ರಾಜ್ಯದಲ್ಲಿ ಭ್ರಷ್ಟಾಚಾರ ಹೆಚ್ಚುತ್ತಿದೆ. ಕಾಂಗ್ರೆಸ್ ಸರ್ಕಾರ ರಾಜ್ಯದಲ್ಲಿ ಲೂಟಿ ಮಾಡಿ ಬೇರೆ ರಾಜ್ಯಗಳಿಗೆ ಹಣ ಸಾಗಿಸುತ್ತಿದೆ ಎಂದು ಕೇಂದ್ರ ಸಚಿವ ಭಗವಂತ್ ಖೂಬಾ ಆರೋಪಿಸಿದ್ದಾರೆ.
ಕೊಪ್ಪಳದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, “ಕಾಂಗ್ರೆಸ್ ಸರ್ಕಾರ ರೈತರಿಗೆ ಸರಿಯಾಗಿ ವಿದ್ಯುತ್ ಪೂರೈಕೆ ಮಾಡುತ್ತಿಲ್ಲ. ಬರ ಘೋಷಣೆಯಾಗಿದ್ದರೂ, ರೈತರಿಗೆ ಪರಿಹಾರ ಸಿಕ್ಕಿಲ್ಲ. ಐದು ತಿಂಗಳಲ್ಲಿ ಜನರ ವಿಶ್ವಾಸ ಕಳೆದುಕೊಂಡಿದ್ದಾರೆ. ಕಾಂಗ್ರೆಸ್‌ನವರಿಗೆ ಮಾನ-ಮರ್ಯಾದೆ ಇದ್ದರೆ ಅಧಿಕಾರದಿಂದ ಕೆಳಗಿಳಿಯಬೇಕು” ಎಂದಿದ್ದಾರೆ.
“ಕಾಂಗ್ರೆಸ್‌ನ ದುರಾಡಳಿತಕ್ಕೆ ಜನ ಬೇಸತ್ತಿದ್ದಾರೆ. ಬರುವ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ಗೆ ಜನರು ತಕ್ಕ ಪಾಠ ಕಲಿಸುತ್ತಾರೆ. ಅವರಿಗೆ ಎಲ್ಲಿಯೂ ನೆಲೆ ಸಿಗುವುದಿಲ್ಲ” ಎಂದು ಹೇಳಿದ್ದಾರೆ.