ತುಮಕೂರು ಜಿಲ್ಲೆ ತುರುವೇಕೆರೆ ತಾಲೂಕಿನ ಕೋಡಿಹಳ್ಳಿಯಲ್ಲಿ ಮಹಿಳೆಯನ್ನು ಯುವಕನೋರ್ವ ಕೊಲೆಗೈದು ಪರಾರಿಯಾಗಿರುವ ಘಟನೆ ಬುಧವಾರ ಸಂಜೆ ನೆಡೆದಿದೆ.
ಸಂಜೆ ವೇಳೆ ದನ ಹೊಡೆದುಕೊಂಡು ಬರಲು ತೋಟಕ್ಕೆ ತೆರಳಿದ್ದ ಸಂದರ್ಭದಲ್ಲಿ ಯುವಕನೋರ್ವ ಹಿಂಬಾಲಿಸಿದ್ದು, ಕಲ್ಲಿನಿಂದ ತಲೆ ಜಜ್ಜಿ ಹತ್ಯೆ ಮಾಡಿದ್ದಾನೆ ಎಂದು ತಿಳಿದುಬಂದಿದೆ.
ಈ ಸುದ್ದಿ ಓದಿದ್ದೀರಾ? ಹುಬ್ಬಳ್ಳಿ | ರೈಲಿನಿಂದ ಬಿದ್ದ ಬಾಲಕನನ್ನು ರಕ್ಷಿಸಿದ ಆರ್‌ಪಿಎಫ್ ಸಿಬ್ಬಂದಿ
ಹತ್ಯೆಯಾದ ದುರ್ದೈವಿ ಕಾವ್ಯ(30) ಎಂದು ಗುರುತಿಸಲಾಗಿದೆ. ಅದೇ ಗ್ರಾಮದ ಯುವಕ ಕೊಲೆ ಮಾಡಿದ್ದಾನೆಂಬ ಅನುಮಾನ ವ್ಯಕ್ತವಾಗಿದೆ. ಈ ಬಗ್ಗೆ ಸ್ಥಳೀಯ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿದ್ದು, ಪ್ರಕರಣ ದಾಖಲಿಸಿಕೊಂಡಿದ್ದಾರೆ.