ಬಿಎಂಡಬ್ಲ್ಯೂ ಕಾರೊಂದು ರಸ್ತೆಯಲ್ಲಿಯೇ ಹೊತ್ತಿ ಉರಿದಿರುವ ಘಟನೆ ಮೈಸೂರು-ನಂಜನಗೂಡು ರಾಷ್ಟ್ರೀಯ ಹೆದ್ದಾರಿಯ ಕಡಕೋಳ ಟೋಲ್ ಪ್ಲಾಜಾ ಬಳಿ ನಡೆದಿದೆ. ಎಂಜಿನ್‌ನಲ್ಲಿ ಬೆಂಕಿ ಕಾಣಿಸಿಕೊಂಡು ಕಾರು ಸುಟ್ಟು ಕರಕಲಾಗಿದೆ ಎಂದು ತಿಳಿದುಬಂದಿದೆ.
ನಂಜನಗೂಡಿನಿಂದ ಮೈಸೂರಿಗೆ ಕಾರು ಬರುತ್ತಿತ್ತು. ಟೋಲ್‌ಗೇಟ್ ಬಳಿ ಕಾರು ಚಾಲಕ ಕಾರನ್ನು ನಿಲ್ಲಿಸಿದಾಗ ಈ ಘಟನೆ ನಡೆದಿದೆ. ಘಟನೆಯಲ್ಲಿ ಯಾರಿಗೂ ಗಾಯಗಳಾಗಿಲ್ಲ ಎಂದು ಮೈಸೂರು ದಕ್ಷಿಣ ಠಾಣೆ ಪೊಲೀಸರು ತಿಳಿಸಿದ್ದಾರೆ.
ಆಕಸ್ಮಿಕವಾಗಿ ಬೆಂಕಿ ಕಾಡಿಕೊಂಡು ವಾಹನ ಜಖಂಗೊಂಡಿದೆ. ಅಗ್ನಿಶಾಮಕದಳದ ಸಿಬ್ಬಂದಿ ಸ್ಥಳಕ್ಕೆ ಧಾವಿಸಿ ಬೆಂಕಿ ನಂದಿಸಿದ್ದಾರೆ ಎಂದು ಪೊಲೀಸರು ಹೇಳಿದ್ದಾರೆ.