ಭಾರತೀಯ ಪ್ರವಾಸಿಗರಿಗೆ ಉಚಿತ ‘ವೀಸಾ’ ನೀಡಲು ಶ್ರೀಲಂಕಾ ನಿರ್ಧಾರ

Date:

Advertisements

ಭಾರತ ಮತ್ತು ಇತರ ಆರು ದೇಶಗಳ ಪ್ರವಾಸಿಗರಿಗೆ ಉಚಿತ ಪ್ರವಾಸಿ ವೀಸಾ ನೀಡುವ ಮಸೂದೆಯನ್ನು ಶ್ರೀಲಂಕಾ ಸಚಿವ ಸಂಪುಟ ಅನುಮೋದಿಸಿದೆ ಎಂದು ಅಲ್ಲಿನ ವಿದೇಶಾಂಗ ಸಚಿವ ಅಲಿ ಸಬ್ರಿ ಹೇಳಿದ್ದಾರೆ. ಸಾಲದ ಸುಳಿಯಲ್ಲಿ ಸಿಲುಕಿರುವ ದ್ವೀಪ ರಾಷ್ಟ್ರದ ಪ್ರವಾಸೋದ್ಯಮ ಕ್ಷೇತ್ರವನ್ನು ಪುನರ್‌ನಿರ್ಮಿಸುವ ಪ್ರಯತ್ನಗಳ ಭಾಗವಾಗಿ ಈ ನಿರ್ಧಾರ ಕೈಗೊಂಡಿದೆ ಎಂದು ತಿಳಿದುಬಂದಿದೆ.

ಭಾರತ, ಚೀನಾ, ರಷ್ಯಾ, ಮಲೇಷ್ಯಾ, ಜಪಾನ್, ಇಂಡೋನೇಷ್ಯಾ ಮತ್ತು ಥೈಲ್ಯಾಂಡ್‌ನ ಪ್ರವಾಸಿಗರಿಗೆ ತಕ್ಷಣದಿಂದಲೇ ಉಚಿತ ವೀಸಾ ನೀಡಲು ಸಂಪುಟ ಒಪ್ಪಿದೆ. ಈ ಯೋಜನೆಯನ್ನು ಪ್ರಾಯೋಗಿಕವಾಗಿ 2024ರ ಮಾರ್ಚ್‌ 31ರವರೆಗೆ ಜಾರಿಗೊಳಿಸಲಾಗುವುದು ಎಂದು ಸಬ್ರಿ ಹೇಳಿದ್ದಾರೆ.

ಈ ಆರು ದೇಶಗಳ ಪ್ರವಾಸಿಗರು ಶ್ರೀಲಂಕಾಕ್ಕೆ ಭೇಟಿ ನೀಡಲು ಶುಲ್ಕವಿಲ್ಲದೆ ವೀಸಾಗಳನ್ನು ಪಡೆಯಲು ಸಾಧ್ಯವಾಗುತ್ತದೆ. ಭಾರತವು ಶ್ರೀಲಂಕಾದ ಪ್ರವಾಸೋದ್ಯಮಕ್ಕೆ ಪ್ರಮುಖ ಗ್ರಾಹಕ ರಾಷ್ಟ್ರವಾಗಿದೆ.

Advertisements

ಶ್ರೀಲಂಕಾದ ಅಂಕಿಅಂಶಗಳ ಪ್ರಕಾರ, ಸೆಪ್ಟೆಂಬರ್‌ನಲ್ಲಿ  ಭಾರತದ 30,000 ಪ್ರವಾಸಿಗರು ಶ್ರೀಲಂಕಾಗೆ ಭೇಟಿ ನಿಡಿದ್ದು, ಆ ರಾಷ್ಟ್ರಕ್ಕೆ ಭೇಟಿ ನೀಡಿದ ಪ್ರವಾಸಿಗರ ಪಟ್ಟಿಯಲ್ಲಿ ಅಗ್ರ ಸ್ಥಾನಪಡೆದಿದೆ. 8,000 ಕ್ಕೂ ಹೆಚ್ಚು ಚೀನೀ ಪ್ರವಾಸಿಗರು ಭೇಟಿ ನೀಡಿದ್ದು 2ನೇ ಸ್ಥಾನ ಪಡೆದಿದೆ.

ಈ ಸುದ್ದಿ ಓದಿದ್ದೀರಾ?: ಸೈಬರ್ ಕ್ರೈಮ್‌ಗೆ ಅಲಹಾಬಾದ್, ಸೂರತ್ ಹಾಟ್‌ಸ್ಪಾಟ್- ಗುಜರಾತ್ ಮಾಡೆಲ್ ಎಂದು ವ್ಯಂಗ್ಯವಾಡಿದ ನೆಟ್ಟಿಗರು

2019ರಲ್ಲಿ ಶ್ರೀಲಂಕಾದಲ್ಲಿ ನಡೆದ ಈಸ್ಟರ್ ಸಂಡೆ ಬಾಂಬ್ ದಾಳಿಯಲ್ಲಿ 11 ಭಾರತೀಯರು ಸೇರಿದಂತೆ 270 ಜನರು ಸಾವನ್ನಪ್ಪಿದರು. 500ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದರು. ಆ ಘಟನೆಯ ನಂತರ ದ್ವೀಪ ರಾಷ್ಟ್ರಕ್ಕೆ ಭೇಟಿ ನೀಡುವ ಪ್ರವಾಸಿಗರ ಗಣನೀಯವಾಗಿ ಕುಸಿದಿದೆ.

ಅಲ್ಲದೆ, ಶ್ರೀಲಂಕಾ ಆರ್ಥಿಕ ಬಿಕ್ಕಟ್ಟನ್ನು ಎದುರಿಸುತ್ತಿದೆ. ಲಂಕಾ ಅಧ್ಯಕ್ಷ ರಾಜಪಕ್ಸೆ ಅವರ ರಾಜೀನಾಮೆಗೆ ಒತ್ತಾಯಿಸಿ ಕಳೆದ ವರ್ಷ ಅಲ್ಲಿನ ಜನರು ಭಾರೀ ಪ್ರತಿಭಟನೆ ನಡೆಸಿದ್ದರು. ಇಂದಿಗೂ ಆಹಾರ, ಔಷಧಿ, ಅಡುಗೆ ಅನಿಲ ಮತ್ತು ಇಂಧನ, ಟಾಯ್ಲೆಟ್ ಪೇಪರ್ ಮತ್ತು ಬೆಂಕಿಕಡ್ಡಿಗಳಂತಹ ಅಗತ್ಯ ವಸ್ತುಗಳ ತೀವ್ರ ಕೊರತೆಯು ಲಂಕಾವನ್ನು ಕಾಡುತ್ತಿದೆ. ಬಿಕ್ಕಟ್ಟಿನಿಂದ ಹೊರ ಬರಲು ಶ್ರೀಲಂಕಾ ಭಾರೀ ಪ್ರಯತ್ನಗಳನ್ನು ಮಾಡುತ್ತಿದೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸರ್ಕಾರದಿಂದ ನಷ್ಟ ಸರಿದೂಗಿಸಲಾಗದು, ರೈತರೇ ಕಷ್ಟಕ್ಕೆ ಒಗ್ಗಿಕೊಳ್ಳಬೇಕು: ಬಿಜೆಪಿ ನಾಯಕನ ಹೇಳಿಕೆಗೆ ತೀವ್ರ ಆಕ್ರೋಶ

ಇತ್ತೀಚಿಗೆ ಆದ ಅತಿವೃಷ್ಟಿಯಿಂದ ರೈತರಿಗೆ ಆಗಿರುವ ನಷ್ಟಕ್ಕೆ ಸರ್ಕಾರ ಪರಿಹಾರ ನೀಡಲು...

ಏನಿದು ಅನಿಲ್ ಅಂಬಾನಿ ಬ್ಯಾಂಕ್ ವಂಚನೆ? ಕ್ರಮ ಕೈಗೊಳ್ಳುತ್ತಾರ ಮೋದಿ?

ತನ್ನನ್ನು ತಾನು ದಿವಾಳಿ ಎಂದು ಘೋಷಿಸಿಕೊಂಡಿರುವ ಭಾರತದ ಭಾರೀ ಶ್ರೀಮಂತ ಉದ್ಯಮಿ...

ತೆಲಂಗಾಣ | ಅಂತರ್ಜಾತಿ ವಿವಾಹದ ಕಾರಣಕ್ಕೆ ಸಾಮಾಜಿಕ ಬಹಿಷ್ಕಾರ

ಅಂತರ್ಜಾತಿ ವಿವಾಹವಾದ ಕಾರಣಕ್ಕಾಗಿ ಕುಟುಂಬವೊಂದಕ್ಕೆ ಸಾಮಾಜಿಕ ಬಹಿಷ್ಕಾರ ಹಾಕಿದ ಪ್ರಕರಣ ತೆಲಂಗಾಣದ...

Download Eedina App Android / iOS

X