ಇಸ್ರೇಲ್ ಮತ್ತು ಹಮಸ್ ನಡುವಿನ ಯುದ್ಧವು ಜಾಗತಿಕ ಆರ್ಥಿಕ ಅಭಿವೃದ್ಧಿಗೆ ಗಂಭೀರ ಹೊಡೆತವನ್ನು ನೀಡಬಹುದು ಎಂದು ವಿಶ್ವ ಬ್ಯಾಂಕ್ ಅಧ್ಯಕ್ಷ ಅಜಯ್ ಬಂಗಾ ಹೇಳಿದ್ದಾರೆ.
ಮಂಗಳವಾರ ಸೌದಿ ಅರೇಬಿಯಾದಲ್ಲಿ ನಡೆದ ಹೂಡಿಕೆದಾರರ ಸಮಾವೇಶದಲ್ಲಿ ಅವರು ಮಾತನಾಡಿದರು. “ಇತ್ತೀಚೆಗೆ ಇಸ್ರೇಲ್ ಮತ್ತು ಗಾಜಾದಲ್ಲಿ ಏನಾಗುತ್ತಿದೆ – ದಿನದ ಕೊನೆಯಲ್ಲಿ ನೀವು ಎಲ್ಲವನ್ನೂ ಒಟ್ಟಿಗೆ ಸೇರಿಸಿದರೆ, ಆರ್ಥಿಕ ಅಭಿವೃದ್ಧಿಯ ಮೇಲಿನ ಪರಿಣಾಮವು ಇನ್ನಷ್ಟು ಗಂಭೀರವಾಗಿದೆ. ಇದು ತುಂಬಾ ಅಪಾಯಕಾರಿ” ಎಂದು ಹೇಳಿದ್ದಾರೆ.
ಇಸ್ರೇಲ್ ಅಧಿಕಾರಿಗಳ ಪ್ರಕಾರ, ಅಕ್ಟೋಬರ್ 7ರಂದು ಇಸ್ರೇಲ್ ಮೇಲೆ ಹಮಸ್ ದಾಳಿ ಮಾಡಿದಾಗಿನಿಂದ ಇಲ್ಲಿಯವರೆಗೆ 1,400 ಮಂದಿ ಇಸ್ರೇಲಿಗರು ಸಾವನ್ನಪ್ಪಿದ್ದಾರೆ.
ಹಮಸ್ ನಡೆಸುತ್ತಿರುವ ಆರೋಗ್ಯ ಸಚಿವಾಲಯದ ಪ್ರಕಾರ, ಗಾಜಾದ ಮೇಲೆ ಇಸ್ರೇಲ್ ನಡೆಸಿದ ಬಾಂಬ್ ದಾಳಿಯಲ್ಲಿ 5,000ಕ್ಕೂ ಹೆಚ್ಚು ಪ್ಯಾಲೆಸ್ಟೀನಿಯರು, ಮುಖ್ಯವಾಗಿ ನಾಗರಿಕರು ಕೊಲ್ಲಲ್ಪಟ್ಟಿದ್ದಾರೆ.