ಮಂಡ್ಯ | ಅಧಿಕಾರಿಗಳು ರಾಜಕೀಯಕ್ಕೆ ಸೇವೆ ಮಾಡಲು ಬರುತ್ತಿಲ್ಲ: ಸಂತೋಷ್ ಹೆಗ್ಡೆ

Date:

Advertisements

ರಾಜಕಾರಣವು ಹಿಂದೆ ಸೇವೆಯಾಗಿತ್ತು. ಈಗ ವೃತ್ತಿಯಾಗಿ ಮಾರ್ಪಟ್ಟಿದೆ. ಕೈತುಂಬ ಸಂಬಂಧ ಸಿಗುತ್ತದೆ. ಹಾಗಾಗಿ, ಜನರು ರಾಯಕೀಯಕ್ಕೆ ಬರುತ್ತಿದ್ದಾರೆ ಎಂದು ನಿವೃತ್ತ ಲೋಕಾಯುಕ್ತ ನ್ಯಾಯಮೂರ್ತಿ ಸಂತೋಷ್ ಹೆಗ್ಡೆ ಹೇಳಿದ್ದಾರೆ.

ಮಂಡ್ಯ ಜಿಲ್ಲೆಯ ಮದ್ದೂರು ತಾಲೂಕಿನ ವಳಗೆರೆಹಳ್ಳಿಯಲ್ಲಿ ಸುದ್ದಿಗಾರರೊಂದಿಗೆ ಅವರು ಮಾತನಾಡಿದರು. “ರಾಜಕಾರಣದಲ್ಲಿ ಹಣ ಅಧಿಕಾರವಿದೆ. ಕಾರಣಕ್ಕೆ ಜಡ್ಜ್​ಗಳು, ಐಎಎಸ್‌, ಐಪಿಎಸ್‌ ಅಧಿಕಾರಿಗಳು ರಾಜಕಾರಣಕ್ಕೆ ಬರುತ್ತಿದ್ದಾರೆ. ಅವರೆಲ್ಲರೂ ಜನರ ಸೇವೆ ಮಾಡಲು ಬರುತ್ತಿಲ್ಲ. ಸೌಲಭ್ಯಗಳಿಗಾಗಿ ಬರುತ್ತಿದ್ದಾರೆ” ಎಂದು ಆರೋಪಿಸಿದರು.

“ಜನಪ್ರತಿನಿಧಿಗಳಿಗೆ 12 ತಿಂಗಳು ಸಂಬಳ ಸಿಗುತ್ತದೆ. ಪೆನ್ಶನ್‌ ಸಿಗುತ್ತದೆ. ಆದರೆ, ಅವರಿಂದ ಜನರಿಗೆ ಯಾವ ಪ್ರಯೋಜನವಾಗುತ್ತಿದೆ. ಜನರು ಜನಪ್ರತಿನಿಧಿಗಳನ್ನು ಪ್ರಶ್ನಿಸಬೇಕು” ಎಂದು ಕರೆಕೊಟ್ಟರು.

Advertisements

ಕಾವೇರಿ ವಿವಾದದ ಬಗ್ಗೆ ಮಾತನಾಡಿದ ಅವರು, “ಕಾವೇರಿ ಕೊಳ್ಳದಲ್ಲಿ ಕಡಿಮೆ ನೀರಿದೆ. ಕಾವೇರಿ ನೀರಿನ ವಿಚಾರದಲ್ಲಿ ಕೋರ್ಟ್​ನಿಂದ ಪರಿಹಾರ ಸಿಗುವುದಿಲ್ಲ. ಸ್ವತಂತ್ರ ಸಮಿತಿ ರಚಿಸಿ, ಜಲಾಶಯಗಳಲ್ಲಿ ಪರಿಶೀಲನೆ ನಡೆಸಿ ಕ್ರಮಕೈಗೊಳ್ಳಬೇಕು. ತಮಿಳುನಾಡಿಗೆ ನೀರು ಹರಿಸಿ ನಮ್ಮವರನ್ನು ಕೊಲ್ಲಲು ಸಾಧ್ಯವಿಲ್ಲ” ಎಂದರು.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ವಿಧಾನಸಭೆಯ ಮುಂಗಾರು ಅಧಿವೇಶನ ಮುಕ್ತಾಯ: ಒಟ್ಟು 39 ವಿಧೇಯಕ ಅಂಗೀಕಾರ

ಕಳೆದ ಆಗಸ್ಟ್ 11ರಿಂದ ಆರಂಭಗೊಂಡಿದ್ದ 16ನೇ ವಿಧಾನಸಭೆಯ ಮುಂಗಾರು ಅಧಿವೇಶನವು ಇಂದು(ಆ.22)...

ಶಿವಮೊಗ್ಗ | 15 ವರ್ಷದ ಬಳಿಕ ವಾರ್ತಾ ಇಲಾಖೆಯ ಸಹಾಯಕ ನಿರ್ದೇಶಕ ಆರ್. ಮಾರುತಿ ವರ್ಗಾವಣೆ!

ಶಿವಮೊಗ್ಗ ಜಿಲ್ಲಾ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯಲ್ಲಿ ಕಳೆದ 15...

ಸಿಂಧನೂರು | ಮಹಿಳಾ ಕಾಲೇಜಿನಲ್ಲಿ ಉಪನ್ಯಾಸಕರ ಕೊರತೆ – ವಿದ್ಯಾರ್ಥಿನಿಯರ ಪ್ರತಿಭಟನೆ

ಸಿಂಧನೂರಿನ ಕುಷ್ಟಗಿ ರಸ್ತೆಯಲ್ಲಿರುವ ಸರ್ಕಾರಿ ಮಹಿಳಾ ಪದವಿ ಕಾಲೇಜಿನಲ್ಲಿ ಉಪನ್ಯಾಸಕರ ಕೊರತೆಯಿಂದಾಗಿ...

ಶಿವಮೊಗ್ಗ | ಸೆ. 6ಕ್ಕೆ ಹಿಂದೂ ಮಹಾಸಭಾ ಗಣಪತಿ ವಿಸರ್ಜನೆ

ಶಿವಮೊಗ್ಗದ ಹಿಂದೂ ಮಹಾಸಭಾ ಗಣಪತಿ ಉತ್ಸವದಲ್ಲಿ ಈ ಬಾರಿ ಏನೆಲ್ಲಾ...

Download Eedina App Android / iOS

X