ಬಿಜೆಪಿ – ಜೆಡಿಎಸ್ ಮೈತ್ರಿಗೆ ಒಪ್ಪಿಗೆ: ಮಾಜಿ ಪ್ರಧಾನಿ ದೇವೇಗೌಡ ಹೇಳಿಕೆಗೆ ಕೇರಳ ಸಿಎಂ ಆಕ್ರೋಶ

Date:

Advertisements

ಮುಂಬರುವ ಲೋಕಸಭೆ ಚುನಾವಣೆಗೆ ಕರ್ನಾಟಕದಲ್ಲಿ ಬಿಜೆಪಿ ಜತೆ ಜೆಡಿಎಸ್ ಮೈತ್ರಿಗೆ ಕೇರಳ, ತಮಿಳುನಾಡು ಮತ್ತು ಮಹಾರಾಷ್ಟ್ರದಲ್ಲಿ ತನ್ನ ಎಲ್ಲ ಮಿತ್ರಪಕ್ಷಗಳು ಸಮ್ಮತಿ ಸೂಚಿಸಿವೆ ಎಂದು ಮಾಜಿ ಪ್ರಧಾನಿ ಮತ್ತು ಜೆಡಿಎಸ್ ವರಿಷ್ಠ ಎಚ್‌ಡಿ ದೇವೇಗೌಡ ಹೇಳಿಕೆಗೆ ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಆಕ್ರೋಶ ವ್ಯಕ್ತಪಡಿದ್ದಾರೆ.

ಈ ಬಗ್ಗೆ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ವಿಜಯನ್, ಎಚ್.ಡಿ. ದೇವೇಗೌಡ ಅವರ ಹೇಳಿಕೆಯು ನಿರಾಧಾರ’ಮತ್ತು ‘ಅಸಂಬದ್ಧ’ ಎಂದು ಹೇಳಿದ್ದಾರೆ.

ತಮಿಳುನಾಡು, ಕೇರಳ ಮತ್ತು ಮಹಾರಾಷ್ಟ್ರ ಸೇರಿದಂತೆ ಜೆಡಿಎಸ್‌ನ ಎಲ್ಲ ರಾಜ್ಯ ಘಟಕಗಳು ಬಿಜೆಪಿಯೊಂದಿಗೆ ಹೊಂದಾಣಿಕೆ ಮಾಡಿಕೊಳ್ಳಲು ಒಪ್ಪಿಗೆ ನೀಡಿವೆ ಎಂದು ಮಾಜಿ ಪ್ರಧಾನಿ ಗುರುವಾರ(ಅಕ್ಟೋಬರ್ 19) ಹೇಳಿದ್ದರು.

Advertisements

ಕೇರಳದ ಜೆಡಿಎಸ್ ಘಟಕವು ಯಾವಾಗಲೂ ಎಡ ರಂಗದ ಜತೆ ಗುರುತಿಸಿಕೊಂಡಿದೆ. ಇದೇ ರೀತಿಯ ಬೆಳವಣಿಗೆ 2006ರಲ್ಲಿ ನಡೆದಾಗಲೂ ಇಲ್ಲಿನ ಜೆಡಿಎಸ್ ನಾಯಕರು ನಿಲುವು ಬದಲಿಸಿರಲಿಲ್ಲ. ಈ ಬಾರಿಯೂ ಕೇರಳದ ಜೆಡಿಎಸ್ ನಾಯಕರು ಬಿಜೆಪಿ ಮೈತ್ರಿಯನ್ನು ವಿರೋಧಿಸಿದ್ದಾರೆ ಮತ್ತು ಎಡರಂಗದ ಜತೆ ನಿಂತಿದ್ದಾರೆ. ಆದರೆ, ಸಿಪಿಐ(ಎಂ) ಆ ಪಕ್ಷದ ಆಂತರಿಕ ವಿಚಾರಗಳ ಬಗ್ಗೆ ಯಾವತ್ತೂ ಅಭಿಪ್ರಾಯ ವ್ಯಕ್ತಪಡಿಸಲು ಪ್ರಯತ್ನಿಸಿಲ್ಲ.ಮುಖ್ಯಮಂತ್ರಿಯಾಗಿ ನಾನಂತೂ ಅವರ ಪಕ್ಷದ ವ್ಯವಹಾರಗಳಲ್ಲಿ ಮಧ್ಯಪ್ರವೇಶಿಸಿಲ್ಲ.ಇದು ನಮ್ಮ ಕಾರ್ಯವೈಖರಿಗೆ ಸಂಪೂರ್ಣ ವಿರುದ್ಧವಾಗಿದೆ. ಅವರ ಅಚಾತುರ್ಯಕ್ಕೆ ನಾವು ಜವಾಬ್ದಾರರಲ್ಲ” ಎಂದು ಪಿಣರಾಯಿ ವಿಜಯನ್ ಹೇಳಿದ್ದಾರೆ.

ಈ ಸುದ್ದಿ ಓದಿದ್ದೀರಾ? ಪತ್ರಕರ್ತೆ ಸೌಮ್ಯಾ ವಿಶ್ವನಾಥನ್ ಹತ್ಯೆ ಪ್ರಕರಣ: ಹಂತಕರು ದೋಷಿ ಎಂದು ದೆಹಲಿ ಹೈಕೋರ್ಟ್ ತೀರ್ಪು

“ಜೆಡಿಎಸ್ ಕೇರಳ ಘಟಕವು ಬಿಜೆಪಿಯನ್ನು ವಿರೋಧಿಸುತ್ತದೆ ಮತ್ತು ಹೀಗಾಗಿ ನಾವು ಈ ಬಗ್ಗೆ ದೇವೇಗೌಡರ ಹೇಳಿಕೆಯನ್ನು ವಿರೋಧಿಸುತ್ತೇವೆ ಎಂದು ಇಲ್ಲಿನ ನಾಯಕರು ಸ್ಪಷ್ಟಪಡಿಸಿದ್ದಾರೆ. ಕೇರಳ ಜೆಡಿಎಸ್ ರಾಜ್ಯಾಧ್ಯಕ್ಷ ಮ್ಯಾಥ್ಯೂ ಟಿ ಥಾಮಸ್ ಮತ್ತು ಕೇರಳ ಸರ್ಕಾರದಲ್ಲಿ ಜೆಡಿಎಸ್‌ ಸಚಿವ ಕೆ ಕೃಷ್ಣನ್‌ಕುಟ್ಟಿ ದೇವೇಗೌಡರು ನೀಡಿರುವ ಹೇಳಿಕೆ ಸುಳ್ಳು ಎಂದು ಖಡಾಖಂಡಿತವಾಗಿ ಹೇಳಿದ್ದಾರೆ” ಎಂದು ವಿಜಯನ್ ತಿಳಿಸಿದ್ದಾರೆ.

‘ದೇವೇಗೌಡರು ತಮ್ಮ ಬದಲಾಗುತ್ತಿರುವ ರಾಜಕೀಯ ನಿಲುವುಗಳನ್ನು ಸಮರ್ಥಿಸಿಕೊಳ್ಳಲು ಸುಳ್ಳು ಹೇಳುತ್ತಿದ್ದಾರೆ’ಎಂದು ಕಟು ಶಬ್ದಗಳಲ್ಲಿ ಟೀಕಿಸಿರುವ ವಿಜಯನ್ ಅವರು, ದೇವೇಗೌಡರು ಈ ಹಿಂದೆಯೂ ತಮ್ಮ ಪುತ್ರ ಎಚ್. ಡಿ. ಕುಮಾರಸ್ವಾಮಿ ಅವರನ್ನು ಮುಖ್ಯಮಂತ್ರಿ ಮಾಡಲು ಪಕ್ಷದ ಸಿದ್ಧಾಂತಕ್ಕೆ ದ್ರೋಹವೆಸಗಿದ್ದರು’ ಎಂದು ಆರೋಪಿಸಿದ್ದಾರೆ.

ಎಡ ರಂಗದ ಜತೆ ಉಳಿಯಲು ಕೇರಳದ ಜೆಡಿಎಸ್ ಘಟಕ ನಿರ್ಧಸಿದೆಯಾದರೂ, ಮುಂದಿನ ದಿನಗಳಲ್ಲಿ ಹೊಸ ಪಕ್ಷ ರಚನೆ ಮಾಡಬೇಕೆ ಅಥವಾ ಇತರ ಸ್ಥಳೀಯ ಪಕ್ಷಗಳ ಜತೆ ವಿಲೀನವಾಗಬೇಕೊ ಎಂಬುದರ ಕುರಿತು ನಾಯಕರಲ್ಲಿ ಒಮ್ಮತಮೂಡಿಲ್ಲ. ಈ ಕುರಿತು ಮುಂದಿನ ಯೋಜನೆಗಳನ್ನು ನಿರ್ಧರಿಸಲು ಪಕ್ಷದ ನಾಲ್ವರು ಹಿರಿಯ ನಾಯಕರ ಸಮಿತಿಯನ್ನು ರಚಿಸಲಾಗಿದೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಬಿಐ ಅಧಿಕಾರಿಗಳಂತೆ ನಟಿಸಿ 2.3 ಕೋಟಿ ರೂ. ದೋಚಿದ್ದ ಗ್ಯಾಂಗ್: ಇಬ್ಬರ ಬಂಧನ

ಕೇಂದ್ರ ತನಿಖಾ ದಳ (ಸಿಬಿಐ) ಅಧಿಕಾರಿಗಳಂತೆ ನಟಿಸಿ ಉದ್ಯಮಿಯೊಬ್ಬರ ಕಚೇರಿಯಿಂದ ಗ್ಯಾಂಗ್...

ಬೀದಿ ನಾಯಿಗಳಿಗೆ ಲಸಿಕೆ ಹಾಕಿದ ನಂತರ ಅದೇ ಸ್ಥಳಕ್ಕೆ ತಂದು ಬಿಡಬೇಕು: ಸುಪ್ರೀಂ ಕೋರ್ಟ್‌

ಬೀದಿ ನಾಯಿಗಳಿಗೆ ಸಂಬಂಧಿಸಿದ್ದಂತೆ ಆಗಸ್ಟ್ 11ರ ಆದೇಶವನ್ನು ಮಾರ್ಪಡಿಸಿದ ಸುಪ್ರೀಂ...

ವಿವಾದಾತ್ಮಕ ಯೂಟ್ಯೂಬರ್ ಎಲ್ವಿಶ್ ಮನೆ ಮೇಲೆ ಗುಂಡಿನ ದಾಳಿ: ಎನ್‌ಕೌಂಟರ್ ಮಾಡಿ ಆರೋಪಿ ಬಂಧನ

ಬಲಪಂಥೀಯ, ವಿವಾದಾತ್ಮಕ ಯೂಟ್ಯೂಬರ್ ಮತ್ತು ಬಿಗ್ ಬಾಸ್ ವಿಜೇತ ಎಲ್ವಿಶ್ ಯಾದವ್‌...

ಗೇಮಿಂಗ್​ ಆ್ಯಪ್​ಗಳಿಗೆ ಅಕ್ರಮ ಹಣ ವರ್ಗಾವಣೆ ಆರೋಪ: ಚಿತ್ರದುರ್ಗ ಶಾಸಕ ವೀರೇಂದ್ರ ಮನೆ ಮೇಲೆ ಇಡಿ ದಾಳಿ

ಶುಕ್ರವಾರ(ಆಗಸ್ಟ್ 22) ಬೆಳ್ಳಂಬೆಳಗ್ಗೆ ಚಿತ್ರದುರ್ಗದ ಶಾಸಕ ಕೆಸಿ ವೀರೇಂದ್ರ ಪಪ್ಪಿ ಅವರ...

Download Eedina App Android / iOS

X