ಹೊಸ ಮೆಟ್ರೋ ಮಾರ್ಗಗಳಿಗೆ ಪ್ರಧಾನಿ ಮೋದಿ ಚಾಲನೆ

Date:

Advertisements
  • ವರ್ಚುವಲ್‌ ಮೂಲಕ ಬೆಂಗಳೂರು ಮೆಟ್ರೋ ಹೊಸ ಮಾರ್ಗ ಉದ್ಘಾಟನೆ
  • ವಿಶ್ವದರ್ಜೆಯ ಮೆಟ್ರೋ ರೈಲು ವ್ಯವಸ್ಥೆ ನಮ್ಮದು: ಸಿಎಂ ಸಿದ್ದರಾಮಯ್ಯ

ಭಾರತ ಸರ್ಕಾರ ಮತ್ತು ಕರ್ನಾಟಕ ಸರ್ಕಾರದ ಸಹಯೋಗದಲ್ಲಿ ನಿರ್ಮಾಣವಾದ ಪ್ರಮುಖ ಎರಡು ಮಾರ್ಗಗಳಾದ ಕೃಷ್ಣರಾಜಪುರದಿಂದ ಬೈಯಪ್ಪನಹಳ್ಳಿ ನಡುವಿನ 2.10 ಕಿ.ಮೀ.ಗಳ ಉದ್ದ ಮತ್ತು ಕೆಂಗೇರಿಯಿಂದ ಚಲ್ಲಘಟ್ಟವರೆಗಿನ 2.05 ಕಿ.ಮೀ.ಗಳ ಉದ್ದದ ಮಾರ್ಗಗಳನ್ನು ಪ್ರಧಾನಿ ಮೋದಿ ಅವರು ವರ್ಚುವಲ್‌ ಮೂಲಕ ಉದ್ಘಾಟಿಸಿದರು.

ಬೆಂಗಳೂರು ಮೆಟ್ರೋ ಉದ್ಘಾಟನೆಯ ವಿಡಿಯೊ ಕಾನ್ಫರೆನ್ಸ್‌ನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಕೂಡ ಭಾಗಿಯಾಗಿ ಮಾತನಾಡಿ, “ಬೆಂಗಳೂರಿನಲ್ಲಿ ವಿಶ್ವದರ್ಜೆಯ ಮೆಟ್ರೋ ರೈಲು ವ್ಯವಸ್ಥೆ ಕರ್ನಾಟಕದ ಜನತೆಗೆ ಹೆಮ್ಮೆಯ ವಿಷಯವಾಗಿದ್ದು, ನಿಮ್ಮೆಲ್ಲರೊಂದಿಗಿರುವುದು ಬಹಳ ವಿಶೇಷ ಮತ್ತು ಸ್ಮರಣೀಯ ದಿನ” ಎಂದರು.

“ಈ ಎರಡು ಪ್ರಮುಖ ಮಾರ್ಗಗಳನ್ನು ತೆರೆಯುವುದರೊಂದಿಗೆ, ನಗರವು ಪೂರ್ವದಿಂದ ಪಶ್ಚಿಮಕ್ಕೆ ತಡೆರಹಿತ ಸಂಪರ್ಕ ಹೊಂದಿದೆ ಮತ್ತು ಮೆಟ್ರೋ ಜಾಲವನ್ನು 74 ಕಿ.ಮೀ.ಗಳಿಗೆ ವಿಸ್ತರಿಸಿದೆ. ಪ್ರತಿದಿನ 7 ಲಕ್ಷಕ್ಕೂ ಅಧಿಕ ಪ್ರಯಾಣಿಕರು ಸಂಚರಿಸುತ್ತಿದ್ದಾರೆ. ಬೆಂಗಳೂರು ಮೆಟ್ರೋ ರೈಲು ಯೋಜನೆ ಹಂತ-1ರ 42.3 ಕಿ.ಮೀ.ಗಳ ಉದ್ದದ ಮಾರ್ಗವನ್ನು ರೂ. 14,133 ಕೋಟಿ ವೆಚ್ಚದಲ್ಲಿ ನಮ್ಮ ಸರ್ಕಾರದ ಹಿಂದಿನ ಅವಧಿಯಲ್ಲಿ ಭಾರತದ ಗೌರವಾನ್ವಿತ ರಾಷ್ಟ್ರಪತಿ ಶ್ರೀ ಪ್ರಣಬ್ ಮುಖರ್ಜಿ ಅವರು ಇತರ ಗಣ್ಯರೊಂದಿಗೆ ದೇಶಕ್ಕೆ ಸಮರ್ಪಿಸಿದರು. ಈ ಯೋಜನೆಗಾಗಿ ಕರ್ನಾಟಕ ಸರ್ಕಾರವು ರೂ. 5,630 ಕೋಟಿಗಳಷ್ಟು ವೆಚ್ಚ ಮಾಡಿದೆ” ಎಂದು ಹೇಳಿದರು.

Advertisements

74 ಕಿ.ಮೀ.ಗಳಿಗೆ ಏರಿಕೆ

“ಬೆಂಗಳೂರು ಮೆಟ್ರೊ ರೈಲು ಯೋಜನೆ ಹಂತ-2ರಲ್ಲಿ 75.06 ಕಿ.ಮೀ.ಗಳ ಉದ್ದದ ಮಾರ್ಗ ಹೊಂದಿದ್ದು, ಸದರಿ ಯೋಜನೆಗೆ ರೂ. 30,695 ಕೋಟಿಗಳ ವೆಚ್ಚವಾಗಲಿದೆ. ಈಗಾಗಲೇ ಕಾಮಗಾರಿಗಳು ಭರದಿಂದ ನಿರ್ಮಾಣವಾಗುತ್ತಿದ್ದು, 32 ಕಿ.ಮೀ.ಗಳ ಉದ್ದದ ಮಾರ್ಗವನ್ನು ಪೂರ್ಣಗೊಳಿಸಿ ಸಾರ್ವಜನಿಕರ ಸೇವೆಗೆ ಮುಕ್ತಗೊಳಿಸಲಾಗಿದೆ ಎಂದು ನಿಮಗೆ ತಿಳಿಸಲು ನಾನು ಹರ್ಷಿಸುತ್ತೇನೆ. ಪ್ರಸ್ತುತ ಬೆಂಗಳೂರು ಮೆಟ್ರೋ ಜಾಲದ ಕಾರ್ಯಾಚರಣೆಯು 74 ಕಿ.ಮೀ.ಗಳಿಗೆ ಏರಿಕೆಯಾಗಿದೆ” ಎಂದು ವಿವರಿಸಿದರು.

“ನಾಗಸಂದ್ರದಿಂದ ಮಾದವಾರದವರೆಗಿನ ಉತ್ತರ ವಿಸ್ತರಣೆ 3.14 ಕಿ.ಮೀ.ಗಳ ಉದ್ದದ ಮಾರ್ಗವು ಮತ್ತು ಆರ್‌.ವಿ. ರಸ್ತೆಯಿಂದ ಬೊಮ್ಮಸಂದ್ರದವರೆಗೆ 19.15 ಕಿ.ಮೀ.ಗಳ ಉದ್ದದ ಹೊಸ ಮಾರ್ಗಗಳು ಮುಕ್ತಾಯದ ಹಂತದಲ್ಲಿದ್ದು, ಏಪ್ರಿಲ್ 2024ರ ವೇಳೆಗೆ ಸಾರ್ವಜನಿಕರ ಸೇವೆಗೆ ಮುಕ್ತಗೊಳಿಸಲು ಯೋಜಿಸಲಾಗಿದೆ. ಕಾಳೇನ ಅಗ್ರಹಾರದಿಂದ ನಾಗವಾರದವರೆಗಿನ 21.26 ಕಿ.ಮೀ.ಗಳ ಉದ್ದದ ಹೊಸ ಮಾರ್ಗವನ್ನು ಮಾರ್ಚ್-2025ರೊಳಗೆ ಪೂರ್ಣಗೊಳಿಸಲು ಯೋಜಿಸಲಾಗಿದೆ. ಈ ಮಾರ್ಗಗಳನ್ನು ಪೂರ್ಣಗೊಳಿಸುವುದರೊಂದಿಗೆ, ಕಾರ್ಯಾಚರಣೆಯ ಜಾಲವು 117 ಕಿ.ಮೀ.ಗಳಿಗೆ ವಿಸ್ತಾರಗೊಳ್ಳುತ್ತದೆ ಮತ್ತು 12 ಲಕ್ಷ ಪ್ರಯಾಣಿಕರು ಸಂಚರಿಸುವ ನಿರೀಕ್ಷೆಯಿದೆ” ಎಂದರು.

ಈ ಸುದ್ದಿ ಓದಿದ್ದೀರಾ? 100 ಗ್ರಾಮ ನ್ಯಾಯಾಲಯಗಳ ಸ್ಥಾಪನೆಗೆ ಸಚಿವ ಸಂಪುಟ ತಾತ್ವಿಕ ಒಪ್ಪಿಗೆ

“ಹಂತ-2 ಯೋಜನೆಗಾಗಿ, ಕರ್ನಾಟಕ ಸರ್ಕಾರವು ರೂ. 11,583.08 ಕೋಟಿಗಳನ್ನು ಬಿಡುಗಡೆ ಮಾಡಲಾಗಿದೆ. ಓಆರ್‌ಆರ್-ಏರ್‌ಪೋರ್ಟ್ ಮೆಟ್ರೋ ಎಂದು ಕರೆಯಲ್ಪಡುವ 58 ಕಿ.ಮೀ.ಗಳ ಉದ್ದದ ಸೆಂಟ್ರಲ್ ಸಿಲ್ಕ್ ಬೋರ್ಡ್ ಜಂಕ್ಷನ್‌ನಿಂದ ಹೆಬ್ಬಾಳ ಜಂಕ್ಷನ್ ಮೂಲಕ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಹಂತ 2ಎ ಮತ್ತು 2ಬಿ ಯೋಜನೆಯನ್ನು ಅಂದಾಜು ರೂ. 14,788.1 ಕೋಟಿಗಳ ವೆಚ್ಚದಲ್ಲಿ ನಿರ್ಮಿಸಲಾಗುತ್ತಿದ್ದು, 2026ರ ವೇಳೆಗೆ ಪೂರ್ಣಗೊಳಿಸಲು ಯೋಜಿಸಲಾಗಿದೆ. ಕರ್ನಾಟಕ ಸರ್ಕಾರವು ಇದುವರೆಗೆ ರೂ. 4,775.36 ಕೋಟಿ ಬಿಡುಗಡೆ ಮಾಡಲಾಗಿದೆ. ಈ ಯೋಜನೆಯು ಪೂರ್ಣಗೊಂಡ ನಂತರ, ಮೆಟ್ರೋ ಜಾಲವು 176 ಕಿ.ಮೀ.ಗಳು ಆಗಲಿದೆ ಮತ್ತು ಪ್ರತಿದಿನ ಸುಮಾರು 20 ಲಕ್ಷ ಪ್ರಯಾಣಿಕರು ಸಂಚರಿಸಲಿದ್ದಾರೆ” ಎಂದು ಹೇಳಿದರು.

ಮೆಟ್ರೋ ಮೂರನೇ ಹಂತ

“ಹೆಚ್ಚುತ್ತಿರುವ ಬೇಡಿಕೆಯನ್ನು ಪೂರೈಸಲು, ಬೆಂಗಳೂರು ಮೆಟ್ರೊ ರೈಲು ಯೋಜನೆಯ 3ನೇ ಹಂತದಲ್ಲಿ 45 ಕಿ.ಮೀ.ಗಳ ಉದ್ದದ ಮಾರ್ಗವನ್ನು ಅಂದಾಜು ರೂ. 15,611 ಕೋಟಿಗಳ ವೆಚ್ಚದಲ್ಲಿ ನಿರ್ಮಿಸಲು ಡಿಪಿಆರ್‌ನ್ನು ಕರ್ನಾಟಕ ಸರ್ಕಾರವು ಕೇಂದ್ರ ಸರ್ಕಾರದ ಅನುಮೋದನೆಗಾಗಿ ಸಲ್ಲಿಸಲಾಗಿದೆ. ಈ ಯೋಜನೆಗೆ ಶೀಘ್ರವಾಗಿ ಅನುಮೋದನೆ ನೀಡುವಂತೆ ನಾನು ಮಾನ್ಯ ಪ್ರಧಾನ ಮಂತ್ರಿಯವರನ್ನು ಕೋರುತ್ತೇನೆ. ಅಲ್ಲದೆ, ಸರ್ಜಾಪುರದಿಂದ ಹೆಬ್ಬಾಳದವರೆಗಿನ 37 ಕಿ.ಮೀ.ಗಳ ಉದ್ದದ ಬೆಂಗಳೂರು ಮೆಟ್ರೋ ರೈಲು ಯೋಜನೆಯ ಹಂತ-3ಎಗೆ ಡಿಪಿಆರ್ ತಯಾರಿಸಲಾಗುತ್ತಿದೆ” ಎಂದರು.

“ಬೆಂಗಳೂರು ನಗರವು ವೇಗವಾಗಿ ಬೆಳೆಯುತ್ತಿದ್ದು, ಕರ್ನಾಟಕ ಸರ್ಕಾರವು 2031ರ ವೇಳೆಗೆ 317 ಕಿ.ಮೀ.ಗಳ ಮೆಟ್ರೋ ಮಾರ್ಗಗಳನ್ನು ನಿರ್ಮಿಸಲು ಸಿಎಂಪಿ ಪ್ಲಾನ್‌ನಲ್ಲಿ ಅನುಮೋದಿಸಿದೆ. ಈಗಾಗಲೇ 257 ಕಿ.ಮೀ.ಗಳ ಮಾರ್ಗವು ಕಾರ್ಯಾಚರಣೆ, ನಿರ್ಮಾಣ ಮತ್ತು ಯೋಜನೆ ಹಂತದಲ್ಲಿದೆ. ಇನ್ನುಳಿದ 60 ಕಿ.ಮೀ.ಗಳ ಮೆಟ್ರೊ ಮಾರ್ಗಗಳ ಕಾರ್ಯಸಾಧ್ಯತೆಯ ಸಮೀಕ್ಷೆಯನ್ನು ಶೀಘ್ರದಲ್ಲೇ ಕೈಗೊಳ್ಳಲಾಗುವುದು” ಎಂದು ತಿಳಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸರ್ಕಾರಿ ಶಾಲೆಗಳನ್ನು ಮುಚ್ಚಿ, ಜವಾಬ್ದಾರಿಯಿಂದ ನುಣುಚಿಕೊಳ್ಳಲು ಸರ್ಕಾರದಿಂದಲೇ ಷಡ್ಯಂತ್ರ: ಪ್ರೊ. ಮುರಿಗೆಪ್ಪ

"ತನ್ನ ಮೇಲಿನ ಭಾರವನ್ನು ಇಳಿಸಿಕೊಳ್ಳಲು ಸರ್ಕಾರಿ ಶಾಲೆಗಳನ್ನು ಮುಚ್ಚಿ ಖಾಸಗಿ ಶಾಲೆಗಳಿಗೆ...

ಈದಿನ ವಿಶೇಷ | ಧರ್ಮಸ್ಥಳ: ಉತ್ತರ ನೀಡಿದ ಗೃಹ ಸಚಿವರು; ಈಗಲೂ ಉಳಿದ ಹಲವು ಪ್ರಶ್ನೆಗಳು

ಸದನದಲ್ಲಿ ನಿಂತು ಷಡ್ಯಂತ್ರ ಎನ್ನುವವರಿಗೆ, ಎಸ್‌ಐಟಿ ರಚನೆಯಾಗಿದ್ದೇಕೆ? ಕಾನೂನು ಏನು ಹೇಳುತ್ತೆ?...

ಪರಿಸರ ಸ್ನೇಹಿ ಗಣೇಶ ಹಬ್ಬಕ್ಕೆ ಮಾರ್ಗಸೂಚಿ ಪ್ರಕಟ, ನಿಯಮ ಉಲ್ಲಂಘಿಸಿದರೆ ಕ್ರಿಮಿನಲ್‌ ಕೇಸ್‌ ದಾಖಲು

ಬೆಂಗಳೂರು ನಗರದಲ್ಲಿ ಪರಿಸರ ಸ್ನೇಹಿ ಗಣೇಶ ಮೂರ್ತಿಗಳನ್ನು ಮಾತ್ರ ಪೂಜಿಸಬೇಕಾಗಿ ಮತ್ತು...

ಬಿಹಾರದಂತೆಯೇ, ಇಡೀ ದೇಶ ಚುನಾವಣಾ ಕಳ್ಳತನವನ್ನು ವಿರೋಧಿಸುತ್ತದೆ: ರಾಹುಲ್ ಗಾಂಧಿ

ಬಿಹಾರದಲ್ಲಿ ತಮ್ಮ 'ಮತದಾರ ಅಧಿಕಾರ ಯಾತ್ರೆ'ಗೆ ಸಕಾರಾತ್ಮಕ ಪ್ರತಿಕ್ರಿಯೆಯನ್ನು ಸ್ವಾಗತಿಸಿದ ಲೋಕಸಭೆ...

Download Eedina App Android / iOS

X