- ಶ್ರೀನಿವಾಸಪುರ ಹೊರವಲಯದ ಹೊಗಳಗೆರೆ ರಸ್ತೆಯಲ್ಲಿ ಶ್ರೀನಿವಾಸ್ ಕೊಲೆ
- ರಾಜಕೀಯ ದ್ವೇಷದಿಂದ ಶ್ರೀನಿವಾಸ್ ಕೊಲೆ; ಪೊಲೀಸರಿಂದ ಪರಿಶೀಲನೆ
ಕೋಲಾರ ಜಿಲ್ಲೆ ಶ್ರೀನಿವಾಸಪುರ ತಾಲೂಕಿನ ಕಾಂಗ್ರೆಸ್ ಮುಖಂಡ, ಮಾಜಿ ಸ್ಪೀಕರ್ ರಮೇಶ್ ಕುಮಾರ್ ಆಪ್ತರಾಗಿರುವ ಜಿಲ್ಲಾ ಪಂಚಾಯ್ತಿ ಮಾಜಿ ಅಧ್ಯಕ್ಷ ಕೌನ್ಸಿಲರ್ ಸೀನಪ್ಪ ಅಲಿಯಾಸ್ ಎಂ ಶ್ರೀನಿವಾಸ್ ಮೇಲೆ ದುಷ್ಕರ್ಮಿಗಳು ಮಾರಣಾಂತಿಕ ಹಲ್ಲೆ ನಡೆಸಿ ಕೊಲೆ ಮಾಡಿದ್ದಾರೆ.
ಆರು ಜನ ಅಪರಿಚಿತರು ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿದ್ದಾರೆ ಎನ್ನಲಾಗಿದ್ದು, ಶ್ರೀನಿವಾಸಪುರ ಹೊರವಲಯದ ಹೊಗಳಗೆರೆ ರಸ್ತೆಯಲ್ಲಿ ಶ್ರೀನಿವಾಸ್ ಕೊಲೆ ನಡೆದಿದೆ.
ಹೊಗಳಗೆರೆ ಬಳಿ ಬಾರ್ ಕಟ್ಟಡ ಕಾಮಗಾರಿಗೆ ಹೋಗಿದ್ದ ವೇಳೆ ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿ ಎಸ್ಕೇಪ್ ಆಗಿದ್ದಾರೆ. ಸ್ಥಳಕ್ಕೆ ಶ್ರೀನಿವಾಸಪುರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಗೆದ್ದ ಗ್ಯಾರಂಟಿಯನ್ನು ಗೆಲುವನ್ನಾಗಿ ಮಾಡಿಕೊಳ್ಳದ ಮೂರ್ಖರು
ಪುರಸಭೆ ಮಾಜಿ ಅಧ್ಯಕ್ಷರಾಗಿ, ಎಪಿಎಂಸಿ ಮಾಜಿ ಅಧ್ಯಕ್ಷರಾಗಿ ಕಾರ್ಯ ನಿರ್ವಹಿಸಿರುವ ಶ್ರೀನಿವಾಸ್ ಅವರು ಮುಂಬರುವ ಲೋಕಸಭಾ ಚುನಾವಣೆಗೆ ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿಯಾಗಿದ್ದರು ಎನ್ನಲಾಗಿದೆ. ರಾಜಕೀಯ ದ್ವೇಷದಿಂದ ಶ್ರೀನಿವಾಸ್ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿ ಕೊಲೆ ಮಾಡಲಾಗಿದೆ ಎನ್ನುವ ಅನುಮಾನದ ಮಾತುಗಳು ಕೇಳಿಬರುತ್ತಿವೆ.
ಕೋಲಾರ ಮಾಲೂರು ತಾಲೂಕಿನ ಕೋಡಿಹಳ್ಳಿ ಕ್ರಾಸ್ ಬಳಿ ಅನಿಲ್ ಕುಮಾರ್ ಅನ್ನುವ ಗ್ರಾಮ ಪಂಚಾಯ್ತಿ ಸದಸ್ಯನನ್ನ ಕೊಲೆ ಮಾಡಿ ಹಂತಕರು ಎಸ್ಕೇಪ್ ಆಗಿದ್ದರು. ಈ ಘಟನೆ ಮಾಸುವ ಮುನ್ನವೇ ಕಾಂಗ್ರೆಸ್ ಮುಖಂಡನ ಮೇಲೆ ಹಲ್ಲೆ ನಡೆದಿದೆ.