150 ಕೋಟಿ ರೂ. ವೆಚ್ಚದಲ್ಲಿ ಮೈಸೂರು ಮಹಾರಾಣಿ ಕಾಲೇಜು, ಹಾಸ್ಟೆಲ್‌ ಕಾಮಗಾರಿ: ಸಿಎಂ ಸಿದ್ದರಾಮಯ್ಯ

Date:

Advertisements
  • ಮೈಸೂರು ಮಹಾರಾಣಿ ಕಾಲೇಜು ಮತ್ತು ವಸತಿ ನಿಲಯಕ್ಕೆ ಸಿಎಂ ಭೇಟಿ
  • ‘ಒಂದೊಂದು ಕಟ್ಟಡದಲ್ಲಿ ತಲಾ 500 ವಿದ್ಯಾರ್ಥಿನಿಯರಿಗೆ ವಸತಿ ಸೌಲಭ್ಯ’

ಮೈಸೂರು ಮಹಾರಾಣಿ ಕಾಲೇಜು ಮತ್ತು ವಸತಿ ನಿಲಯಕ್ಕೆ ಭೇಟಿ ನೀಡಿ ಪರಿಶೀಲಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಹಾರಾಣಿ ಕಾಲೇಜಿನ ಕಟ್ಟಡ ಹಾಗೂ ವಸತಿ ನಿಲಯಗಳ ನಿರ್ಮಾಣವನ್ನು 150 ಕೋಟಿ ರೂ. ಗಳಲ್ಲಿ ಕೈಗೊಳ್ಳಲು ಸೂಚನೆ ನೀಡಿರುವುದಾಗಿ ತಿಳಿಸಿದರು.

“2,000 ವಿದ್ಯಾರ್ಥಿ ಸಾಮರ್ಥ್ಯದ 4 ಕಟ್ಟಡಗಳುಳ್ಳ ವಸತಿ ನಿಲಯವನ್ನು ನಿರ್ಮಿಸಲಾಗುತ್ತಿದೆ. ಒಂದೊಂದು ಕಟ್ಟಡದಲ್ಲಿ ತಲಾ 500 ವಿದ್ಯಾರ್ಥಿನಿಯರಿಗೆ ವಸತಿ ಸೌಲಭ್ಯ ಕಲ್ಪಿಸಲಾಗುವುದು. ಮಹಾರಾಣಿ ವಿಜ್ಞಾನ ಕಾಲೇಜು ಒಂದು ಭಾಗ ಕುಸಿದಿದ್ದು, ಇದರ ಮುಂದೆ ಇರುವ ಐತಿಹಾಸಿಕ ಕಟ್ಟಡದ ಭಾಗವನ್ನು ಹಾಗೆಯೇ ಉಳಿಸಿಕೊಂಡು ಉಳಿದ ಭಾಗದಲ್ಲಿ ಕಟ್ಟಡ ನಿರ್ಮಿಸಲಾಗುವುದು” ಎಂದರು.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಗೆದ್ದ ಗ್ಯಾರಂಟಿಯನ್ನು ಗೆಲುವನ್ನಾಗಿ ಮಾಡಿಕೊಳ್ಳದ ಮೂರ್ಖರು

Advertisements

“51 ಕೋಟಿ ರೂ.ಗಳಲ್ಲಿ ವಿಜ್ಞಾನ ಕಾಲೇಜಿನ ಕಟ್ಟಡ ನಿರ್ಮಾಣ ಕಾರ್ಯ ಕೈಗೊಳ್ಳಲಾಗುತ್ತಿದೆ. 17 ಕೋಟಿ ರೂ. ವೆಚ್ಚದಲ್ಲಿ ಆಟ್ರ್ಸ್ ಕಾಲೇಜು, 99 ಕೋಟಿ ರೂ.ಗಳಲ್ಲಿ ವಸತಿ ನಿಲಯದ ನಿರ್ಮಾಣ ಸೇರಿದಂತೆ ಒಟ್ಟು 150 ಕೋಟಿ ರೂ.ಗಳ ಕಾಮಗಾರಿಗಳನ್ನು ಕೈಗೊಳ್ಳಲು ಉನ್ನತ ಶಿಕ್ಷಣ ಇಲಾಖೆಗೆ ಸೂಚಿಸಲಾಗಿದೆ. ಹಿಂದಿನ ಸರ್ಕಾರದವರು ಮೈಸೂರು ಭಾಗದಲ್ಲಿ ಯಾವುದೇ ಅಭಿವೃದ್ಧಿ ಕಾರ್ಯಗಳನ್ನು ಕೈಗೊಂಡಿಲ್ಲ” ಎಂದು ಹೇಳಿದರು.

“ನಾಲ್ವಡಿ ಕೃಷ್ಣರಾಜ ಒಡೆಯರ್ ಅವರು ಶಿಕ್ಷಣ ಹಾಗೂ ಆರೋಗ್ಯ ಕ್ಷೇತ್ರಕ್ಕೆ ನೀಡಿದ ಕಾರ್ಯಕ್ರಮಗಳಿಂದ ಸ್ಪೂರ್ತಿ ಪಡೆದು ಅಭಿವೃದ್ಧಿ ಕಾಮಗಾರಿಗಳನ್ನು ಕೈಗೊಳ್ಳಲಾಗಿದೆ” ಎಂದು ತಿಳಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಸಭಾಧ್ಯಕ್ಷರೇ ಮಲೆನಾಡಿನ ಸಮಸ್ಯೆ ಬಗ್ಗೆ ಚರ್ಚಿಸಲು ಅವಕಾಶ ಕಲ್ಪಿಸಿ; ಹೆಚ್.ಡಿ ತಮ್ಮಯ್ಯ

ಮಲೆನಾಡಿನಲ್ಲಿ ಕಾಡುತ್ತಿರುವ ಕಾಡು-ಪ್ರಾಣಿ-ಮಾನವ ಸಂಘರ್ಷದಿಂದ ಜನಜೀವನ ಅಸ್ತವ್ಯಸ್ಥವಾಗಿದೆ. ಇಂತಹ ಗಂಭೀರ ಸಮಸ್ಯೆಗಳ...

ದಾವಣಗೆರೆ | ಪರಿಶಿಷ್ಟ ಜಾತಿ ಒಳಮೀಸಲಾತಿ; ಅಲೆಮಾರಿಗಳಿಗೆ ಅನ್ಯಾಯ ವಿರೋಧಿಸಿ ಪ್ರತಿಭಟನೆ

""ಒಳ ಮೀಸಲಾತಿ ಹಂಚಿಕೊಳ್ಳುವಾಗ ನಿರ್ಗತಿಕ ಅಲೆಮಾರಿ ಜಾತಿಗಳನ್ನು ಸಂಪೂರ್ಣವಾಗಿ ಕಡೆಗಣಿಸಲಾಗಿದೆ. ಅಲೆಮಾರಿ...

ಈದಿನ ವಿಶೇಷ | ಧರ್ಮಸ್ಥಳ: ಉತ್ತರ ನೀಡಿದ ಗೃಹ ಸಚಿವರು; ಈಗಲೂ ಉಳಿದ ಹಲವು ಪ್ರಶ್ನೆಗಳು

ಸದನದಲ್ಲಿ ನಿಂತು ಷಡ್ಯಂತ್ರ ಎನ್ನುವವರಿಗೆ, ಎಸ್‌ಐಟಿ ರಚನೆಯಾಗಿದ್ದೇಕೆ? ಕಾನೂನು ಏನು ಹೇಳುತ್ತೆ?...

Download Eedina App Android / iOS

X