ಸರ್ಕಾರ ನೀಡುವ ಪ್ರಶಸ್ತಿಗಳಿಗೆ ಇನ್ನು ಮುಂದೆ ಆಯ್ಕೆ ಸಮಿತಿ: ಡಿಸಿಎಂ ಡಿ ಕೆ ಶಿವಕುಮಾರ್

Date:

Advertisements

ಸರ್ಕಾರಿ ಪ್ರಶಸ್ತಿಗಳಿಗೆ ಅರ್ಜಿ ಹಾಕುವ ಪದ್ಧತಿ ನಿಲ್ಲಿಸಲು ಚಿಂತನೆ ನಡೆಸಿರುವ ಬಗ್ಗೆ ಮಾತನಾಡಿರುವ ಉಪ ಮುಖ್ಯಮಂತ್ರಿ ಡಿ ಕೆ ಶಿವಕುಮಾರ್, ‘ಇಷ್ಟು ದಿನ ಸರ್ಕಾರ ನೀಡುವ ಪ್ರಶಸ್ತಿಗಳಿಗೆ ಆಸಕ್ತರು ಅರ್ಜಿ ಸಲ್ಲಿಸಿ ಅದನ್ನು ಪಡೆಯುವ ಪದ್ಧತಿ ಇತ್ತು. ಆದರೆ, ಇನ್ನು ಆ ಪದ್ಧತಿಯನ್ನು ಕೈಬಿಟ್ಟು ಪರಿಣಿತರ ಸಮಿತಿ ಮುಖಾಂತರ ಆಯ್ಕೆ ಮಾಡಲು ರಾಜ್ಯ ಸರ್ಕಾರ ಮುಂದಾಗಿದೆ’ ಎಂದು ತಿಳಿಸಿದ್ದಾರೆ.

ನಗರದ ಗಾಂಧಿಭವನದಲ್ಲಿ ಶನಿವಾರ ನಡೆದ ಸಂಸ್ಕೃತಿ ಸಂಗಮ- 23 ಪ್ರಶಸ್ತಿ ಪ್ರದಾನ ಮಾಡಿ ಮಾತನಾಡಿದ ಅವರು, ‘ಪ್ರಶಸ್ತಿ ಆಯ್ಕೆಗೆ ಹೊಸ ವ್ಯವಸ್ಥೆ ಜಾರಿಗೆ ತರಬೇಕಿದೆ. ಯಾವುದೇ ಪ್ರಶಸ್ತಿಯಾದರೂ ಅದಕ್ಕೆ ಗೌರವ ಇರಬೇಕು. ಯಾವುದೇ ಒತ್ತಡಕ್ಕೆ ಒಳಗಾಗಿ ಪ್ರಶಸ್ತಿ ನೀಡಬಾರದು. ರಾಜ್ಯೋತ್ಸವದಷ್ಟೇ ವರ್ಷದ ಸಂಖ್ಯೆಯ ಪ್ರಶಸ್ತಿ ನೀಡುವ ಆಲೋಚನೆಯಿದೆ. ಆಯ್ಕೆ ಮಾಡುವ ವಿಧಾನದ ಬಗ್ಗೆ ಚಿಂತನೆ ನಡೆಸಲಾಗುವುದು’ ಎಂದು ತಿಳಿಸಿದರು.

ಕನ್ನಡ ರಾಜ್ಯೋತ್ಸವ ಪ್ರಶಸ್ತಿಗೆ ಆನ್‌ಲೈನ್‌ ಅರ್ಜಿ ಕರೆದಿದ್ದೆವು. ಸುಮಾರು ಎರಡೂವರೆ ಸಾವಿರಕ್ಕೂ ಹೆಚ್ಚು ಅರ್ಜಿಗಳು ಬಂದಿವೆ. ಜಾತಿ, ಜಿಲ್ಲಾವಾರು ಮತ್ತು ಎಲ್ಲ ಕ್ಷೇತ್ರಗಳಿಗೆ ಆದ್ಯತೆ ನೀಡಬೇಕು. ಎಲ್ಲವನ್ನೂ ಲೆಕ್ಕ ಹಾಕುವಾಗ, ಯಾರನ್ನು ಆಯ್ಕೆ ಮಾಡುವುದು, ಯಾರನ್ನು ಬಿಡುವುದು ಎನ್ನುವ ಸವಾಲು ನಮ್ಮ ಮುಂದಿದೆ. ನಾವೀಗ ಸಂಕಷ್ಟದಲ್ಲಿ ಸಿಕ್ಕಿ ಹಾಕಿಕೊಂಡಿದ್ದೇವೆ ಎಂದು ಉಪಮುಖ್ಯಮಂತ್ರಿ ಹೇಳಿದರು.

Advertisements

ಪ್ರಸ್ತುತ ವರ್ಷದ ಪ್ರಶಸ್ತಿ ನೀಡಲು ಎಲ್ಲ ಕ್ಷೇತ್ರಗಳ 20-30 ತಜ್ಞರ ಸಮಿತಿಯನ್ನು ಮಾಡಲಾಗಿದೆ. ಸರ್ಕಾರ ನೀಡುವ ಯಾವುದೇ ಪ್ರಶಸ್ತಿಯನ್ನು ಸಮಿತಿಯೇ ಪರಿಶೀಲನೆ ಮಾಡಿ ನೀಡುವ ವ್ಯವಸ್ಥೆಯನ್ನು ಜಾರಿಗೆ ತರಬೇಕು. ಹಿಂದೆ ಕೆಲವು ಸಲ ಪ್ರಶಸ್ತಿ ಪುರಸ್ಕೃತರ ಸಂಖ್ಯೆ 200- 300ಕ್ಕೆ ಮುಟ್ಟಿದ್ದಿದೆ ಎಂದು ಡಿ.ಕೆ. ಶಿವಕುಮಾರ್ ಹೇಳಿದರು.

ಸರ್ಕಾರ ಮಾಡಲು ಆಗದೇ ಇರುವ ಕೆಲಸಗಳನ್ನು ಸಂಘ- ಸಂಸ್ಥೆಗಳು, ಮಠಗಳು ಮಾಡುತ್ತಿವೆ. ಅನೇಕ ಸಾಧಕರನ್ನು ಗುರುತಿಸಿ, ಸಮಾಜದ ಒಳಿತಿಗೆ ಕೆಲಸ ಮಾಡುತ್ತಿವೆ. ಇಲ್ಲಿ ನಾನೊಬ್ಬನೇ ಅಲ್ಲ, ನಮ್ಮ ಹಿರಿಯರನ್ನು ನೆನಪಿಸಿಕೊಳ್ಳಬೇಕು ಎಂದು ಡಿ.ಕೆ. ಶಿವಕುಮಾರ್‌ ತಿಳಿಸಿದರು.

ಅಮ್ಮನ ನೆನಪು ಪ್ರೀತಿಯ ಮೂಲ, ಗುರುವಿನ ನೆನಪು ಜ್ಞಾನದ ಮೂಲ, ದೇವರ ನೆನಪು ಭಕ್ತಿಯ ಮೂಲ, ಈ ಮೂರರ ನೆನಪು ಮನುಷ್ಯತ್ವಕ್ಕೆ ಮೂಲ, ಮನುಷ್ಯತ್ವ ಮೋಕ್ಷಕ್ಕೆ ಮೂಲ. ಅದರಂತೆ ಸಿ. ಸೋಮಶೇಖರ್ ಅವರು ಜ್ಞಾನ ಭಂಡಾರದಲ್ಲಿ ಮುಳುಗೆದ್ದವರು. ಇವರಲ್ಲಿ ಸರಸ್ವತಿ ಮನೆ ಮಾಡಿದ್ದಾಳೆ. ಅವರಲ್ಲಿ ಇರುವ ಜ್ಞಾನವನ್ನು ಸಮಾಜಕ್ಕೆ ಮರಳಿ ನೀಡುವ ನಿಟ್ಟಿನಲ್ಲಿ ಕೆಲಸ ಮಾಡುತ್ತಿದ್ದಾರೆ ಎಂದು ಡಿ.ಕೆ. ಶಿವಕುಮಾರ್‌ ಹೇಳಿದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

2029ರ ಚುನಾವಣೆಯಲ್ಲಿ ರಾಹುಲ್ ಗಾಂಧಿ ಇಂಡಿಯಾ ಒಕ್ಕೂಟದ ಪ್ರಧಾನಿ ಅಭ್ಯರ್ಥಿ: ತೇಜಸ್ವಿ ಯಾದವ್

2029ರ ಲೋಕಸಭೆ ಚುನಾವಣೆಯಲ್ಲಿ ಸದ್ಯ ಲೋಕಸಭೆ ವಿಪಕ್ಷ ನಾಯಕರಾಗಿರುವ ರಾಹುಲ್ ಗಾಂಧಿ...

ಸಾರ್ವಜನಿಕ ಸಭೆಯಲ್ಲಿ ದೆಹಲಿ ಸಿಎಂ ರೇಖಾ ಗುಪ್ತಾ ಮೇಲೆ ಹಲ್ಲೆ; ಆಸ್ಪತ್ರೆಗೆ ದಾಖಲು

ಬುಧವಾರ(ಆಗಸ್ಟ್ 20) ಬೆಳಿಗ್ಗೆ ತಮ್ಮ ನಿವಾಸದಲ್ಲಿ ನಡೆದ ಸಾರ್ವಜನಿಕ ವಿಚಾರಣೆಯ ಸಂದರ್ಭದಲ್ಲಿ...

ಅರಸು ಪತ್ರಕರ್ತರನ್ನು ಹಚ್ಚಿಕೊಳ್ಳಲೂ ಇಲ್ಲ, ಓಲೈಸಲೂ ಇಲ್ಲ: ಕಲ್ಲೆ ಶಿವೋತ್ತಮರಾವ್

2025-26ನೇ ಸಾಲಿನ ಡಿ.ದೇವರಾಜ ಅರಸು ಪ್ರಶಸ್ತಿಗೆ ಹಿರಿಯ ಪತ್ರಕರ್ತ ಕಲ್ಲೆ ಶಿವೋತ್ತಮರಾವ್...

Download Eedina App Android / iOS

X