ಬೆಂಗಳೂರು | ಕೆರೆ/ಉದ್ಯಾನವನದ ನಿರ್ವಹಣೆಗೆ ಸ್ವಯಂ ಸೇವಕರಾಗಲು ನಾಗರಿಕರಿಗೆ ಕರೆ

Date:

Advertisements

ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿರುವ ಕೆರೆ ಅಥವಾ ಉದ್ಯಾನವನದ ನಿರ್ವಹಣೆಯ ಮೇಲ್ವಿಚಾರಣೆಗೆ ಸ್ವಯಂ ಸೇವಕರಾಗಲು ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ನಾಗರಿಕರಿಗೆ ಅವಕಾಶ ಕಲ್ಪಿಸಿದೆ.

ಪಾಲಿಕೆಯು ತನ್ನ ವೆಬ್‌ಸೈಟ್‌ನಲ್ಲಿ ‘ಕೆರೆ’ ಮತ್ತು ‘ಹಸಿರು ಮಿತ್ರ’ ಕಾರ್ಯಕ್ರಮಕ್ಕಾಗಿ ಅರ್ಜಿ ಸಲ್ಲಿಸಲು ನಾಗರಿಕರನ್ನು ಆಹ್ವಾನಿಸಿದೆ. ಅಕ್ಟೋಬರ್ 30 ಅರ್ಜಿ ಸಲ್ಲಿಸಲು ಕೊನೆಯ ದಿನಾಂಕವಾಗಿದ್ದು, ಸೀಮಿತ ಮಂದಿಗೆ ಮಾತ್ರ ಅವಕಾಶ ನೀಡಲಾಗುತ್ತದೆ. ಬಿಬಿಎಂಪಿ ಪ್ರಾರಂಭಿಸಿರುವ ಈ ಹೊಸ ಕಾರ್ಯಕ್ರಮಕ್ಕೆ ನಾಗರಿಕರು ನೋಂದಾಯಿಸಿಕೊಳ್ಳುವ ಮೂಲಕ ಈ ಕಾರ್ಯದಲ್ಲಿ ಪಾಲ್ಗೊಳ್ಳಬಹುದು ಎಂದು ಹೇಳಿದೆ.

ಉಪಮುಖ್ಯಮಂತ್ರಿ ಮತ್ತು ಬೆಂಗಳೂರು ಅಭಿವೃದ್ಧಿ ಸಚಿವ ಡಿ ಕೆ ಶಿವಕುಮಾರ್ ಅವರು ಈ ತಿಂಗಳ ಆರಂಭದಲ್ಲಿ ‘ಬ್ರ್ಯಾಂಡ್ ಬೆಂಗಳೂರು’ ಅಭಿಯಾನದ ಅಡಿಯಲ್ಲಿ ಹೊಸ ಕಾರ್ಯಕ್ರಮವನ್ನು ಘೋಷಿಸಿದರು. ಅಧಿಕಾರಗಳಿಗೆ ನೇರ ಪ್ರವೇಶ ಹೊಂದಿರುವ ಪಕ್ಷದ ಕಾರ್ಯಕರ್ತರನ್ನು ಹೊರತುಪಡಿಸಿ, ಕಾರ್ಯಕ್ರಮವು ಸಾಮಾನ್ಯ ನಾಗರಿಕರಿಗೆ ಮಾತ್ರ ಎಂದು ಹೇಳಿದ್ದರು.

Advertisements

ಬಿಬಿಎಂಪಿ ವೆಬ್‌ಸೈಟ್‌ನಲ್ಲಿ ಒದಗಿಸಲಾದ ನೋಂದಣಿ ನಮೂನೆಯುಲ್ಲಿ ಆಸಕ್ತ ಸ್ವಯಂಸೇವಕರು ಹೆಸರು, ಫೋನ್ ಸಂಖ್ಯೆ, ಇಮೇಲ್ ಐಡಿ, ವಸತಿ ವಿಳಾಸ, ಮತದಾರರ ಗುರುತಿನ ಪ್ರತಿ, ವಾರ್ಡ್‌ನ ಹೆಸರು ಮತ್ತು ಆದ್ಯತೆಯ ಕೆರೆ ಅಥವಾ ಉದ್ಯಾನದಂತಹ ವಿವರಗಳನ್ನು ನೀಡಬೇಕು. ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ (ಬಿಡಿಎ) ಅಡಿಯಲ್ಲಿ ಬರುವುದರಿಂದ ವರ್ತೂರು ಮತ್ತು ಬೆಳ್ಳಂದೂರು ಕೆರೆಗಳು ಪಟ್ಟಿಯಲ್ಲಿಲ್ಲ.

ಬಿಬಿಎಂಪಿಯ ಉದ್ಯಾನಗಳು ಮತ್ತು ಕೆರೆಗಳ ವಿಶೇಷ ಆಯುಕ್ತೆ ಪ್ರೀತಿ ಗೆಹ್ಲೋಟ್ ಮಾತನಾಡಿ, “ಕಾರ್ಯಕ್ರಮವು 1,200ಕ್ಕೂ ಹೆಚ್ಚು ಉದ್ಯಾನವನಗಳು ಮತ್ತು 200 ಕೆರೆಗಳನ್ನು ಒಳಗೊಂಡಿದೆ. ಇದು ಸಂಪೂರ್ಣವಾಗಿ ಸ್ವಯಂಸೇವಕ ಸೇವೆಯಾಗಿದೆ”ಎಂದು ಹೇಳಿದರು.

ನಾಗರಿಕರು ಕೆರೆಗಳು ಮತ್ತು ಉದ್ಯಾನವನಗಳಲ್ಲಿನ ನಿರ್ವಹಣಾ ಚಟುವಟಿಕೆಗಳನ್ನು ನಿಯಮಿತವಾಗಿ ಮೇಲ್ವಿಚಾರಣೆ ಮಾಡಬಹುದು. ಇದರಿಂದಾಗಿ ಪಾಲಿಕೆಯು ಉತ್ತಮ ಸೇವೆಗಳನ್ನು ಒದಗಿಸಲು ಮತ್ತು ನಾಗರಿಕರ ಅವಶ್ಯಕತೆಗಳನ್ನು ಅರ್ಥಮಾಡಿಕೊಳ್ಳಲು ಸಹಾಯ ಮಾಡುತ್ತದೆ. ಕೆರೆ ಮತ್ತು ಉದ್ಯಾನವನ ನಿರ್ವಹಣೆಗೆ ಪಾಲಿಕೆಯು ಉದಾರವಾಗಿ ಖರ್ಚು ಮಾಡುತ್ತದೆ. ಆದರೆ, ಎಂಜಿನಿಯರ್‌ಗಳನ್ನು ಹೊರತುಪಡಿಸಿ ಎರಡನೇ ಹಂತದ ಪರಿಶೀಲನೆ ನಡೆದಿಲ್ಲ.

ಬಿಬಿಎಂಪಿ ವೆಬ್‌ಸೈಟ್‌ನಲ್ಲಿ ಎಲ್ಲ ಕೆರೆಗಳು ಮತ್ತು ಉದ್ಯಾನವನಗಳನ್ನು ಪ್ರದರ್ಶಿಸಿಲ್ಲ. ಡ್ರಾಪ್-ಡೌನ್ ಮೆನುವಿನಲ್ಲಿ ಕೆಲವು ವಾರ್ಡ್‌ಗಳ ಹೆಸರು ಇಲ್ಲ ಎಂದು ಎಂದು ಕೆಲವರು ದೂರಿದ್ದಾರೆ.

ಈ ಸುದ್ದಿ ಓದಿದ್ದೀರಾ? ಬೆಂಗಳೂರು | ಸಿಸಿಬಿ ಪೊಲೀಸರು ಸೋಗೆಯಲ್ಲಿ ವ್ಯಕ್ತಿಯ ಅಪಹರಣ; ಹಣಕ್ಕೆ ಬೇಡಿಕೆ ಇಟ್ಟ ಆರೋಪಿಗಳು

ಸಾರಕ್ಕಿ ಕೆರೆ ಸುಧಾರಣಾ ಟ್ರಸ್ಟ್‌ನ ಮ್ಯಾನೇಜಿಂಗ್ ಟ್ರಸ್ಟಿ ಪ್ರೊ.ಕೆ.ಎಸ್.ಭಟ್ ಮಾತನಾಡಿ, “ಇದೇ ರೀತಿಯ ಕೆರೆ ವಾರ್ಡನ್ ಎಂಬ ಪರಿಕಲ್ಪನೆಯು ಐದು ವರ್ಷಗಳ ಹಿಂದೆ ಅಸ್ತಿತ್ವದಲ್ಲಿತ್ತು. ಆದರೆ, ಬಿಬಿಎಂಪಿ ಅವರ ಅವಲೋಕನಗಳನ್ನು ಗಣನೆಗೆ ತೆಗೆದುಕೊಂಡಿಲ್ಲ” ಎಂದು ದೂರಿದರು.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಪೋಕ್ಸೋ ಪ್ರಕರಣ: ಆರೋಪಿಗಳಿಗೆ ದಂಡ, ತಲಾ ಹತ್ತು ವರ್ಷ ಜೈಲು ಶಿಕ್ಷೆ

ಪೋಕ್ಸೋ ಪ್ರಕರಣದಲ್ಲಿ ಇಬ್ಬರು ಆರೋಪಿಗಳಿಗೆ ತಲಾ ಹತ್ತು ವರ್ಷ ಜೈಲು ಶಿಕ್ಷೆ...

ಮಂಗಳೂರು | ಅಲ್‌ ವಫಾ ಟ್ರಸ್ಟ್‌ನಿಂದ 15 ಜೋಡಿಗಳಿಗೆ ಸರಳ ಸಾಮೂಹಿಕ ವಿವಾಹ

ಮಂಗಳೂರಿನ ಅಲ್ ವಫಾ ಚಾರಿಟೆಬಲ್ ಟ್ರಸ್ಟ್ ಹಮ್ಮಿಕೊಂಡಿದ್ದ 15 ಜೋಡಿಗಳ ಸರಳ...

ಚಿಕ್ಕಮಗಳೂರು l ಶೋ ರೂಮ್ ಸಿಬ್ಬಂದಿಯಿಂದಲೇ ಡೀಸೆಲ್ ಕಳ್ಳತನ

ಶೋ ರೂಂ ಸಿಬ್ಬಂದಿಯೇ ಹೊಸ ವಾಹನದ ಡೀಸೆಲ್‌ ಕಳ್ಳತನ ಮಾಡಿದ ಘಟನೆ...

ಗದಗ | ಒಳಮೀಸಲಾತಿ ಜಾರಿ, ಬಹುದಿನಗಳ ಕನಸು ನನಸು ಮಾಡಿದ ಎಲ್ಲರಿಗೂ ಅಭಿನಂದನೆ: ಎಸ್. ಎನ್. ಬಳ್ಳಾರಿ

ಪರಿಶಿಷ್ಟ ಜಾತಿಗಳ ಮೂರು ದಶಕಗಳ ಒಳಮೀಸಲಾತಿ ಹೋರಾಟವನ್ನು ಮಾನ್ಯ ಸುಪ್ರೀಂ ಕೋರ್ಟ್...

Download Eedina App Android / iOS

X