ಚಿತ್ರದುರ್ಗ | ಸ್ಪರ್ಧಾತ್ಮಕ ಪರೀಕ್ಷೆಗಳ ನಿರ್ವಹಣೆಗೆ ಹೆಚ್ಚಿನ ನಿಗಾ: ಜಿಲ್ಲಾಧಿಕಾರಿ ದಿವ್ಯಪ್ರಭು

Date:

Advertisements

ಅ.29ರಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ ವಿವಿಧ ಇಲಾಖೆಯ ದ್ವಿತೀಯ ದರ್ಜೆ ಸಹಾಯಕರು ಮತ್ತು ಕಿರಿಯ ಸಹಾಯಕರ ನೇಮಕಾತಿಗಾಗಿ ಸ್ಪರ್ಧಾತ್ಮಕ ಪರೀಕ್ಷೆ ನಡೆಯಲಿದ್ದು, ನಿರ್ವಹಣೆಗೆ ಹೆಚ್ಚಿನ ಪ್ರಾಮುಖ್ಯತೆ ನೀಡಬೇಕು ಎಂದು ಚಿತ್ರದುರ್ಗ ಜಿಲ್ಲಾಧಿಕಾರಿ ದಿವ್ಯಪ್ರಭು ಜಿ.ಆರ್.ಜೆ ಹೇಳಿದ್ದಾರೆ.

ಚಿತ್ರದುರ್ಗ ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಜರುಗಿದ ಪೂರ್ವ ಸಿದ್ಧತಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಸಮಿತಿ ಸದಸ್ಯರು, ಖಜಾನೆ ಅಧಿಕಾರಿ, ಮಾರ್ಗಾಧಿಕಾರಿಗಳು, ಪರೀಕ್ಷಾ ಕೇಂದ್ರದ ಮುಖ್ಯಸ್ಥರು ಹಾಗೂ ಕೊಠಡಿ ಮೇಲ್ವಿಚಾರಕರು ಪ್ರಶ್ನೆ ಪತ್ರಿಕೆ ಹಾಗೂ ಓಎಂಆರ್ ನಿರ್ವಹಣೆಗೆ ಹೆಚ್ಚಿನ ಪ್ರಾಮುಖ್ಯತೆ ನೀಡಬೇಕು ಎಂದು ತಿಳಿಸಿದರು.

ನಗರದ 20 ಕೇಂದ್ರಗಳಲ್ಲಿ ನೇಮಕಾತಿ ಪರೀಕ್ಷೆ ನಡೆಯಲಿದೆ. ಒಟ್ಟು 7,800 ಅಭ್ಯರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ. ಯಾವುದೇ ಪರೀಕ್ಷಾ ಅಕ್ರಮಗಳು ನಡೆಯದಂತೆ ಜಾಗರೂಕತೆ ವಹಿಸಬೇಕು. ಪರೀಕ್ಷಾ ಕೇಂದ್ರದ ಸುತ್ತಮುತ್ತ ಪೊಲೀಸ್‌ ಬಂದೋಬಸ್ತ್ ವ್ಯವಸ್ಥೆ ಮಾಡಬೇಕು. ನೇಮಕಾತಿ ಪರೀಕ್ಷೆಗಳು ಶೈಕ್ಷಣಿಕ ಪರೀಕ್ಷೆಗಳಿಗಿಂತಲೂ ಭಿನ್ನವಾಗಿರುತ್ತವೆ. ಪರೀಕ್ಷಾ ಕಾರ್ಯಗಳಿಗೆ ನಿಯೋಜಿಸಲಾದ ಅಧಿಕಾರಿಗಳನ್ನು ಹೊರತು ಪಡಿಸಿ, ಅನ್ಯ ವ್ಯಕ್ತಿಗಳ ಪ್ರವೇಶಕ್ಕೆ ನಿರ್ಬಂಧ ವಿಧಿಸಬೇಕು. ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಹೊರಡಿಸಿರುವ ಪರೀಕ್ಷಾ ನಿಯಮಗಳನ್ನು ತಪ್ಪದೇ ಪಾಲಿಸಬೇಕು ಎಂದು ನಿರ್ದೇಶಿಸಿದರು.

Advertisements

ಅಭ್ಯರ್ಥಿಗಳು ಪರೀಕ್ಷಾ ಕೇಂದ್ರಕ್ಕೆ ತೆರಳುವ ಮುಂಚೆ ಸೂಕ್ತವಾಗಿ ತಪಾಸಣೆ ನಡೆಸಬೇಕು. ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಹೊರಡಿಸಿರುವ ವಸ್ತ್ರ ಸಂಹಿಂತೆಯನ್ನು ಪುರುಷ ಮತ್ತು ಮಹಿಳಾ ಅಭ್ಯರ್ಥಿಗಳು ಕಡ್ಡಾಯವಾಗಿ ಪಾಲಿಸಬೇಕು. ಲೋಹದ  ಆಭರಣಗಳನ್ನು ಯಾವುದೇ ಕಾರಣಕ್ಕೂ ಮಹಿಳಾ ಅಭ್ಯರ್ಥಿಗಳು ಪರೀಕ್ಷಾ ಕೇಂದ್ರದೊಳಗೆ ಧರಿಸಬಾರದು. ಹಿಜಾಬ್ ಧರಿಸಿದಲ್ಲಿ ಪರೀಕ್ಷಾ ಕೇಂದ್ರಕ್ಕೆ ಒಂದು ಗಂಟೆ ಮುಂಚಿತವಾಗಿ ಆಗಮಿಸಿ ತಪಾಸಣೆಗೆ ಒಳಪಟ್ಟು, ನಂತರ ಪರೀಕ್ಷಾ ಕೊಠಡಿಗೆ ತೆರಳಬೇಕು. ಮೊಬೈಲ್ ಸೇರಿದಂತೆ, ಯಾವುದೇ ರೀತಿಯ ಎಲೆಕ್ಟ್ರಾನಿಕ್ ವಸ್ತುಗಳು, ಪೆನ್ಸಿಲ್, ಪೇಪರ್, ಎರೇಸರ್, ಜಾಮಿಟ್ರಿ ಬಾಕ್ಸ್ ಹಾಗೂ ಲಾಗ್ ಟೇಬಲ್ ತರುವಂತಿಲ್ಲ. ಪರೀಕ್ಷಾ ಕೇಂದ್ರದ ಒಳಗಡೆ ಆಹಾರ ಸೇವನೆಗೆ ಅವಕಾಶವಿಲ್ಲ. ಈ ಎಲ್ಲ ನಿಯಮಗಳನ್ನು ಪರೀಕ್ಷಾ ಕೇಂದ್ರದ ಮುಖ್ಯಸ್ಥರು ಗಮನಿಸಬೇಕು. ಪ್ರತಿ ಪರೀಕ್ಷಾ ಕೇಂದ್ರದಲ್ಲಿ ಕೇಂದ್ರದಲ್ಲಿ ಆರೋಗ್ಯ ಸಿಬ್ಬಂದಿಗಳನ್ನು ನೇಮಿಸುವಂತೆ ತಿಳಿಸಿದರು.

ಪರೀಕ್ಷಾ ಕಾರ್ಯದಲ್ಲಿ ಲೋಪ ಕಂಡುಬಂದರೆ ಸಂಬಂಧಪಟ್ಟವರ ಮೇಲೆ ಶಿಸ್ತುಕ್ರಮ ಕೈಗೊಳ್ಳಲಾಗುವುದು. ಪರೀಕ್ಷಾ ಅಕ್ರಮಗಳಲ್ಲಿ ಭಾಗಿಯಾದರೆ ಅಂತಹವರ ವಿರುದ್ಧ ಕ್ರಿಮಿನಲ್ ಮೊಕದ್ದಮೆ ದಾಖಲಿಸಿ, ಬಂಧನಕ್ಕೆ ಒಳಪಡಿಸಲಾಗುವುದು ಎಂದು ಜಿಲ್ಲಾಧಿಕಾರಿ ದಿವ್ಯಪ್ರಭು ಎಚ್ಚರಿಸಿದರು.

ಪರೀಕ್ಷೆಯ ಕಾರ್ಯ ಸುಗಮ ರೀತಿಯಲ್ಲಿ ನಡೆಸುವಲ್ಲಿ ಅಗತ್ಯ ಕ್ರಮಗಳನ್ನು ಈಗಾಗಲೇ  ಕೈಗೊಳ್ಳಲಾಗಿದೆ. ತಾಲೂಕು ಮಟ್ಟದ ಅಧಿಕಾರಿಗಳ ನೇತೃತ್ವದಲ್ಲಿ 5 ಮಾರ್ಗಾಧಿಕಾರಿಗಳ ತಂಡ ನೇಮಿಸಲಾಗಿದೆ. ಅಗತ್ಯ ಬಿದ್ದರೆ ಇನ್ನೂ ಎರಡು ಮಾರ್ಗಾಧಿಕಾರಿ ತಂಡಗಳನ್ನು ನೇಮಿಸಲಾಗುವುದು. ಈಗಾಗಲೇ ಪರೀಕ್ಷಾ ಪ್ರವೇಶ ಪತ್ರದಲ್ಲಿ ಅಭ್ಯರ್ಥಿಗಳಿಗೆ ಪರೀಕ್ಷಾ ಕೇಂದ್ರಗಳ ವಿವರ ಹಾಗೂ ಅಗತ್ಯ ಸೂಚನೆಗಳನ್ನು ನೀಡಲಾಗಿದೆ. ತ್ರಿಸದಸ್ಯ ಸಮಿತಿ ನೇತೃತ್ವದಲ್ಲಿಯೇ ಪ್ರಶ್ನೆ ಪತ್ರಿಕೆ ಹಾಗೂ ಓಎಂಆರ್ ನಿರ್ವಹಣೆ ಮಾಡಲಾಗುವುದು ಎಂದು ಅಪರ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ ಸಭೆಯಲ್ಲಿ ತಿಳಿಸಿದರು.

ಪರೀಕ್ಷಾ ಕೇಂದ್ರ ಮುಖ್ಯಸ್ಥರು ಹಾಗೂ ಕೊಠಡಿ ಮೇಲ್ವಿಚಾರಕರಿಗೆ ಪರೀಕ್ಷೆ ಸಂಬಂಧ ಸೂಕ್ತ ತರಬೇತಿ ನೀಡಲಾಗಿದೆ. ಪ್ರತಿ ಕೊಠಡಿಯಲ್ಲೂ 24 ಅಭ್ಯರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ. ಅಂಧ ಹಾಗೂ ಅಂಗವಿಕಲ ಅಭ್ಯರ್ಥಿಗಳಿಗೆ ಪ್ರತ್ಯೇಕ ವ್ಯವಸ್ಥೆ ಕಲ್ಪಿಸಲಾಗಿದೆ ಎಂದು ಪದವಿ ಪೂರ್ವ ಇಲಾಖೆ ಉಪನಿರ್ದೇಶಕ ಪುಟ್ಟಸ್ವಾಮಿ ತಿಳಿಸಿದರು.

ಸಭೆಯಲ್ಲಿ ತಹಶೀಲ್ದಾರ್ ಡಾ.ನಾಗವೇಣಿ, ಜಿಲ್ಲಾ ಖಜಾನಾಧಿಕಾರಿ ರಮೇಶ್, ಇತರೆ ಜಿಲ್ಲಾ ಮಟ್ಟದ ಅಧಿಕಾರಿಗಳು, ಕ್ಷೇತ್ರ ಶಿಕ್ಷಣಾಧಿಕಾರಿಗಳು ಸೇರಿದಂತೆ ಪರೀಕ್ಷಾ ಕೇಂದ್ರಗಳ ಮುಖ್ಯಸ್ಥರು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೆಳ್ತಂಗಡಿ | ಸೌಜನ್ಯ ಪ್ರಕರಣ ಮರು ತನಿಖೆಗೆ ವಿವಿಧ ಸಂಘಟನೆಗಳ ಮುಖಂಡರ ಒತ್ತಾಯ

ಬೆಂಗಳೂರಿನಿಂದ ಅಂಬೇಡ್ಕರ್ ಸೇನೆ ರಾಜ್ಯಾಧ್ಯಕ್ಷ ತ್ರಿಮೂರ್ತಿ ಅವರ ನೇತೃತ್ವದಲ್ಲಿ ವಿವಿಧ ಸಂಘಟನೆಗಳ...

ಚಿಕ್ಕಮಗಳೂರು | ಐದಳ್ಳಿ ಗ್ರಾಮದಲ್ಲಿ ನಿಲ್ಲದ ಕಾಡಾನೆಗಳ ದಾಂಧಲೆ: ಬೆಳೆ ನಾಶ; ಕ್ರಮಕ್ಕೆ ರೈತರ ಒತ್ತಾಯ

ಕಾಫಿನಾಡು ಚಿಕ್ಕಮಗಳೂರಿನಲ್ಲಿ ಸುರಿಯುತ್ತಿರುವ ಧಾರಾಕಾರ ಮಳೆ ನಡುವೆ ಕಾಡಾನೆಗಳ ದಾಂಧಲೆ ಮಿತಿ...

ಸಾಗರ | ಸಿಗಂದೂರು ಸೇತುವೆ ಮೇಲೆ ವ್ಹೀಲಿಂಗ್ ; ಬಿತ್ತು 5,000₹ ದಂಡ

ಸಾಗರದ ಸಿಗಂದೂರು ಸೇತುವೆ ಮೇಲೆ ದುಬಾರಿ ಬೈಕ್‌ನಲ್ಲಿ ವೀಲಿಂಗ್‌ ಮಾಡಿದ ಯುವಕನಿಗೆ...

ಶಿವಮೊಗ್ಗ | ಒಳಮೀಸಲಾತಿ ಪುನರ್ ಪರಿಶೀಲಿಸಿ, ನ್ಯಾಯ ಒದಗಿಸಿ ; ಅಖಿಲ ಕರ್ನಾಟಕ ಕೊರಚ ಮಹಾ ಸಂಘ ಆಗ್ರಹ

ಶಿವಮೊಗ್ಗ, ಅಖಿಲ ಕರ್ನಾಟಕ ಕೊರಚ ಮಹಾ ಸಂಘವು ಸರ್ಕಾರದ ಒಳಮೀಸಲಾತಿಯನ್ನು ಪುನರ್...

Download Eedina App Android / iOS

X