- ಶಾಸಕ ಸುರೇಶ್ ಕುಮಾರ್ ನೇತೃತ್ವದಲ್ಲಿ ಚುನಾವಣಾಧಿಕಾರಿಗೆ ದೂರು
- ಪ್ರಕರಣವನ್ನು ಸಿಬಿಐ ಮತ್ತು ಎನ್ಐಎ ತನಿಖೆಗೆ ವಹಿಸಬೇಕು: ಆಗ್ರಹ
ಹೆಬ್ಬಾಳ ಕ್ಷೇತ್ರದಲ್ಲಿ ನಕಲಿ ವೋಟರ್ ಐಡಿ ತಯಾರಿಸಿಕೊಡುತ್ತಿದ್ದ ಗ್ಯಾಂಗ್‌ನ ಸದಸ್ಯರು ಸಚಿವ ಭೈರತಿ ಸುರೇಶ್‌ಗೆ ಆಪ್ತರಾಗಿದ್ದು, ಪ್ರಕರಣದ ಬಗ್ಗೆ ಸೂಕ್ತ ತನಿಖೆ ನಡೆಯಬೇಕು ಎಂದು ಆಗ್ರಹಿಸಿ ಕರ್ನಾಟಕ ಮುಖ್ಯ ಚುನಾವಣಾಧಿಕಾರಿಗೆ ಬಿಜೆಪಿ ನಿಯೋಗ ದೂರು ನೀಡಿದೆ.
ರಾಜಾಜಿನಗರ ಬಿಜೆಪಿ ಶಾಸಕ ಸುರೇಶ್ ಕುಮಾರ್ ನೇತೃತ್ವದಲ್ಲಿ ಚುನಾವಣಾಧಿಕಾರಿಗೆ ದೂರು ನೀಡಲಾಗಿದ್ದು, ಸಚಿವ ಭೈರತಿ ಸುರೇಶ್ ಶಾಸಕ ಸ್ಥಾನದಿಂದ ಅನರ್ಹತೆಗೆ ಆಗ್ರಹಿಸಿದೆ.
ಈ ಪ್ರಕರಣವನ್ನು ಸಿಬಿಐ ಮತ್ತು ಎನ್ಐಎ ತನಿಖೆಗೆ ವಹಿಸಬೇಕು. ನಕಲಿ ಆಧಾರ್ ಕಾರ್ಡ್ ದೇಶದ ಭದ್ರತೆಗೆ ಅಪಾಯಕಾರಿಯಾಗಿದೆ. ಹಾಗಾಗಿ, ಪ್ರಕರಣವನ್ನು ಉನ್ನತ ತನಿಖೆಗೆ ವಹಿಸುವಂತೆ ಬಿಜೆಪಿ ಆಯೋಗ ಒತ್ತಾಯಿಸಿದೆ.
ನಿಯೋಗದಲ್ಲಿ ಬಿಜೆಪಿ ಎಂಎಲ್ಸಿ ಛಲವಾದಿ ನಾರಾಯಣಸ್ವಾಮಿ, ಹೆಬ್ಬಾಳ ಕ್ಷೇತ್ರದ ಬಿಜೆಪಿ ಪರಾಜಿತ ಅಭ್ಯರ್ಥಿ ಕಟ್ಟಾ ಜಗದೀಶ್, ಬೆಂಗಳೂರು ವಕೀಲರ ಸಂಘದ ಅಧ್ಯಕ್ಷ ವಿವೇಕ್ ರೆಡ್ಡಿ ಉಪಸ್ಥಿತರಿದ್ದರು.
ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಭೀಕರ ಬರದ ನಡುವೆ ಅನಗತ್ಯ ವಿವಾದಗಳಲ್ಲಿ ಕಾಲಹರಣ ಮಾಡುತ್ತಿರುವ ಸರ್ಕಾರ
ವೋಟರ್ ಐಡಿ, ಆಧಾರ್ ಕಾರ್ಡ್, ಡ್ರೈವಿಂಗ್ ಲೈಸೆನ್ಸ್ನಂತಹ ಕೆಲವು ನಕಲಿ ದಾಖಲೆಗಳನ್ನು ಸೃಷ್ಟಿಸಿ ಅದನ್ನು ಮಾರಾಟ ಮಾಡುತ್ತಿದ್ದ ಆರೋಪದ ಮೇಲೆ ಮೂವರನ್ನು ಸಿಸಿಬಿ ಪೊಲೀಸರು ವಶಕ್ಕೆ ಪಡೆದು ಬಿಡುಗಡೆ ಮಾಡಿದ್ದಾರೆ.
ವಿಚಾರಣೆಗೆ ಒಳಪಟ್ಟ ಮೌನೇಶ್ ಕುಮಾರ್, ಭಗತ್ ಹಾಗೂ ರಾಘವೇಂದ್ರ ಮೂವರಲ್ಲಿ ಮೌನೇಶ್ ಕುಮಾರ್ ಹೆಬ್ಬಾಳ ಠಾಣಾ ವ್ಯಾಪ್ತಿಯ ಕನಕ ನಗರದಲ್ಲಿ ಎಂಎಸ್ಎಲ್ ಟೆಕ್ನೋ ಸೊಲ್ಯೂಷನ್ ಎಂಬ ಕಚೇರಿ ನಡೆಸುತ್ತಿದ್ದಾರೆ. ಜೊತೆಗೆ ಮೌನೇಶ್ ಸಚಿವ ಭೈರತಿ ಸುರೇಶ್ ಅವರಿಗೆ ಆಪ್ತ ಎಂದು ಹೇಳಲಾಗುತ್ತಿದೆ.