ಖಜಾನೆ ತುಂಬಿಸಿಕೊಳ್ಳುವ ದುರುದ್ದೇಶದಿಂದ ಕನಕಪುರ ಹೆಸರಲ್ಲಿ ಡಿಕೆಶಿ ಹೊಸ ನಾಟಕ: ಎಚ್‌ಡಿಕೆ ಕಿಡಿ

Date:

Advertisements
  • ಕನಕಪುರ ಸುತ್ತಮುತ್ತ ಇರುವ ತಮ್ಮ ಆಸ್ತಿಗಳ ಮೌಲ್ಯ ಹೆಚ್ಚಿಸಿಕೊಳ್ಳುವ ಉದ್ದೇಶ
  • ಡಿಕೆ ಶಿವಕುಮಾರ್ ಮಾತು ರಾಮನಗರ ಜಿಲ್ಲೆಗೆ ಎಸಗುವ ಮಹಾದ್ರೋಹ:‌ ಕಿಡಿ

ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್‌ ಅವರು ರಾಮನಗರ ಜಿಲ್ಲೆಯಿಂದ ಕನಕಪುರ ತಾಲೂಕನ್ನು ಬೇರ್ಪಡಿಸಿ ಬೆಂಗಳೂರಿಗೆ ಸೇರಿಸುವೆ ಎಂದು ನೀಡಿರುವ ಹೇಳಿಕೆ ಸರಿಯಲ್ಲ. ಕನಕಪುರ ಸುತ್ತಮುತ್ತ ಇರುವ ತಮ್ಮ ಆಸ್ತಿಗಳ ಮೌಲ್ಯವನ್ನು ಹೆಚ್ಚಿಸಿಕೊಂಡು ತಮ್ಮ ಖಜಾನೆ ವೃದ್ಧಿ ಮಾಡಿಕೊಳ್ಳುವ ಏಕೈಕ ದುರುದ್ದೇಶದಿಂದ ಅವರು ಕನಕಪುರ ಜನರ ನೆಪ ಹೇಳಿಕೊಂಡು ಈ ಹೊಸ ನಾಟಕ ಶುರು ಮಾಡಿದ್ದಾರೆ ಎಂದು ಮಾಜಿ ಸಿಎಂ ಎಚ್‌ ಡಿ ಕುಮಾರಸ್ವಾಮಿ ತಿರುಗೇಟು ನೀಡಿದ್ದಾರೆ.

ಕನಕಪುರ ತಾಲೂಕನ್ನು ಬೇರ್ಪಡಿಸಿ ಬೆಂಗಳೂರಿಗೆ ಸೇರಿಸುವೆ ಎಂದಿದ್ದ ಡಿಕೆ ಶಿವಕುಮಾರ್‌ ಹೇಳಿಕೆಗೆ ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಪ್ರತಿಕ್ರಿಯಿಸಿರುವ ಅವರು, “ಕನಕಪುರದವರು ರಾಮನಗರ ಜಿಲ್ಲೆಯವರಲ್ಲ, ಬೆಂಗಳೂರು ಜಿಲ್ಲೆಯವರು ಎಂಬುದನ್ನು ನೆನಪಿಟ್ಟುಕೊಳ್ಳಿ ಎನ್ನುವ ಅವರ ಮಾತು ರಾಮನಗರ ಜಿಲ್ಲೆಗೆ ಎಸಗುವ ಮಹಾದ್ರೋಹ. ಅಷ್ಟೇ ಅಲ್ಲ, ಕನಕಪುರ ಜನರಿಗೆ ಮಂಕುಬೂದಿ ಎರಚುವ ಹುನ್ನಾರ” ಎಂದು ಕಿಡಿಕಾರಿದ್ದಾರೆ.

“ನಿಮ್ಮ ಜೇಬಿಗೆ ನಾನು ನೇರವಾಗಿ ದುಡ್ಡು ಹಾಕಲು ಆಗುವುದಿಲ್ಲ, ಮನೆ ಕಟ್ಟಿಸಿಕೊಡಲು ಆಗುವುದಿಲ್ಲ ಎನ್ನುವ ಇವರು; ಇಷ್ಟು ದಿನ ಶಾಸಕರಾಗಿ, ಸಚಿವರಾಗಿ ಉಪ ಮುಖ್ಯಮಂತ್ರಿ ಆಗಿ ಮಾಡಿದ್ದೇನು? ತಮ್ಮ ಜೇಬು ತುಂಬಿಸಿಕೊಂಡಿದ್ದು, ತಮ್ಮ ಮನೆಯನ್ನು ಉದ್ಧಾರ ಮಾಡಿಕೊಂಡಿದ್ದಷ್ಟೇ. ಇಷ್ಟಕ್ಕೂ ಕನಕಪುರ ಸುತ್ತಮುತ್ತ ಯಾರ ಆಸ್ತಿಗಳಿವೆ? ಅದರಲ್ಲಿ ಬೇನಾಮಿಗಳು ಎಷ್ಟು? ಎಲ್ಲೆಲ್ಲಿ ಅಕ್ರಮವಾಗಿ ಬೇಲಿ ಹಾಕಲಾಗಿದೆ? ಅವೆಲ್ಲಾ ಅಕ್ರಮಗಳನ್ನು ಸಕ್ರಮ ಮಾಡಿಕೊಳ್ಳಲು ಬೆಂಗಳೂರು ಸೇರ್ಪಡೆಯ ನಾಟಕ! ಈಗಾಗಲೇ ಕನಕಪುರಕ್ಕೆ ಒಂದು ಮೆಡಿಕಲ್ ಕೊಟ್ಟಿದ್ದರೂ ರಾಮನಗರ ಮೆಡಿಕಲ್ ಕಾಲೇಜನ್ನು ಕದ್ದು ಒಯ್ಯವುದರ ಹಿಂದೆಯೂ ಇದೇ ದುಷ್ಟ ತಂತ್ರ ಅಡಗಿತ್ತು” ಎಂದಿದ್ದಾರೆ.

Advertisements

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಗೆದ್ದ ಗ್ಯಾರಂಟಿಯನ್ನು ಗೆಲುವನ್ನಾಗಿ ಮಾಡಿಕೊಳ್ಳದ ಮೂರ್ಖರು

“ಕನಕಪುರಕ್ಕೆ 52 ಕಿ.ಮೀ. ದೂರದಲ್ಲಿದೆ ಬೆಂಗಳೂರು. 25 ಕಿ.ಮೀ. ದೂರದಲ್ಲಿದೆ ರಾಮನಗರ. ಜನರಿಗೆ ಯಾವುದು ಅನುಕೂಲ? ದಿನ ಬೆಳಗಾದರೆ ಕನಕಪುರದವರು ಬೆಂಗಳೂರಿಗೆ ಅಲೆಯಬೇಕೆ? ಉಪ ಮುಖ್ಯಮಂತ್ರಿಗಳ ಒಳ ಉದ್ದೇಶದ ಬಗ್ಗೆ ಅನೇಕ ಅನುಮಾನಗಳು ಸಹಜವಾಗಿಯೇ ಮೂಡುತ್ತವೆ” ಎಂದು ಅನುಮಾನ ವ್ಯಕ್ತಪಡಿಸಿದ್ದಾರೆ.

“2006-2007ರಲ್ಲಿ ಕನಕಪುರ ಹೇಗಿತ್ತು? ಡಿಕೆಶಿ ಅವರು ನೆನಪು ಮಾಡಿಕೊಳ್ಳಬೇಕು. ಆಗಲೇ ಪಟ್ಟಣದ ಡಬಲ್ ರಸ್ತೆ ನಿರ್ಮಾಣ, ಕನಕಪುರ ಹೆಬ್ಬಾಗಿಲಿನಲ್ಲಿರುವ ಸೇತುವೆ ನಿರ್ಮಾಣಕ್ಕೆ ಯೋಜನೆ ಕೊಟ್ಟವನು ನಾನು. ಸಂಗಮದಲ್ಲಿ ಪ್ರವಾಹ ಬಂದಾಗಲೆಲ್ಲಾ ಅನೇಕರು ಹಗ್ಗ ಕಟ್ಟಿಕೊಂಡು ರಸ್ತೆ ದಾಟಲು ಹೋಗಿ ಸಾವನ್ನಪ್ಪುತ್ತಿದ್ದರು. ಇದನ್ನು ತಪ್ಪಿಸಲು ಅಲ್ಲಿ ಸೇತುವೆ ನಿರ್ಮಿಸಿ ಮಹದೇಶ್ವರ ಬೆಟ್ಟಕ್ಕೆ ಸುಲಭ ಸಂಪರ್ಕ ಕಲ್ಪಿಸುವ ಯೋಜನೆಗೆ ಇದೇ ಡಿ.ಕೆ.ಶಿವಕುಮಾರ್ ಅವರು 2006ರಲ್ಲಿಯೇ ವಿರೋಧ ಮಾಡಿದ್ದರು! ಈಗ ಕನಕಪುರವನ್ನು ಬೆಂಗಳೂರು ಜಿಲ್ಲೆಗೆ ಸೇರಿಸುವ ಮಾತು!! ನದಿಯಲ್ಲಿ ಜನರು ಕೊಚ್ಚಿಕೊಂಡು ಹೋಗಿ ಸತ್ತರೂ ಪರವಾಗಿಲ್ಲ. ಆದರೆ, ಇವರ ರಿಯಲ್ ಎಸ್ಟೇಟ್ ವ್ಯವಹಾರ ಪೊಗದಸ್ತಾಗಿ ಸಾಗಬೇಕು. ಸದ್ಯ ಬೆಂಗಳೂರಿನಿಂದ ಕನಕಪುರಕ್ಕೆ ಸುರಂಗ ಕೊರೆಸುವೆ ಎಂದು ಹೇಳಲಿಲ್ಲ… ಅದೇ ನಮ್ಮ ಪುಣ್ಯ” ಎಂದು ಲೇವಡಿ ಮಾಡಿದ್ದಾರೆ.

“ಕನಕಪುರ ಮೆಡಿಕಲ್ ಕಾಲೇಜು ಚಿಕ್ಕಬಳ್ಳಾಪುರ ಪಾಲಾದ ಮೇಲೆ ಮೈತ್ರಿ ಸರಕಾರದ ಅವಧಿಯಲ್ಲಿ ಕನಕಪುರಕ್ಕೆ ಮತ್ತೊಂದು ಮೆಡಿಕಲ್ ಕಾಲೇಜ್ ಮಂಜೂರು ಮಾಡಿದ್ದೆ. ಆದರೆ, ಇದೇ ಮಹಾನುಭಾವರೇ ಮೈತ್ರಿ ಸರಕಾರವನ್ನು ತೆಗೆದ ಪರಿಣಾಮ ಆ ಯೋಜನೆ ನನೆಗುದಿಗೆ ಬಿತ್ತು. ಯೋಜನೆಯೂ, ಅದರ 350 ಕೋಟಿ ರೂ.ಗಳಿಗೂ ಹೆಚ್ಚಿನ ಅನುದಾನವೂ ಅಲ್ಲಿಯೇ ಉಳಿಯಿತು. ಉಪ ಮುಖ್ಯಮಂತ್ರಿ ಆದವರು ಆ ಯೋಜನೆಯನ್ನು ಪೂರ್ಣಗೊಳಿಸಬೇಕೆ? ಅಥವಾ ರಾಮನಗರ ಮೆಡಿಕಲ್ ಕಾಲೇಜ್ ಅನ್ನು ಹೈಜಾಕ್ ಮಾಡಲು ಹುನ್ನಾರ ನಡೆಸಬೇಕೇ” ಎಂದು ಪ್ರಶ್ನಿಸಿದ್ದಾರೆ.

“ರಾಮನಗರ ಜಿಲ್ಲೆ ಕನಕಪುರ, ರಾಮನಗರ, ಚನ್ನಪಟ್ಟಣ, ಮಾಗಡಿ ಕ್ಷೇತ್ರಗಳ ಜನರ ಬಹುಕಾಲದ ಕನಸು. ಆ ಕನಸನ್ನು ನಾನು ನನಸು ಮಾಡಿದ್ದೇನೆ. ಈಗ ತಮ್ಮ ಸ್ವಾರ್ಥಕ್ಕಾಗಿ ರಾಮನಗರ ಜಿಲ್ಲೆ ಜನರ ಬೆನ್ನಿಗೆ ಚೂರಿ ಹಾಕಿ ಕನಕಪುರದ ಜನರ ಹಿತಕ್ಕೆ ಕೊಡಲಿಪೆಟ್ಟು ಹಾಕುವ ಹುನ್ನಾರ ನಡೆದಿದೆ. ಇದನ್ನು ಸಹಿಸುವ ಪ್ರಶ್ನೆಯೇ ಇಲ್ಲ. ಕನಕಪುರ ಸೇರಿ 4 ವಿಧಾನಸಭೆ ಕ್ಷೇತ್ರಗಳ ಜನರೂ ಒಟ್ಟಾಗಿ ಒಂದೇ ಜಿಲ್ಲೆಯಲ್ಲಿ ಉಳಿಯಲಿದ್ದಾರೆ. ಡಿ.ಕೆ.ಶಿವಕುಮಾರ್ ಇದನ್ನು ಅರ್ಥ ಮಾಡಿಕೊಳ್ಳಬೇಕು” ಎಂದಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಪರಿಶಿಷ್ಟ ಜಾತಿ ಒಳಮೀಸಲಾತಿ; ಅಲೆಮಾರಿಗಳಿಗೆ ಅನ್ಯಾಯ ವಿರೋಧಿಸಿ ಪ್ರತಿಭಟನೆ

""ಒಳ ಮೀಸಲಾತಿ ಹಂಚಿಕೊಳ್ಳುವಾಗ ನಿರ್ಗತಿಕ ಅಲೆಮಾರಿ ಜಾತಿಗಳನ್ನು ಸಂಪೂರ್ಣವಾಗಿ ಕಡೆಗಣಿಸಲಾಗಿದೆ. ಅಲೆಮಾರಿ...

ಈದಿನ ವಿಶೇಷ | ಧರ್ಮಸ್ಥಳ: ಉತ್ತರ ನೀಡಿದ ಗೃಹ ಸಚಿವರು; ಈಗಲೂ ಉಳಿದ ಹಲವು ಪ್ರಶ್ನೆಗಳು

ಸದನದಲ್ಲಿ ನಿಂತು ಷಡ್ಯಂತ್ರ ಎನ್ನುವವರಿಗೆ, ಎಸ್‌ಐಟಿ ರಚನೆಯಾಗಿದ್ದೇಕೆ? ಕಾನೂನು ಏನು ಹೇಳುತ್ತೆ?...

ಬಿಹಾರದಂತೆಯೇ, ಇಡೀ ದೇಶ ಚುನಾವಣಾ ಕಳ್ಳತನವನ್ನು ವಿರೋಧಿಸುತ್ತದೆ: ರಾಹುಲ್ ಗಾಂಧಿ

ಬಿಹಾರದಲ್ಲಿ ತಮ್ಮ 'ಮತದಾರ ಅಧಿಕಾರ ಯಾತ್ರೆ'ಗೆ ಸಕಾರಾತ್ಮಕ ಪ್ರತಿಕ್ರಿಯೆಯನ್ನು ಸ್ವಾಗತಿಸಿದ ಲೋಕಸಭೆ...

ಪಟ್ಟಣ ಪಂಚಾಯತ್ ಚುನಾವಣೆ: ಮೂರರಲ್ಲಿ ಕಾಂಗ್ರೆಸ್‌ಗೆ ಮೇಲುಗೈ; ಎರಡರಲ್ಲಿ ಬಿಜೆಪಿ-ಜೆಡಿಎಸ್ ಮೈತ್ರಿಗೆ ಜಯ

ಕರ್ನಾಟಕದಲ್ಲಿ ಐದು ಪ್ರದೇಶಗಳು ತಾಲೂಕು ಸ್ಥಾನಕ್ಕೇರಿದ ಬಳಿಕ ರಚನೆಯಾದ ಪಟ್ಟಣ ಪಂಚಾಯಿತಿಗೆ...

Download Eedina App Android / iOS

X