ಕಲ್ಯಾಣ ಕರ್ನಾಟಕ | ಖಾಲಿ ಹುದ್ದೆಗಳ ಭರ್ತಿಗೆ ಸಿಎಂ ಸೇರಿ ಎಲ್ಲ ಸಚಿವರಿಗೆ ಪ್ರಿಯಾಂಕ್‌ ಖರ್ಗೆ ಪತ್ರ

Date:

Advertisements
  • ನೇರ ನೇಮಕಾತಿ, ಬಡ್ತಿ ಮೂಲಕ ಹುದ್ದೆಗಳನ್ನು ತ್ವರಿತವಾಗಿ ಭರ್ತಿ ಮಾಡಿ
  • ಕಲ್ಯಾಣ ಕರ್ನಾಟಕ ಭಾಗದಲ್ಲಿ 28,023 ಹುದ್ದೆಗಳ ಭರ್ತಿ ಮಾಡಬೇಕಿದೆ

ಕಲ್ಯಾಣ ಕರ್ನಾಟಕ ಪ್ರದೇಶದ ಖಾಲಿ ಹುದ್ದೆಗಳ ಭರ್ತಿಗೆ ಎಲ್ಲ ಸಚಿವರಿಗೆ ಸಚಿವ ಸಂಪುಟ ಉಪ ಸಮಿತಿ ಅಧ್ಯಕ್ಷರೂ ಆಗಿರುವ ಗ್ರಾಮೀಣಾಭಿವೃದ್ಧಿ ಸಚಿವ ಪ್ರಿಯಾಂಕ್‌ ಖರ್ಗೆ ಪತ್ರ ಬರೆದಿದ್ದಾರೆ.

ಈ ಕುರಿತು ಪತ್ರಿಕಾ ಪ್ರಕಟಣೆ ಮೂಲಕ ಮಾಹಿತಿ ಹಂಚಿಕೊಂಡಿರುವ ಅವರು, “ಕಲ್ಯಾಣ ಕರ್ನಾಟಕ ಪ್ರದೇಶದಲ್ಲಿ ನೇರ ನೇಮಕಾತಿ ಹಾಗೂ ಬಡ್ತಿ ಮೂಲಕ ತುಂಬ ಬೇಕಾಗಿರುವ ಹುದ್ದೆಗಳನ್ನು ತ್ವರಿತವಾಗಿ ಭರ್ತಿ ಮಾಡಲು ಕ್ರಮ ಕೈಗೊಳ್ಳಬೇಕು” ಎಂದು ಎಲ್ಲ ಸಚಿವರಿಗೆ ಹಾಗೂ ಮುಖ್ಯಮಂತ್ರಿಯವರು ಹೊಂದಿರುವ ಖಾತೆಗಳಿಗೆ ಸಂಬಂಧಿಸಿದಂತೆ ಸಚಿವಾಲಯ ಮುಖ್ಯಸ್ಥರಿಗೆ ಪತ್ರದಲ್ಲಿ ಕೋರಿದ್ದಾರೆ.

2023ರ ಆಗಸ್ಟ್ 17ರಂದು ನಡೆದ ಸಚಿವ ಸಂಪುಟ ಉಪ ಸಮಿತಿ ಸಭೆಯಲ್ಲಿ ತೆಗೆದುಕೊಳ್ಳಲಾದ ತೀರ್ಮಾನದಂತೆ ಕಲ್ಯಾಣ ಕರ್ನಾಟಕ ಪ್ರದೇಶದ ಅಭಿವೃದ್ಧಿಗಾಗಿ ಸ್ಥಳೀಯ ವೃಂದದಲ್ಲಿನ ಮೀಸಲಿರಿಸಿರುವ ಹುದ್ದೆಗಳನ್ನು ತ್ವರಿತವಾಗಿ ಭರ್ತಿ ಮಾಡಬೇಕಿರುವುದರಿಂದ ಸಚಿವ ಪ್ರಿಯಾಂಕ್‌ ಖರ್ಗೆ ಅವರು ಈ ಪತ್ರಗಳನ್ನು ಸಚಿವರಿಗೆ ಹಾಗೂ ಅಧಿಕಾರಿಗಳಿಗೆ ರವಾನಿಸಿದ್ದಾರೆ.

Advertisements

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಮಲದ ಗುಂಡಿಗೆ ಮನುಷ್ಯರನ್ನು ಇಳಿಸುವುದು ‘ವಿಶ್ವಗುರು’ವಿಗೆ ಶೋಭೆಯಲ್ಲ

ಭಾರತ ಸಂವಿಧಾನ ಅನುಚ್ಛೇದ 371 (ಜೆ) ಅಡಿಯಲ್ಲಿ ಇಲಾಖಾವಾರು ಭರ್ತಿ ಮಾಡಲು ಬಾಕಿ ಇರುವ ನೇರ ನೇಮಕಾತಿ ಹಾಗೂ ಮುಂಬಡ್ತಿಯಲ್ಲಿ ಹುದ್ದೆಗಳ ವಿವರಗಳನ್ನು ಪತ್ರದ ಜೊತೆ ನೀಡಲಾಗಿದೆ. ಕಲ್ಯಾಣ ಕರ್ನಾಟಕ ಭಾಗದಲ್ಲಿ ನೇರ ನೇಮಕಾತಿ ಮೂಲಕ 28,023 ಹುದ್ದೆಗಳನ್ನು ಭರ್ತಿ ಮಾಡಬೇಕಿದ್ದು, ಇವಗಳಲ್ಲಿ 12,945 ಹುದ್ದೆಗಳನ್ನು ಭರ್ತಿ ಮಾಡುವ ಕ್ರಮ ಲೋಕಸೇವಾ ಆಯೋಗ ಹಾಗೂ ಇನ್ನಿತರ ಸಂಸ್ಥೆಗಳ ಮೂಲಕ ನಡೆಯುತ್ತಿದೆ. ಉಳಿದಂತೆ 15,078 ಹುದ್ದೆಗಳು ಖಾಲಿ ಇದ್ದು ಭರ್ತಿ ಪ್ರಕ್ರಿಯೆ ಆರಂಭಗೊಳ್ಳಬೇಕಿದೆ. ಇವುಗಳಲ್ಲಿ ಎ,ಬಿ,ಸಿ ಹಾಗೂ ಡಿ ವೃಂದದ ಹುದ್ದೆಗಳು ಸೇರಿವೆ.

ಕಲ್ಯಾಣ ಕರ್ನಾಟಕ ಭಾಗದಲ್ಲಿ 9,905 ವಿವಿಧ ಹುದ್ದೆಗಳನ್ನು ಬಡ್ತಿ ಮೂಲಕ ತುಂಬ ಬೇಕಿದ್ದು, ಈ ಹುದ್ದೆಗಳನ್ನು ಬಡ್ತಿ ಮೂಲಕ ತುಂಬಲು ಕ್ರಮ ಕೈಗೊಳ್ಳುವಂತೆಯೂ ಸಚಿವ ಪ್ರಿಯಾಂಕ್‌ ಖರ್ಗೆ ಸಂಪುಟದ ಎಲ್ಲ ಸಚಿವರಿಗೂ ಬರೆದಿರುವ ಪತ್ರದಲ್ಲಿ ಕೋರಿದ್ದಾರಲ್ಲದೆ, ಇಲಾಖೆಯ ಅಧಿಕಾರಿಗಳ ಸಭೆ ಕರೆದು ಈ ನಿಟ್ಟಿನಲ್ಲಿ ಪ್ರಗತಿ ಸಾಧಿಸಲು ಸಹಕಾರ ನೀಡಬೇಕು ಎಂದು ತಿಳಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿತ್ರದುರ್ಗ | ವಿದ್ಯಾರ್ಥಿನಿ ಕೊಲೆ, ಬೆಂಕಿ ಹಚ್ಚಿ ಸುಟ್ಟ ಅಪರಾಧಿಗಳಿಗೆ ಗಲ್ಲುಶಿಕ್ಷೆ ವಿಧಿಸಲು ಎಸ್ ಎಫ್ ಐ ಆಗ್ರಹ

ಚಿತ್ರದುರ್ಗದ ಹೊರವಲಯದಲ್ಲಿರುವ ರಾಷ್ಟ್ರೀಯ ಹೆದ್ದಾರಿ ಬಳಿ ಹಿರಿಯೂರು ತಾಲೂಕಿನ 19 ವರ್ಷದ...

ಬೂಕರ್ ಪ್ರಶಸ್ತಿ ಪುರಸ್ಕೃತೆ ಬಾನು‌ ಮುಷ್ತಾಕ್‌ರಿಂದ ಮೈಸೂರು ದಸರಾ ಉದ್ಘಾಟನೆ: ಸಿಎಂ ಸಿದ್ದರಾಮಯ್ಯ

ಈ ಬಾರಿಯ 'ಮೈಸೂರು ದಸರಾ' ಉದ್ಘಾಟನೆಯನ್ನು ಬೂಕರ್ ಪ್ರಶಸ್ತಿ ವಿಜೇತೆ ಲೇಖಕಿ...

ದಸರಾ ಉದ್ಘಾಟನೆಗೆ ಸೋನಿಯಾ ಗಾಂಧಿಗೆ ಆಹ್ವಾನ ಸಂಪೂರ್ಣ ಸುಳ್ಳು: ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ

ಈ ಬಾರಿಯ ದಸರಾ ಉದ್ಘಾಟನೆಗೆ ಕಾಂಗ್ರೆಸ್ ಅಧಿನಾಯಕಿ ಸೋನಿಯಾ ಗಾಂಧಿಯನ್ನು ಆಹ್ವಾನಿಸಲಾಗಿದೆ...

Download Eedina App Android / iOS

X