ಹೃದ್ರೋಗದ ಅಪಾಯದಲ್ಲಿರುವ ಶೇ. 40-50 ರಷ್ಟು ಬಿಎಂಟಿಸಿ ಚಾಲಕರು

Date:

Advertisements

ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ (ಬಿಎಂಟಿಸಿ)ಯ ಶೇ. 40-50 ರಷ್ಟು ಚಾಲಕರು ಹೃದ್ರೋಗದ ಅಪಾಯದಲ್ಲಿದ್ದಾರೆ. ಚಾಲಕರಲ್ಲಿ ಹೃದಯ ರಕ್ತನಾಳದ ಕಾಯಿಲೆಗಳ ಸಮಸ್ಯೆಯಿದೆ. ಹಲವರು ಮಧುಮೇಹ, ಅಧಿಕ ರಕ್ತದೊತ್ತಡದಿಂದ ಬಳಲುತ್ತಿದ್ದಾರೆ.

ಜಯದೇವ ಹೃದಯ ರಕ್ತನಾಳದ ವಿಜ್ಞಾನ ಮತ್ತು ಸಂಶೋಧನಾ ಸಂಸ್ಥೆ (ಎಸ್‌ಜೆಐಸಿಎಸ್‌ಆರ್) ನಿರ್ದೇಶಕ ಡಾ.ಸಿ.ಎನ್.ಮಂಜುನಾಥ್ ಮಾತನಾಡಿ, “ಕಳೆದ 12-13 ತಿಂಗಳಲ್ಲಿ 8,200 ಬಿಎಂಟಿಸಿ ಚಾಲಕರನ್ನು ಹೃದಯ ಸಂಬಂಧಿ ಕಾಯಿಲೆಗಳಿಗೆ ತಪಾಸಣೆ ಮಾಡಿದೆ. ಹೃದಯ ಸಂಬಂಧಿ ಸಮಸ್ಯೆಗಳಿಗಾಗಿ ಚಾಲಕರನ್ನು ಪರೀಕ್ಷಿಸಲು ಆಗಸ್ಟ್ 2022 ರಲ್ಲಿ ಆಸ್ಪತ್ರೆಯು ಬಿಎಂಟಿಸಿಯೊಂದಿಗೆ ಒಪ್ಪಂದಕ್ಕೆ ಸಹಿ ಹಾಕಿತ್ತು” ಎಂದು ಹೇಳಿದೆ.

“ಎಲ್ಲ ಚಾಲಕರು ರಕ್ತ ಪರೀಕ್ಷೆಗಳು, ಹೃದಯದ ಒತ್ತಡ (ಟ್ರೆಡ್‌ಮಿಲ್) ಪರೀಕ್ಷೆಗಳು, ಇಸಿಜಿ ಮತ್ತು ಎಕೋಕಾರ್ಡಿಯೋಗ್ರಾಮ್‌ಗಳೊಂದಿಗೆ (ಇಕೋ) ಸಮಗ್ರ ಆರೋಗ್ಯ ತಪಾಸಣೆಗೆ ಒಳಗಾದರು. 8,200 ಚಾಲಕರಿಗೆ ಆರೋಗ್ಯ ತಪಾಸಣೆ ಮಾಡಿದ್ದು, ಅವರಲ್ಲಿ ಶೇ.40 ರಷ್ಟು ಚಾಲಕರು ಮಧುಮೇಹಿಗಳಾಗಿದ್ದಾರೆ. ಶೇ. 40 ರಷ್ಟು ಚಾಲಕರು ಅಧಿಕ ರಕ್ತದೊತ್ತಡದಿಂದ ಬಳಲುತ್ತಿದ್ದಾರೆ” ಎಂದು ಹೇಳಿದ್ದಾರೆ.

Advertisements

“ಈಗಾಗಲೇ ಹೃದಯದಲ್ಲಿ ಬ್ಲಾಕೇಜ್ ನಂತಹ ಸಮಸ್ಯೆಗಳನ್ನು ಎದುರಿಸುತ್ತಿರುವ ಶೇಕಡಾ 5 ರಷ್ಟು ಚಾಲಕರಿಗೆ ವೈದ್ಯರು ಎಚ್ಚರಿಕೆ ನೀಡಿದ್ದಾರೆ. ಸುಮಾರು ಶೇ. 35ರಷ್ಟು ಚಾಲಕರು ಧೂಮಪಾನಿಗಳಾಗಿರುವುದು ಕಂಡುಬಂದಿದೆ. ಅನಿಯಮಿತ ಕೆಲಸದ ಸಮಯ, ಅಸಮರ್ಪಕ ಆಹಾರ ಸೇವನೆ, ವ್ಯಾಯಾಮದ ಕೊರತೆ ಮತ್ತು ದೂರದ ಪ್ರಯಾಣದ ಸಮಯದಲ್ಲಿ ನಿರಂತರ ಕುಳಿತುಕೊಳ್ಳುವುದರಿಂದ ಆಯಾಸದಿಂದ ಚಾಲಕರು ಹೃದಯ ಸಂಬಂಧಿ ಕಾಯಿಲೆಗಳಿಗೆ ಗುರಿಯಾಗುತ್ತಾರೆ” ಎಂದು ಮಂಜುನಾಥ್ ವಿವರಿಸಿದರು.

“ಇದೇ ರೀತಿಯ ಸಮಗ್ರ ಆರೋಗ್ಯ ತಪಾಸಣೆಗಳನ್ನು ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ (ಕೆಎಸ್‌ಆರ್‌ಟಿಸಿ) ಮತ್ತು ಪೊಲೀಸ್ ಸಿಬ್ಬಂದಿಗಳಿಗೂ ವಿಸ್ತರಿಸಲು ಪ್ರಸ್ತಾಪಿಸಲಾಗಿದೆ. ಏಕೆಂದರೆ, ಅವರು ಹೃದಯ ಸಂಬಂಧಿ ಸಮಸ್ಯೆಗಳ ಹೆಚ್ಚಿನ ಅಪಾಯದಲ್ಲಿದ್ದಾರೆ” ಎಂದರು.

ಈ ಸುದ್ದಿ ಓದಿದ್ದೀರಾ? ಹುಲಿ ಉಗುರು | ಅರಣ್ಯಾಧಿಕಾರಿಗಳಿಂದ ನಟ ದರ್ಶನ್ ಮನೆ ತಪಾಸಣೆ

“ಭಾರತದಲ್ಲಿ ಹೃದಯ ರಕ್ತನಾಳದ ಕಾಯಿಲೆಗಳು ಶೇ.30 ರಷ್ಟು ಸಾವುಗಳಿಗೆ ಕಾರಣವಾಗುತ್ತಿವೆ. ಆರಂಭಿಕ ಹಂತದಲ್ಲಿ ಜನರನ್ನು ಪರೀಕ್ಷಿಸುವುದು ಬಹಳ ಮುಖ್ಯ. ಇದು ಮರಣ ಪ್ರಮಾಣವನ್ನು ಕಡಿಮೆ ಮಾಡುತ್ತದೆ. ಬಿಎಂಟಿಸಿ, ಕೆಎಸ್‌ಆರ್‌ಟಿಸಿ ಚಾಲಕರು ಮತ್ತು ರಾಜ್ಯ ಪೊಲೀಸ್ ಅಧಿಕಾರಿಗಳು ಹೆಚ್ಚಿನ ಒತ್ತಡದ ಕೆಲಸವನ್ನು ಹೊಂದಿರುವುದರಿಂದ ಮತ್ತು ಪ್ರತಿದಿನವೂ ವಾಯುಮಾಲಿನ್ಯಕ್ಕೆ ಒಡ್ಡಿಕೊಳ್ಳುವುದರಿಂದ ಅವರನ್ನು ಪರೀಕ್ಷಿಸುವುದು ಮುಖ್ಯವಾಗಿದೆ. ಇದು ಹೃದಯ ಸಂಬಂಧಿ ಸಮಸ್ಯೆಗಳೊಂದಿಗೆ ಸಂಬಂಧಿಸಿದ ಮತ್ತೊಂದು ಅಂಶವಾಗಿದೆ” ಎಂದು ಹೇಳಿದರು.

“ವಾಯುಮಾಲಿನ್ಯವು ಕೇವಲ ಉಸಿರಾಟದ ಸಮಸ್ಯೆಗಳಿಗೆ ಮಾತ್ರ ಕಾರಣವಲ್ಲ. ಆದರೆ, 2.5 ಮಿಲಿ ಗ್ರಾಂಗಿಂತ ಕಡಿಮೆ ಇರುವ ಕಣಗಳು ಸುಲಭವಾಗಿ ಶ್ವಾಸಕೋಶದ ಮೂಲಕ ಹಾದುಹೋಗುತ್ತದೆ. ಅಪಧಮನಿಗಳಲ್ಲಿ ಅಡಚಣೆಯನ್ನು ಉಂಟುಮಾಡುತ್ತದೆ” ಎಂದರು.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಯಾದಗಿರಿ | ಅತಿವೃಷ್ಟಿಯಿಂದ ಬೆಳೆ ಹಾನಿ: ರೈತರಿಗೆ ಪರಿಹಾರ ನೀಡುವಂತೆ ಆಗ್ರಹ

ಯಾದಗಿರಿ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ಬೆಳೆ ಹಾನಿದ ರೈತರಿಗೆ ಸಮೀಕ್ಷೆ ನಡೆಸಿ ಶೀಘ್ರದಲ್ಲಿ...

ಗುಬ್ಬಿ | ಜನಪದ ಸಾಹಿತ್ಯ ಎಂದೆಂದಿಗೂ ಜೀವಂತ : ಡಾ.ಮೂರ್ತಿ ತಿಮ್ಮನಹಳ್ಳಿ

ಕನ್ನಡ ಸಾಹಿತ್ಯ ಲೋಕದಲ್ಲಿ ಹಲವು ಪ್ರಕಾರಗಳ ಪೈಕಿ ಜನಪದ ಸಾಹಿತ್ಯ...

ಉಡುಪಿ | ಮಹೇಶ್‌ ಶೆಟ್ಟಿ ತಿಮರೋಡಿ ಬೆಂಬಲಿಗರ ಕಾರು ಪೊಲೀಸ್‌ ಅಧೀಕ್ಷರಕ ಕಾರಿಗೆ ಡಿಕ್ಕಿ !

ಬೆಳ್ತಂಗಡಿಯ ಸೌಜನ್ಯ ಪರ ಹೋರಾಟಗಾರ ಮಹೇಶ್‌ ಶೆಟ್ಟಿ ತಿಮರೋಡಿಯವರನ್ನು ಬ್ರಹ್ಮಾವರ ಪೊಲೀಸ್...

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

Download Eedina App Android / iOS

X