ಬೆಂಗಳೂರು | ಮೆಟ್ರೋ ರೈಲಿನಲ್ಲಿ ಬ್ಯಾಕ್‌ಫ್ಲಿಪ್‌ ಮಾಡಿದ ವಿದ್ಯಾರ್ಥಿಗೆ ದಂಡ ವಿಧಿಸಿದ ಬಿಎಂಆರ್‌ಸಿಎಲ್‌

Date:

Advertisements

ರಾಜ್ಯ ರಾಜಧಾನಿ ಬೆಂಗಳೂರಿನ ನಮ್ಮ ಮೆಟ್ರೋದಲ್ಲಿ ಕಳೆದ ಕೆಲವು ದಿನಗಳಿಂದ ಒಂದಿಲ್ಲೊಂದು ವಿಚಾರಗಳಿಂದ ಸುದ್ದಿಯಲ್ಲಿದೆ. ಈ ಹಿಂದೆ ವಿದೇಶಿ ಯುಟ್ಯೂಬರ್‌ವೊಬ್ಬರು ನಮ್ಮ ಮೆಟ್ರೋ ರೈಲಿನಲ್ಲಿ ಟಿಕೆಟ್ ರಹಿತವಾಗಿ ಪ್ರಯಾಣಿಸುವುದು ಹೇಗೆ? ಎಂದು ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಹರಿಬಿಟ್ಟಿದ್ದರು. ಈ ಘಟನೆ ನಂತರ ಓರ್ವ ವ್ಯಕ್ತಿ ರೈಲಿನಲ್ಲಿ ಕುಳಿತು ಗೋಬಿ ಮಂಚೂರಿ ತಿನ್ನುತ್ತಿದ್ದು ಸುದ್ದಿ ಆಗಿತ್ತು. ಇದೀಗ ಮೆಟ್ರೋ ರೈಲಿನ ಹ್ಯಾಂಡಲ್ ಹಿಡಿದು ಬ್ಯಾಕ್‌ಫ್ಲಿಪ್‌ ಮಾಡಿದ ವಿದ್ಯಾರ್ಥಿಯೋರ್ವನಿಗೆ ಬೆಂಗಳೂರು ಮೆಟ್ರೋ ರೈಲು ನಿಗಮ (ಬಿಎಂಆರ್‌ಸಿಎಲ್‌) ದಂಡ ವಿಧಿಸಿದೆ.

ನಮ್ಮ ಮೆಟ್ರೋದಲ್ಲಿ ನಿತ್ಯ 7 ಲಕ್ಷ ಜನ ಪ್ರಯಾಣಿಸುತ್ತಾರೆ. ನಮ್ಮ ಮೆಟ್ರೋ ಸ್ವಚ್ಛತೆಗೆ ಸಾಕ್ಷಿಯಾಗಿದ್ದು, ಅದನ್ನು ಕಾಪಾಡಿಕೊಳ್ಳಲು ರೈಲಿನಲ್ಲಿ ಪ್ರಯಾಣಿಸುವ ಪ್ರಯಾಣಿಕರಿಗೆ ಬಿಎಂಆರ್‌ಸಿಎಲ್‌ ಕೆಲವು ನಿಯಮಗಳನ್ನು ರೂಪಿಸಿದೆ. ನಿಯಮಗಳನ್ನು ಉಲ್ಲಂಘನೆ ಮಾಡಿ ಉದ್ಧಟತನ ತೋರುವ ಜನರಿಗೆ ದಂಡ ಕೂಡ ವಿಧಿಸುತ್ತಿದೆ.

ಇದೀಗ ರೈಲಿನ ಹ್ಯಾಂಡಲ್‌ ಹಿಡಿದು ಬ್ಯಾಕ್‌ಫ್ಲಿಪ್‌ ಮಾಡಿದ ವಿದ್ಯಾರ್ಥಿಗೆ ₹500 ದಂಡ ವಿಧಿಸಿ ಜತೆಗೆ ಮುಂದೆ ಈ ರೀತಿ ನಡೆದುಕೊಳ್ಳದಂತೆ ಎಚ್ಚರಿಕೆ ನೀಡಿದೆ.

Advertisements

ಈ ಸುದ್ದಿ ಓದಿದ್ದೀರಾ? ಕೈಗೆ ಕೋಳ ಹಾಕಿದ್ದರೂ ಪೊಲೀಸರ ಮುಂದೆ ಸಿಗರೇಟ್ ಸೇದಿ ರೀಲ್ಸ್ ಮಾಡಿದ ರೌಡಿಶೀಟರ್

ಏನಿದು ಘಟನೆ?

ಖಾಸಗಿ ವಿಶ್ವವಿದ್ಯಾನಿಲಯದಲ್ಲಿ ದ್ವಿತೀಯ ವರ್ಷದ ಪದವಿ ವ್ಯಾಸಂಗ ಮಾಡುತ್ತಿರುವ ಮೂವರು ವಿದ್ಯಾರ್ಥಿಗಳು ಸೇರಿ ಕಳೆದ ಮಂಗಳವಾರ ರಾತ್ರಿ ಸುಮಾರು 11 ಗಂಟೆಗೆ ದಾಸರಹಳ್ಳಿ ಮೆಟ್ರೋ ನಿಲ್ದಾಣದಲ್ಲಿ ಹತ್ತಿ ಯಲಚೇನಹಳ್ಳಿ ಕಡೆಗೆ ಪ್ರಯಾಣ ಬೆಳೆಸಿದ್ದರು. ಜೆಪಿ ನಗರ ಮೆಟ್ರೋ ನಿಲ್ದಾಣ ದಾಟಿದ ಬಳಿಕ ಮೂವರ ಪೈಕಿ ಓರ್ವ ವಿದ್ಯಾರ್ಥಿ, ರೈಲಿನಲ್ಲಿ ನಿಂತ ಪ್ರಯಾಣಿಕರು ಹಿಡಿದುಕೊಳ್ಳುವ ಹ್ಯಾಂಡಲ್‌ ಹಿಡಿದು ಬ್ಯಾಕ್‌ಫ್ಲಿಪ್‌ ಮಾಡಿದ್ದಾನೆ.

ಈ ವೇಳೆ, ಆತನ ಉಳಿದ ಸ್ನೇಹಿತರು ವಿಡಿಯೋ ಮಾಡಿದ್ದಾರೆ. ವಿದ್ಯಾರ್ಥಿಗಳ ಈ ಹುಚ್ಚಾಟ ಪ್ರಯಾಣಿಕರಿಗೆ ಕಿರಿಕಿರಿ ಮತ್ತು ಕೋಪ ತರಿಸಿದೆ. ಪ್ರಯಾಣಿಕರು ವಿಡಿಯೋ ಮಾಡಿ ಬಿಎಂಆರ್‌ಸಿಎಲ್‌ ಸಿಬ್ಬಂದಿಗೆ ರವಾನೆ ಮಾಡಿದ್ದಾರೆ.

ಸಿಬ್ಬಂದಿ ಯಲಚೇನಹಳ್ಳಿ ಮೆಟ್ರೋ ನಿಲ್ದಾಣದ ಸಿಬ್ಬಂದಿಗೆ ಮಾಹಿತಿ ನೀಡಿದ್ದಾರೆ. ವಿದ್ಯಾರ್ಥಿ ಮೆಟ್ರೋಯಿಂದ ಹೊರ ಹೋಗುವ ವೇಳೆ ದಂಡ ವಿಧಿಸಿ ಎಚ್ಚರಿಕೆ ನೀಡಿದ್ದಾರೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

Download Eedina App Android / iOS

X