತ ಯಾವುದೇ ಕ್ರಮ ಕೈಗೊಂಡಿಲ್ಲ. ಅನ್ಯಾಯಕ್ಕೆ ನ್ಯಾಯ ಒದಗಿಸಿಲ್ಲ ಎಂದು ದೂರಿದರು.

ಬೆಳಗ್ಗೆ 10:30ಕ್ಕೆ ಆರಂಭವಾಗಬೇಕಿದ್ದ ಕಾರ್ಯಕ್ರಮ ಮಧ್ಯಾಹ್ನ ಆರಂಭವಾಯಿತು. ಜಿಲ್ಲಾಧಿಕಾರಿ ಡಾಕ್ಟರ್ ಅವಿನಾಶ್ ಮೆನನ್ ರಾಜೇಂದ್ರನ್ ಅವರು ತಾಲೂಕು ಕಚೇರಿಯಿಂದ, ಮಧ್ಯಾಹ್ನ 12ಕ್ಕೆ ಕಾರ್ಯಕ್ರಮದ ಜಾಗಕ್ಕೆ ಬಂದರು. ಹೆಚ್ಚಿನ ಅರ್ಜಿಗಳು ಬಾರದಿದ್ದರಿಂದ ಕಾರ್ಯಕ್ರಮವನ್ನು ಬೇಗನೆ ಮುಕ್ತಾಯಗೊಳಿಸಲಾಯಿತು.

ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ದಿಗ್ವಿಜಯ ಬೋಡಿಗೆ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕಾರ್ತಿಕ್ ರೆಡ್ಡಿ, ರಾಮನಗರ ಉಪ ವಿಭಾಗಾಧಿಕಾರಿ ಡಾ.ಸ್ಮಿತಾ, ತಾಲೂಕು ಪಂಚಾಯಿತಿ ಭೈರಪ್ಪ, ಜಿಲ್ಲಾ ಅರಣ್ಯ ಸಂರಕ್ಷಣಾಧಿಕಾರಿ ರಾಮಕೃಷ್ಣ, ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಸತೀಶ ಸೇರಿದಂತೆ ಜಿಲ್ಲಾ ಹಾಗೂ ತಾಲೂಕ ಮಟ್ಟದ ಅಧಿಕಾರಿಗಳು ಸಭೆಯಲ್ಲಿ ಇದ್ದರು.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಯಾದಗಿರಿ | ಅತಿವೃಷ್ಟಿಯಿಂದ ಬೆಳೆ ಹಾನಿ: ರೈತರಿಗೆ ಪರಿಹಾರ ನೀಡುವಂತೆ ಆಗ್ರಹ

ಯಾದಗಿರಿ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ಬೆಳೆ ಹಾನಿದ ರೈತರಿಗೆ ಸಮೀಕ್ಷೆ ನಡೆಸಿ ಶೀಘ್ರದಲ್ಲಿ...

ಗುಬ್ಬಿ | ಜನಪದ ಸಾಹಿತ್ಯ ಎಂದೆಂದಿಗೂ ಜೀವಂತ : ಡಾ.ಮೂರ್ತಿ ತಿಮ್ಮನಹಳ್ಳಿ

ಕನ್ನಡ ಸಾಹಿತ್ಯ ಲೋಕದಲ್ಲಿ ಹಲವು ಪ್ರಕಾರಗಳ ಪೈಕಿ ಜನಪದ ಸಾಹಿತ್ಯ...

ಉಡುಪಿ | ಮಹೇಶ್‌ ಶೆಟ್ಟಿ ತಿಮರೋಡಿ ಬೆಂಬಲಿಗರ ಕಾರು ಪೊಲೀಸ್‌ ಅಧೀಕ್ಷರಕ ಕಾರಿಗೆ ಡಿಕ್ಕಿ !

ಬೆಳ್ತಂಗಡಿಯ ಸೌಜನ್ಯ ಪರ ಹೋರಾಟಗಾರ ಮಹೇಶ್‌ ಶೆಟ್ಟಿ ತಿಮರೋಡಿಯವರನ್ನು ಬ್ರಹ್ಮಾವರ ಪೊಲೀಸ್...

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

Download Eedina App Android / iOS

X