ನೇಕಾರರ ಮಗ್ಗಗಳಿಗೆ 250 ಯುನಿಟ್‌ವರೆಗೂ ಉಚಿತ ವಿದ್ಯುತ್‌: ಸಚಿವ ಶಿವಾನಂದ ಪಾಟೀಲ್

Date:

Advertisements
  • ’10 ಎಚ್‌.ಪಿ. ವರೆಗಿನ ಮಗ್ಗ ಮತ್ತು ಮಗ್ಗಪೂರ್ವ ಘಟಕಗಳಿಗೆ ಅನ್ವಯ’
  • ದಸರಾ, ದೀಪಾವಳಿ ಕೊಡುಗೆಯಾಗಿ ಉಚಿತ ವಿದ್ಯುತ್‌: ಶಿವಾನಂದ ಪಾಟೀಲ್

10 ಎಚ್‌.ಪಿ. ವರೆಗಿನ ಮಗ್ಗ ಮತ್ತು ಮಗ್ಗಪೂರ್ವ ಘಟಕಗಳಿಗೆ ಮಾಸಿಕ ಗರಿಷ್ಠ 250 ಯುನಿಟ್‌ ವರೆಗೆ ಉಚಿತ ವಿದ್ಯುತ್‌ ಒದಗಿಸಲು ಸರ್ಕಾರ ತೀರ್ಮಾನಿಸಿದೆ ಎಂದು ಜವಳಿ, ಕಬ್ಬು ಅಭಿವೃದ್ಧಿ ಮತ್ತು ಸಕ್ಕರೆ ಹಾಗೂ ಕೃಷಿ ಮಾರುಕಟ್ಟೆ ಸಚಿವ ಶಿವಾನಂದ ಎಸ್ ಪಾಟೀಲ್ ತಿಳಿಸಿದರು.

ವಿಜಯಪುರದಲ್ಲಿ ಶನಿವಾರ ನಡೆದ ಸುದ್ದಿಗೋಷ್ಠಿಯಲ್ಲಿ ಅವರು ಮಾತನಾಡಿ, “ನೇಕಾರರನ್ನು ಆರ್ಥಿಕ ಸ್ವಾವಲಂಬಿಗಳನ್ನಾಗಿಲು ಸರ್ಕಾರ ಕ್ರಮಕೈಗೊಂಡಿದೆ. ಈ ಮೂಲಕ ಆರ್ಥಿಕ ಸಂಕಷ್ಟದಲ್ಲಿರುವ ನೇಕಾರರ ನೆರವಿಗೆ ಧಾವಿಸಿರುವ ರಾಜ್ಯ ಸರ್ಕಾರ ದಸರಾ, ದೀಪಾವಳಿ ಕೊಡುಗೆಯಾಗಿ ಉಚಿತ ವಿದ್ಯುತ್‌ ನೀಡಲು ಮುಂದಾಗಿದೆ” ಎಂದರು.

“ಈ ಯೋಜನೆ ಅನುಷ್ಠಾನದಿಂದ ರಾಜ್ಯದ ಸುಮಾರು 40 ಸಾವಿರ ನೇಕಾರರಿಗೆ ಅನುಕೂಲವಾಗಲಿದೆ. ನೇಕಾರರಿಗೆ ಉಚಿತ ವಿದ್ಯುತ್‌ ಪೂರೈಕೆಯಿಂದ ಮಾಸಿಕ ಅಂದಾಜು ₹150 ಕೋಟಿ ಮೊತ್ತವನ್ನು ವಿದ್ಯುತ್‌ ಸರಬರಾಜು ಕಂಪನಿಗಳಿಗೆ ಕೈಮಗ್ಗ ಮತ್ತು ಜವಳಿ ಇಲಾಖೆಯಿಂದ ಭರಿಸಲಾಗುವುದು” ಎಂದು ಹೇಳಿದರು.

Advertisements

“10 ರಿಂದ 20 ಎಚ್‌.ಪಿ. ವರೆಗಿನ ವಿದ್ಯುತ್‌ ಮಗ್ಗ ಹಾಗೂ ಮಗ್ಗಪೂರ್ವ ಘಟಕಗಳಿಗೆ ಪ್ರತಿ ಯುನಿಟ್‌ಗೆ ₹1.25ರಂತೆ ರಿಯಾಯಿತಿ ದರದಲ್ಲಿ ಮಾಸಿಕ ಗರಿಷ್ಠ 500 ಯುನಿಟ್‌ ವರೆಗೆ ವಿದ್ಯುತ್‌ ಪೂರೈಸಲಾಗುವುದು” ಎಂದು ತಿಳಿಸಿದರು.

ಈ ಸುದ್ದಿ ಓದಿದ್ದೀರಾ? ನಕಲಿ ವೋಟರ್‌ ಐಡಿ ತಯಾರಿಕೆ ಆರೋಪ; ಭೈರತಿ ಸುರೇಶ್‌ ಆಪ್ತ ಸೇರಿ ಮೂವರು ಸಿಸಿಬಿ ವಶಕ್ಕೆ

“ಉಚಿತ ವಿದ್ಯುತ್‌ ಸಹಾಯಧನ ಯೋಜನೆಗೆ ನೋಂದಾಯಿಸಿಕೊಳ್ಳಲು ನೇಕಾರರು ತಮ್ಮ ಆಧಾರ್‌ ಕಾರ್ಡ್‌, ಪಡಿತರ ಕಾರ್ಡ್‌, ಮಗ್ಗದ ಚಿತ್ರ, ವಿದ್ಯುತ್‌ ಸಂಪರ್ಕ ಹೊಂದಿರುವ ದಾಖಲಾತಿ, ಆರ್‌.ಆರ್‌.ಸಂಖ್ಯೆ, ಬಿಲ್‌ ಮತ್ತು ರಸೀದಿ ಸೇರಿದಂತೆ ಇತರೆ ಅವಶ್ಯಕ ದಾಖಲೆಗಳೊಂದಿಗೆ ಅರ್ಜಿ ಸಲ್ಲಿಸಬೇಕು” ಎಂದು ವಿವರಿಸಿದರು.

ರಾಜ್ಯದಲ್ಲಿ ಬರಗಾಲ ಇರುವುದರಿಂದ ಈ ಬಾರಿ ಕಬ್ಬಿನ ಇಳುವರಿ ಕಡಿಮೆಯಾಗುವ ಸಾಧ್ಯತೆ ಇದೆ. ಹಿಂದಿನ ಹಂಗಾಮುಗಳಲ್ಲಿ ಸಕ್ಕರೆ ಕಾರ್ಖಾನೆಗಳು ತಮ್ಮ ಅನುಕೂಲಕ್ಕೆ ತಕ್ಕಂತೆ ಬೇರೆ ಬೇರೆ ಅವಧಿಯಲ್ಲಿ ಕಬ್ಬು ನುರಿಸಲು ಆರಂಭಿಸುತ್ತಿರುವುದನ್ನು ತಪ್ಪಿಸಿ, ರೈತರ ಹಿತದೃಷ್ಟಿಯಿಂದ ರಾಜ್ಯದಲ್ಲಿ ಏಕಕಾಲಕ್ಕೆ ಕಬ್ಬು ನುರಿಸುವಿಕೆ ಆರಂಭಿಸಲು ಸಕ್ಕರೆ ಕಾರ್ಖಾನೆಗಳಿಗೆ ಈ ನಿರ್ದೇಶನ ನೀಡಲಾಗಿದೆ. ರಾಜ್ಯದಾದ್ಯಂತ ಸಕ್ಕರೆ ಕಾರ್ಖಾನೆಗಳು ಅ.25ರಿಂದಲೇ ಕಬ್ಬು ನುರಿಸಲು ಆರಂಭಿಸುವಂತೆ ಸರ್ಕಾರ ಹೊಸ ಆದೇಶ ಹೊರಡಿಸಿದೆ” ಎಂದು ಇದೇ ವೇಳೆ ತಿಳಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿತ್ರದುರ್ಗ | ವಿದ್ಯಾರ್ಥಿನಿ ಕೊಲೆ, ಬೆಂಕಿ ಹಚ್ಚಿ ಸುಟ್ಟ ಅಪರಾಧಿಗಳಿಗೆ ಗಲ್ಲುಶಿಕ್ಷೆ ವಿಧಿಸಲು ಎಸ್ ಎಫ್ ಐ ಆಗ್ರಹ

ಚಿತ್ರದುರ್ಗದ ಹೊರವಲಯದಲ್ಲಿರುವ ರಾಷ್ಟ್ರೀಯ ಹೆದ್ದಾರಿ ಬಳಿ ಹಿರಿಯೂರು ತಾಲೂಕಿನ 19 ವರ್ಷದ...

ಬೂಕರ್ ಪ್ರಶಸ್ತಿ ಪುರಸ್ಕೃತೆ ಬಾನು‌ ಮುಷ್ತಾಕ್‌ರಿಂದ ಮೈಸೂರು ದಸರಾ ಉದ್ಘಾಟನೆ: ಸಿಎಂ ಸಿದ್ದರಾಮಯ್ಯ

ಈ ಬಾರಿಯ 'ಮೈಸೂರು ದಸರಾ' ಉದ್ಘಾಟನೆಯನ್ನು ಬೂಕರ್ ಪ್ರಶಸ್ತಿ ವಿಜೇತೆ ಲೇಖಕಿ...

ದಸರಾ ಉದ್ಘಾಟನೆಗೆ ಸೋನಿಯಾ ಗಾಂಧಿಗೆ ಆಹ್ವಾನ ಸಂಪೂರ್ಣ ಸುಳ್ಳು: ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ

ಈ ಬಾರಿಯ ದಸರಾ ಉದ್ಘಾಟನೆಗೆ ಕಾಂಗ್ರೆಸ್ ಅಧಿನಾಯಕಿ ಸೋನಿಯಾ ಗಾಂಧಿಯನ್ನು ಆಹ್ವಾನಿಸಲಾಗಿದೆ...

Download Eedina App Android / iOS

X