ಇಸ್ರೇಲ್‌-ಪ್ಯಾಲೆಸ್ತೀನ್ ಸಂಘರ್ಷ | ದಾಳಿಯಿಂದ ನಲುಗಿರುವ ಗಾಜಾಗೆ ಅಗತ್ಯ ಸಾಮಗ್ರಿ ರವಾನಿಸಿದ ಭಾರತ

Date:

Advertisements

ಇಸ್ರೇಲ್‌-ಪ್ಯಾಲೆಸ್ತೀನ್ ನಡುವಿನ ಸಂಘರ್ಷ ಮುಂದುವರೆದಿದೆ ಈ ನಡುವೆ, ಗಾಜಾದಲ್ಲಿರುವ ಪ್ಯಾಲೆಸ್ತೀನಿಯರಿಗೆ ಭಾರತವು ಅಗತ್ಯ ವೈದ್ಯಕೀಯ ನೆರವು ಮತ್ತು ವಿಪತ್ತು ಪರಿಹಾರ ಸಾಮಗ್ರಿಗಳನ್ನು ಕಳುಹಿಸಿದೆ.

“ಅಗತ್ಯ ಔಷಧಿಗಳು, ಶಸ್ತ್ರಚಿಕಿತ್ಸಾ ವಸ್ತುಗಳು, ಟೆಂಟ್‌ಗಳು, ಮಲಗುವ ಬ್ಯಾಗ್‌ಗಳು, ಟಾರ್ಪಲಿನ್‌ಗಳು, ನೈರ್ಮಲ್ಯ ಉಪಕರಗಳು ಮತ್ತು ಇತರ ಅಗತ್ಯ ವಸ್ತುಗಳು ಹಾಗೂ ನೀರು ಶುದ್ಧೀಕರಣ ಮಾತ್ರೆಗಳನ್ನು ಗಾಜಾಗೆ ಕಳುಹಿಸಲಾಗಿದೆ” ಎಂದು ವಿದೇಶಾಂಗ ಸಚಿವಾಲಯದ ವಕ್ತಾರ ಅರಿಂದಮ್ ಬಾಗ್ಚಿ ಟ್ವೀಟ್‌ ಮಾಡಿದ್ದಾರೆ.

ಇಸ್ರೇಲ್‌ ಮೇಲೆ ಹಮಸ್‌ ದಾಳಿ ಮಾಡಿದ ಬಳಿಕ ಇಸ್ರೇಲಿ ಮಿಲಿಟರಿ ಗಾಜಾದ ಮೇಲೆ ನಿರಂತರ ದಾಳಿ ಮಾಡಿದೆ. ಗಾಜಾದಲ್ಲಿ ಸಾಕಷ್ಟು ಹಾನಿಯಾಗಿದೆ. 1,400ಕ್ಕೂ ಹೆಚ್ಚು ಮಂದಿ ಸಾವನ್ನಪ್ಪಿದ್ದಾರೆ. ಹಲವರನ್ನು ಗುಂಡಿಕ್ಕಿ ಕೊಲ್ಲಲಾಗಿದೆ. ಇತ್ತೀಚೆಗೆ ಆಸ್ಪತ್ರೆಯ ಮೇಲೆ ಬಾಂಬ್‌ ದಾಳಿ ನಡೆದಿದೆ.

Advertisements

ಹೀಗಾಗಿ, ಗಾಜಾದಲ್ಲಿರುವ ಜನರು ಎಲ್ಲಿಗೆ ಹೋಗಬೇಕು. ತಮ್ಮ ಕುಟುಂಬಗಳನ್ನು ಹೇಗೆ ರಕ್ಷಿಸಬೇಕು ಎಂಬುದೇ ತೋಚನೆ ಅಸಹಾಯಕರಾಗಿದ್ದಾರೆ.

ಈ ಮಧ್ಯೆ, ಈಜಿಪ್ಟ್‌ನಲ್ಲಿ ಶಾಂತಿ ಸಭೆ ನಡೆದಿದ್ದು, ವಿಶ್ವಸಂಸ್ಥೆ ಮುಖ್ಯಸ್ಥ ಆಂಟೋನಿಯೊ ಗುಟೆರೆಸ್ ಅವರು “ಈ ಭಯಾನಕ ದುಃಸ್ವಪ್ನವನ್ನು ಕೊನೆಗೊಳಿಸಬೇಕು” ಎಂದಿದ್ದು, ಸಂಘರ್ಷವನ್ನ ಕೊನೆಗೊಳಿಸುವಂತೆ ಒತ್ತಾಯಿಸಿದ್ದಾರೆ.

ಸಭೆಯ ಬಳಿಕ, ಆಹಾರ, ನೀರು ಮತ್ತು ಔಷಧಿ ಈಜಿಪ್ಟ್‌ನಿಂದ ಗಾಜಾಗೆ ರವಾನೆಯಾಗಿದೆ. ಇದೀಗ, ಭಾರತವೂ ಅಗತ್ಯ ಸಲಕರಣೆಗಳನ್ನು ಈಜಿಪ್ಟ್‌ನ ರಫಾ ಗಡಿಯ ಮೂಲಕ ಗಾಜಾಗೆ ರವಾಸುತ್ತಿದೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಅಯೋಧ್ಯೆ | ಆಸ್ಪತ್ರೆಗೆ ದಾಖಲಿಸಲು ನಿರಾಕರಣೆ, ತಂದೆಯ ತೋಳಿನಲ್ಲಿ ಮೃತಪಟ್ಟ ಬಾಲಕ

ತೀವ್ರವಾಗಿ ಅಸ್ಪಸ್ಥಗೊಂಡಿದ್ದ ತನ್ನ 12 ವರ್ಷದ ಪುತ್ರನನ್ನು ಸರ್ಕಾರಿ ಆಸ್ಪತ್ರೆಗೆ ಕರೆ...

ಹಿಂಸಾಚಾರ ಪ್ರಕರಣ: ಪಾಕ್ ಮಾಜಿ ಪ್ರಧಾನಿ ಇಮ್ರಾನ್ ಖಾನ್‌ಗೆ ಜಾಮೀನು

ಪಾಕಿಸ್ತಾನದ ಮಾಜಿ ಪ್ರಧಾನಮಂತ್ರಿ ಇಮ್ರಾನ್ ಖಾನ್‌ಗೆ ಮೇ 9, 2023ರ ಹಿಂಸಾಚಾರ...

ನಟಿಗೆ ಕಿರುಕುಳ ಆರೋಪ: ಕೇರಳ ಯುವ ಕಾಂಗ್ರೆಸ್ ಅಧ್ಯಕ್ಷನ ಹುದ್ದೆ ತೊರೆದ ರಾಹುಲ್ ಮಾಂಕೂಟತ್ತಿಲ್

ಕೇರಳದ ರಾಜಕೀಯದಲ್ಲಿ ದೊಡ್ಡ ಸಂಚಲನ ಸೃಷ್ಟಿಸಿರುವ ಅಶ್ಲೀಲ ಸಂದೇಶ ಹಾಗೂ ದುರ್ವರ್ತನೆ...

ನ್ಯಾಯದೇಗುಲಗಳಿಗೆ ಬಲು ಇಕ್ಕಟ್ಟಾದ ಬಾಗಿಲುಗಳ ಕಟ್ಟಿದ್ದೇವೆ- ಸಿಜೆಐ

‘ಹೈಕೋರ್ಟ್ ಜಡ್ಜ್ ಗಳ ಪೈಕಿ ಮೊಂಡರು, ಹಟಮಾರಿಗಳು, ಜಂಭದ ಕೋಳಿಗಳಿದ್ದಾರೆ...ಇನ್ನು ಕೆಲವರ...

Download Eedina App Android / iOS

X