ಬಿಗ್ ಬಾಸ್ ಸ್ಪರ್ಧಿಯಾಗಿದ್ದ ವರ್ತೂರು ಸಂತೋಷ್ ಹುಲಿ ಉಗುರು ಧರಿಸಿದ ಪ್ರಕರಣದಲ್ಲಿ ಬಂಧನ ನಂತರ, ರಾಜ್ಯಾದ್ಯಂತ ಹುಲಿ ಉಗುರು ಪ್ರಕರಣಗಳು ಒಂದೊಂದೇ ಬೆಳಕಿಗೆ ಬರುತ್ತಿವೆ. ಇದೀಗ ತುಮಕೂರು ಜಿಲ್ಲೆಯ ಕುಣಿಗಲ್ ತಾಲ್ಲೂಕಿನ ಬಿದನಗೆರೆಯ ಶನಿಮಹಾತ್ಮ ದೇವಾಲಯದ ಅರ್ಚಕ ಧನಂಜಯ ಗುರೂಜಿಗೆ ಸಂಕಷ್ಟ ಎದುರಾಗಿದೆ.
ಬಸವೇಶ್ವರ ಮಠ ಸ್ಥಾಪಿಸಿ ಗುರೂಜಿಯಾಗಿರುವ ಅರ್ಚಕ. ಮಠದ ಸ್ವಾಮೀಜಿಯಾದ ಬಳಿಕ ಮೈ ತುಂಬಾ ಬಂಗಾರದ ಓಡವೆ ಧರಿಸುತ್ತಿದ್ದು, ಒಡವೆಗಳ ಜೊತೆಗೆ ಕೊರಳಿಗೆ ಹುಲಿ ಉಗುರಿನ ಪೆಂಡೆಂಟ್ ಧರಿಸಿರುವ ಫೋಟೊ ವೈರಲ್ ಆಗಿದೆ. ಇದರ ಬೆನ್ನಲ್ಲೇ ಅರಣ್ಯ ಇಲಾಖೆ ಅಧಿಕಾರಿ, ಬಿದನಗೆರೆ ದೇವಾಲಯಕ್ಕೆ ತರೆಳಿ ಹುಲಿ ಉಗುರಿನ ಬಗ್ಗೆ ತನಿಖೆ ಕೈಗೊಂಡಿದ್ದು, ಕುಣಿಗಲ್ ವಲಯ ಅರಣ್ಯಾಧಿಕಾರಿ ಜಗದೀಶ್ ಅವರು ಧನಂಜಯಸ್ವಾಮಿಯ ಚಿನ್ನದ ಚೈನ್ ಗಳನ್ನ ಪರಿಶೀಲನೆ ನಡೆಸಿದ್ದಾರೆ.
ಅದು ಆರ್ಟಿಫಿಶಿಯಲ್ ತುಂಬಾ ದಿನಗಳಿಂದ ಹಾಕಿದ್ದರಿಂದ ಕಪ್ಪು ಬಣ್ಣಕ್ಕೆ ತಿರುಗಿತ್ತು. ಹೀಗಾಗಿ ಅದನ್ನ ಎಸೆದಿದ್ದೇನೆ ಎಂದು ಧನಂಜಯಸ್ವಾಮಿ ಅರಣ್ಯಾಧಿಕಾರಿ ಮುಂದೆ ಹೇಳಿಕೆ ನೀಡಿದ್ದಾರೆ. ಆದ್ರೆ, ಧನಂಜಯಸ್ವಾಮಿ ಹೇಳಿಕೆ ಬಗ್ಗೆ ಅನುಮಾನ ವ್ಯಕ್ತಪಡಿಸಿರುವ ಜಿಲ್ಲಾ ಅರಣ್ಯಾಧಿಕಾರಿ ಅನುಪಮಾ, ಎಸೆದಿರುವ ಉಗುರಿನ ಬಗ್ಗೆ ತನಿಖೆ ಕೈಗೊಂಡಿದ್ದಾರೆ.
ಆರ್ಟಿಫಿಶಿಯಲ್ ಉಗುರನ್ನ ಅವರಿಂದ ಪಡೆದು ಎಫ್ಎಸ್ಎಲ್ ಪರೀಕ್ಷೆಗೆ ಕಳಿಸಲಾಗುವುದು. ಒಂದು ವೇಳೆ ಇಂದು ಉಗುರು ಸಿಗದಿದ್ದರೆ, ಸರ್ಚ್ ವಾರಂಟ್ ಪಡೆದು ಹುಡುಕಬೇಕಾಗುತ್ತದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಇತ್ತ ಮೈ ಮೇಲೆ ಕೇಜಿ ಗಟ್ಟಲೆ ಬಂಗಾರ ಸುರಿದು ಕೊಳ್ಳುವ ವ್ಯಕ್ತಿ ಆರ್ಟಿಫಿಶಿಯಲ್ ಹುಲಿ ಉಗರನ್ನ ಹೇಗೆ ಧರಿಸುವುದಕ್ಕೆ ಸಾಧ್ಯ ಎಂದು ಸಾರ್ವಜನಿಕರಲ್ಲಿ ಚರ್ಚೆ ನಡೆದಿವೆ.