ಒಕ್ಕಲಿಗರ ಬಗ್ಗೆ ಅವಹೇಳನಕಾರಿ ಹೇಳಿಕೆ ಆರೋಪ: ಪ್ರೊ.ಕೆ.ಎಸ್. ಭಗವಾನ್ ವಿರುದ್ಧ ಎಫ್‌ಐಆರ್

Date:

Advertisements

ಮೈಸೂರಿನಲ್ಲಿ ಇತ್ತೀಚೆಗೆ ನಡೆದ ಮಹಿಷ ದಸರಾ ಉತ್ಸವದಲ್ಲಿ ಒಕ್ಕಲಿಗ ಸಮುದಾಯದ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿರುವ ಆರೋಪದ ಮೇಲೆ ಸಾಹಿತಿ, ಚಿಂತಕ ಪ್ರೊ.ಕೆ.ಎಸ್. ಭಗವಾನ್ ವಿರುದ್ಧ ಎಫ್‌ಐಆರ್ ದಾಖಲು ಮಾಡಲಾಗಿದೆ. ಐಪಿಸಿ ಸೆಕ್ಷನ್ 153 ಹಾಗೂ 153 A ಅಡಿಯಲ್ಲಿ ಪ್ರಕರಣವನ್ನು ದಾಖಲು ಮಾಡಿಕೊಳ್ಳಲಾಗಿದೆ.

ಮೈಸೂರಿನ ಕರ್ನಾಟಕ ರಾಜ್ಯ ಒಕ್ಕಲಿಗ ಸಂಘದ ನಿರ್ದೇಶಕ ಗಂಗಾಧರ್ ಸಿ. ಎಂಬುವವರು ನೀಡಿದ ದೂರಿನ ಆಧಾರದ ಮೇಲೆ ದೇವರಾಜ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲು ಮಾಡಿಕೊಳ್ಳಲಾಗಿದೆ. ಮಹಿಷ ಉತ್ಸವದಲ್ಲಿ ಒಕ್ಕಲಿಗರ ಕುರಿತು ಅವಹೇಳನಕಾರಿ ಹೇಳಿಕೆ ನೀಡಿದ ಬಳಿಕ ಆ ಸಮುದಾಯದವರಿಂದ ವಿರೋಧ ವ್ಯಕ್ತವಾಗಿತ್ತು.

ಭಗವಾನ್ ಹೇಳಿದ್ದೇನು?
ನಮ್ಮದು ಬುದ್ಧ ಧರ್ಮವಾಗಿದೆ. ಬುದ್ಧ‌ ನಮ್ಮಲ್ಲಿ ಹುಟ್ಟಿದವನಾಗಿದ್ದಾನೆ. ಆದರೆ, ಹಿಂದು ಧರ್ಮ ಹೊರಗಿನಿಂದ ಬಂದಿದೆ. ಬುದ್ಧ ಗುರುಗಳು ಜ್ಞಾನವನ್ನು ಕೊಟ್ಟಿದ್ದಾರೆ. ವೈದಿಕರು ಅಜ್ಞಾನವನ್ನು ಸಮಾಜಕ್ಕೆ ಕೊಡುತ್ತಿದ್ದಾರೆ. ಜನಿವಾರದಿಂದ ಜಾತಿ ಗುರುತಿಸುತ್ತಾರೆ. ಬ್ರಾಹ್ಮಣರು ವೈದಿಕರು ಬೇರೆ ದೇಶದಿಂದ ಬಂದಿರುವವರು. ಎಲ್ಲ ಶೂದ್ರರು ಬ್ರಾಹ್ಮಣರ ಗುಲಾಮರು. ಶೂದ್ರನನ್ನು ದೇವರು ಸೃಷ್ಟಿ ಮಾಡಿರುವುದೇ ಬ್ರಾಹ್ಮಣರ ಸೇವೆ ಮಾಡಲು ಎಂದು‌ ತಿಳಿಸಿದ್ದಾರೆ. ಇಂತಹ ಧರ್ಮವು ನಮಗೆ ಬೇಕಿಲ್ಲ. ಒಕ್ಕಲಿಗರು ಸಂಸ್ಕೃತಿ ಹೀನರು‌. ಈ ಮಾತು ನನ್ನದಲ್ಲ‌ ಕುವೆಂಪು ಅವರದ್ದು. ನಾನು ಹೇಳಿದರೆ ನನ್ನನ್ನು ಹೊಡೆಯುವುದಕ್ಕೆ ಬರುತ್ತಾರೆ. ನಿಜ ಹೇಳಿದವರನ್ನು ಯಾರೂ ಬಿಡುವುದಿಲ್ಲ. ಆದರೆ ನಿಜ ಹೇಳಿಯೇ ಸಾಯಬೇಕು ಎಂದು ಮಹಿಷ ದಸರಾದಲ್ಲಿ ಭಾಗವಹಿಸಿದ್ದ ಸಾಹಿತಿ ಕೆ.ಎಸ್.‌ ಭಗವಾನ್‌ ತಮ್ಮ ಭಾಷಣದ ವೇಳೆ ಈ ರೀತಿಯ ಹೇಳಿಕೆ ನೀಡಿದ್ದರು.

Advertisements

ಗಡಿಪಾರಿಗೆ ಆಗ್ರಹ
ಇದೇ ವಿಚಾರವಾಗಿ ಮೈಸೂರಿನ ಪ್ರೆಸ್‌ಕ್ಲಬ್‌ನಲ್ಲಿ ಇಂದು ಸುದ್ದಿಗೋಷ್ಠಿ ನಡೆಸಿದ ಅಖಿಲ ಕರ್ನಾಟಕ ಒಕ್ಕಲಿಗರ ಸಂಘ, ಪೊಲೀಸ್‌ ಇಲಾಖೆ ಭಗವಾನ್ ವಿರುದ್ಧ ಎಫ್‌ಐಆರ್ ಹಾಕಿರುವುದರಿಂದ ಆತನನ್ನು ಬಂಧಿಸಿ ಗಡಿಪಾರು ಮಾಡಬೇಕು. ಭಗವಾನ್ ಅವರನ್ನು ತನಿಖೆಗೆ ಒಳಪಡಿಸಿ, ಯಾವುದೇ ಪ್ರಭಾವಿಗಳ ಒತ್ತಡಕ್ಕೆ ಮಣಿಯದೆ ಪ್ರಾಮಾಣಿಕವಾಗಿ, ಪಾರದರ್ಶಕವಾಗಿ ತನಿಖೆ ನಡೆಸಬೇಕು ಎಂದು ಆಗ್ರಹಿಸಿದ್ದಾರೆ.

OKKALIGA

ಪತ್ರಿಕಾಗೋಷ್ಠಿಯಲ್ಲಿ ಸಂಘದ ರಾಜ್ಯಾಧ್ಯಕ್ಷ ಸಿ ಜಿ ಗಂಗಾಧರ್, ಜಿಲ್ಲಾ ಗೌರವಾಧ್ಯಕ್ಷ ಡಾ.ಸಿ.ವೈ.ಶಿವೇಗೌಡ, ಜಿಲ್ಲಾಧ್ಯಕ್ಷ ತೇಜೇಶ್ ಲೋಕೇಶ್ ಗೌಡ, ಮೈಸೂರು ಜಿಲ್ಲಾ ಒಕ್ಕಲಿಗರ ಸಂಘದ ಅಧ್ಯಕ್ಷ ಮರಿಸ್ವಾಮಿ ಕಾರ್ಯದರ್ಶಿ ಚೇತನ್ ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಳ್ಳಾರಿ | ನಶಿಸಿ ಹೋಗುತ್ತಿರುವ ತೊಗಲುಗೊಂಬೆ ಪ್ರದರ್ಶನ ಉಳಿಸಿ ಬೆಳೆಸಬೇಕು: ಜೋಳದರಾಶಿ ತಿಮ್ಮಪ್ಪ

ನಶಿಸಿ ಹೋಗುತ್ತಿರುವ ತೊಗಲು ಗೊಂಬೆ ಪ್ರದರ್ಶನ ಸಂಸ್ಕೃತಿಯನ್ನು ಉಳಿಸಿ ಬೆಳೆಸುವ ಜವಾಬ್ದಾರಿ...

ಭಟ್ಕಳ | ಮಗಳ ಅಶ್ಲೀಲ ವಿಡಿಯೊ ವೈರಲ್ ಮಾಡುವುದಾಗಿ ಬೆದರಿಕೆ: ಮೂವರ ಬಂಧನ

ಉತ್ತರ ಕನ್ನಡ ಜಿಲ್ಲೆಯ ಭಟ್ಕಳ ನಗರದ ಕಿದ್ವಾಯಿ ರಸ್ತೆಯೊಂದರ ತರಕಾರಿ ವ್ಯಾಪಾರಿಯನ್ನು...

ಮಂಗಳೂರು | ಸ್ನಾತಕೋತ್ತರದತ್ತ ಮುಖಮಾಡದ ಪದವೀಧರರು: ಪ್ರವೇಶಾತಿ ಗಡುವು ವಿಸ್ತರಣೆ

ನಾಲ್ಕು ದಶಕಗಳಷ್ಟು ಹಳೆಯದಾದ ಮಂಗಳೂರು ವಿಶ್ವವಿದ್ಯಾಲಯ(MU), ನಿರೀಕ್ಷಿತ ಸಂಖ್ಯೆಯ ಪ್ರವೇಶಗಳನ್ನು ಪಡೆಯಲು...

ತುಮಕೂರು | ಅಧಿವೇಶನದಲ್ಲಿ ಆರ್‌ಎಸ್ಎಸ್ ಗೀತೆ : ಡಿಕೆಶಿ ವಿರುದ್ಧ ಕೆ. ಎನ್ ರಾಜಣ್ಣ ವಾಗ್ದಾಳಿ

ಡಿ.ಕೆ.ಶಿವಕುಮಾ‌ರ್ ಅಧಿವೇಶನದಲ್ಲಿ ಆರ್‌ಎಸ್ಎಸ್ ಗೀತೆ ಹಾಡಿದ ಬಗ್ಗೆ  ಮಾಜಿ ಸಚಿವ ಕೆ...

Download Eedina App Android / iOS

X