ಕೇಂದ್ರ ಸರ್ಕಾರಕ್ಕೆ ಈಗಾಗಲೇ ಬರಗಾಲದ ವರದಿಯನ್ನು ಸಲ್ಲಿಸಿದ್ದು, ಈಗ ಇತ್ತೀಚಿನ ಮತ್ತೊಂದು ವರದಿಯನ್ನೂ ಸಲ್ಲಿಸಿದ್ದೇವೆ ಎಂದು ಗೃಹ ಸಚಿವ ಹಾಗೂ ತುಮಕೂರು ಜಿಲ್ಲಾ ಉಸ್ತುವಾರಿ ಸಚಿವ ಡಾ ಜಿ ಪರಮೇಶ್ವರ್ ಹೇಳಿಕೆ ನೀಡಿದರು.
ನಗರದಲ್ಲಿ ಶುಕ್ರವಾರ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, “ರಾಜ್ಯದಲ್ಲಿ ಸುಮಾರು 25 ತಾಲೂಕುಗಳನ್ನು ಬಿಟ್ಟರೆ ಉಳಿದೆಲ್ಲ ತಾಲೂಕುಗಳನ್ನು ಬರಪೀಡಿತ ಪ್ರದೇಶವೆಂದು ಘೋಷಣೆ ಮಾಡಲಾಗಿದೆ. ₹ 400 ಕೋಟಿಯಿಂದ ₹ 500 ಕೋಟಿಯಷ್ಟು ಹಣವನ್ನು ಬರ ನಿರ್ವಹಣೆಗೆ ಮೀಸಲಿಟ್ಟಿದ್ದೇವೆ” ಎಂದು ಹೇಳಿದರು.
“ತುಮಕೂರು ಜಿಲ್ಲೆಗೆ 19 ಕೋಟಿ ರೂ. ಇಡಲಾಗಿದ್ದು, ಕುಡಿಯುವ ನೀರು ಮತ್ತು ಜಾನುವಾರುಗಳಿಗೆ ಮೇವಿನಲ್ಲಿ ಸಮಸ್ಯೆ ಎದುರಾಗದಂತೆ ಜಿಲ್ಲಾಧಿಕಾರಿ ಸೂಕ್ತ ಕ್ರಮ ಕೈಗೊಳ್ಳುವಂತೆ ಸರ್ಕಾರ ಸೂಚನೆ ನೀಡಿದೆ” ಎಂದರು.
ಈ ಸುದ್ದಿ ಓದಿದ್ದೀರಾ? ಕಲಬುರಗಿ | ಮೂಲಭೂತ ಸೌಕರ್ಯಗಳಿಂದ ವಂಚಿತವಾಗಿದೆ ಮಲ್ಲಬಾದ ಗ್ರಾಮ; ಶಾಸಕರ ನಿರ್ಲಕ್ಷ್ಯ?
“ಬರ ನಿರ್ವಹಣೆಗೆ ಹಣಬೇಕು. ಹಾಗಾಗಿ ಅದನ್ನು ಈಗಾಗಲೇ ಜಿಲ್ಲಾಧಿಕಾರಿಗಳ ಪಿ.ಡಿ ಅಕೌಂಟ್‌ಗೆ ಇಡಲಾಗಿದೆ. ಅವರ ಹಂತದಲ್ಲಿ ಪರಿಶೀಲನೆ ಮಾಡಿ ಹಣ ಬಿಡುಗಡೆ ಮಾಡಿಕೊಳ್ಳುವ ಅವಕಾಶ ಇದೆ. ಕುಡಿಯುವ ನೀರು, ಜಾನುವಾರುಗಳ ಮೇವು, ಕಾಮಗಾರಿ, ಗೋಶಾಲೆಗೆ ಹಣ ಬಳಕೆ ಮಾಡಿಕೊಳ್ಳಬಹುದು” ಎಂದು ತಿಳಿಸಿದರು.