ದಾವಣಗೆರೆ | ಕಾರ್ಮಿಕರಿಗೆ ಅನ್ಯಾಯವಾದರೆ ನಾನು ಸಹಿಸುವುದಿಲ್ಲ: ಶಾಸಕ ಬಿ.ದೇವೇಂದ್ರಪ್ಪ

Date:

Advertisements

ರಾಜ್ಯದಲ್ಲಿ ಬರಗಾಲ ಆವರಿಸಿದೆ. ಇಂತಹ ಸಂದರ್ಭದಲ್ಲಿ ನರೇಗಾ ಕೂಲಿ ಕಾರ್ಮಿಕರಿಗೆ ಕೈ ತುಂಬಾ ಕೆಲಸ ಕೊಡಿ. ಕಾರ್ಮಿಕರಿಗೆ ಅನ್ಯಾಯವಾದರೆ ನಾನು ಸಹಿಸುವುದಿಲ್ಲ ಎಂದು ಶಾಸಕ ಬಿ.ದೇವೇಂದ್ರಪ್ಪ ಅಧಿಕಾರಿಗಳಿಗೆ ಎಚ್ಚರಿಕೆ ನೀಡಿದ್ದಾರೆ.

ದಾವಣಗೆರೆ ಜಿಲ್ಲೆಯ ಜಗಳೂರು ಪಟ್ಟಣದಲ್ಲಿರುವ ಶಾಸಕರ ಜನ ಸಂಪರ್ಕ ಕಚೇರಿ ಆವರಣದಲ್ಲಿ ಗ್ರಾಮೀಣ ಕೂಲಿ ಕಾರ್ಮಿಕರ ಸಂಘಟನೆ (ಗ್ರಾಕೂಸ್) ಪದಾಧಿಕಾರಿಗಳ ಪ್ರತಿಭಟನಾ ಮನವಿ ಸ್ವೀಕರಿಸಿ ಅವರು ಮಾತನಾಡಿದರು.

ಕಾರ್ಮಿಕರು ಒಟ್ಟಾಗಿ ಬಂದು ದುಡಿದ ಕೂಲಿ ಹಣವನ್ನು ಕೇಳುತ್ತಿದ್ದಾರೆ. ಆದರೆ, ಕೂಲಿ ಹಣ ಕೊಡಲು ಸತಾಯಿಸುತ್ತಿರುವುದು ಸರಿಯಲ್ಲ. ಬಡವರ ಜೊತೆ ಚೆಲ್ಲಾಟವಾಡಿದರೆ ನಾನು ಸಹಿಸುವುದಿಲ್ಲ ಎಂದು ಎಚ್ಚರಿಸಿದರು.

Advertisements

ಅಣಬೂರು ಸೇರಿದಂತೆ ಅನೇಕ ಗ್ರಾ.ಪಂ ಪಿಡಿಒಗಳು ಕಾರ್ಮಿಕರ ಸಮಸ್ಯೆಗಳಿಗೆ ಸ್ಪಂದಿಸುತ್ತಿಲ್ಲ ಎಂದು ಆರೋಪ ಮಾಡುತ್ತಿದ್ದಾರೆ. ಅಂತಹ ಪಿಡಿಒಗಳ ಸಭೆ ಕರೆದು ಕಾರ್ಮಿಕರಿಗೆ ಅನ್ಯಾಯವಾಗದಂತೆ ನೋಡಿಕೊಳ್ಳುವ ಜವಾಬ್ದಾರಿ ನಿಮಗಿಲ್ಲವೇ ಎಂದು ತಾ.ಪಂ ಇಒ ಕೆ.ಟಿ.ಕರಿಬಸಪ್ಪ ಮತ್ತು ನರೇಗಾ ಎಡಿ ವೈ.ಎಚ್.ಚಂದ್ರಶೇಖರ್ ಅವರಿಗೆ ಪ್ರಶ್ನಿಸಿದ ಶಾಸಕರು, ಕಾರ್ಮಿಕರ ಜೀವನದ ಜೊತೆ ಚೆಲ್ಲಾಟವಾಡಬೇಡಿ. ಅನಗತ್ಯವಾಗಿ ಕೂಲಿ ಕಾರ್ಮಿಕರಿಗೆ ತೊಂದರೆ ಕೊಡಬೇಡಿ. ತಾಂತ್ರಿಕ ಸಮಸ್ಯೆಗಳಾಗದಂತೆ ನೋಡಿಕೊಳ್ಳುವ ಜವಾಬ್ದಾರಿ ನಿಮ್ಮದಲ್ಲವೇ ಎಂದು ಗುಡುಗಿದರು.

ಗ್ರಾಕೂಸ್ ತಾಲೂಕು ಕಾರ್ಯದರ್ಶಿ ಪಿ.ಎಸ್.ಸುಧಾ ಮಾತನಾಡಿ, ಪಲ್ಲಾಗಟ್ಟೆ ಗ್ರಾ.ಪಂ ಪಿಡಿಓ ಆಗಿದ್ದ ಶಿಶಿಧರ್ ಪಟೇಲ್ ಇದುವರೆಗೂ ನಿರುದ್ಯೋಗಿ ಭತ್ಯೆ ಕೊಟ್ಟಿಲ್ಲ. ಅಷ್ಟೇ ಅಲ್ಲ ಅಣಬೂರು ಪಿಡಿಒ ಓಬಯ್ಯ ಸಹ ನಿರುದ್ಯೋಗಿ ಭತ್ಯೆ ಕೊಡದೇ ಕಾರ್ಮಿಕರಿಗೆ ಸತಾಯಿಸುತ್ತಿದ್ದಾರೆ. ಎನ್ಎಂಆರ್ ಝೀರೋ ಆದರೂ ಪಿಡಿಒಗಳಿಂದ ನಿರುದ್ಯೋಗಿ ಭತ್ತೆ ಕೊಡಬೇಕು. ಆದರೆ, ಅಂತಹ ಪಿಡಿಒಗಳ ವಿರುದ್ಧ ಅಧಿಕಾರಿಗಳು ಕ್ರಮ ಕೈಗೊಂಡಿಲ್ಲ. ಹೊಸ ಜಾಬ್ ಕಾರ್ಡ್ ಕೊಡುತ್ತಿಲ್ಲ. ಚಾಲ್ತಿಯಲ್ಲಿರುವ ಜಾಬ್ ಕಾರ್ಡ್‌ಗೂ ಉದ್ಯೋಗ ಕೊಡುತ್ತಿಲ್ಲ. ಬರದಿಂದ ನಲುಗಿ ಹೋಗಿದ್ದೇವೆ. ಕೆಲಸ ಕೊಡಬೇಕಾಗುತ್ತದೆ ಎಂದು ಇಲ್ಲಸಲ್ಲದ ತಾಂತ್ರಿಕ ಸಬೂಬು ಹೇಳುತ್ತಿದ್ದಾರೆ. ತಾ.ಪಂ ಇಓ ಮತ್ತು ಸಿಇಓ ಸೇರಿ ಪಿಡಿಒಗಳಿಗೆ ನಿರುದ್ಯೋಗಿ ಭತ್ಯೆ ಶಿಫಾರಸ್ಸು ಮಾಡಬೇಕು ಎಂದು ಆಗ್ರಹಿಸಿದರು.

ಗ್ರಾಕೂಸ್ ಕಾರ್ಯದರ್ಶಿ ಶ್ರುತಿ, ನರೇಗಾ ಹಣ ತಕ್ಷಣ ಕಾರ್ಮಿಕರ ಖಾತೆಗಳಿಗೆ ಜಮಾ ಮಾಡಬೇಕು. ಬರ ಪರಿಹಾರಕ್ಕಾಗಿ ಹೆಚ್ಚುವರಿ 50 ಮಾನವ ದಿನಗಳ ಕೆಲಸವನ್ನು ಒದಗಿಸುವಂತೆ ಆದೇಶ ನೀಡಬೇಕು, ಕಾರ್ಮಿಕರು ಬಿರು ಬಿಸಿಲಿನಲ್ಲಿ ದಿನಕ್ಕೆ ಎರಡು ಸಮಯ ಹಾಜರಾತಿ ಮಾಡಿರುವುದರಿಂದ ಕೆಲಸ ಮುಗಿಸಿದರೂ, ಹಾಜರಾತಿಗಾಗಿ ಕಾಯುವಂತಾಗಿದೆ ಎಂದು ಹೇಳಿದರು.

ಈ ವೇಳೆ ಗ್ರೇಟ್ -2 ತಹಶೀಲ್ದಾರ್ ಮಂಜಾನಂದ, ತಾ.ಪಂ ಇಓ ಕೆ.ಟಿ.ಕರಿಬಸಪ್ಪ, ನರೇಗಾ ಎಡಿ ವೈ.ಎಚ್.ಚಂದ್ರಶೇಖರ್, ಸಮಾಜ ಕಲ್ಯಾಣ ಇಲಾಖೆ ನಿವೃತ್ತ ಅಧಿಕಾರಿ ಬಿ.ಮಹೇಶ್ವರಪ್ಪ ಯಲ್ಲಮ್ಮ, ನಾಗರಾಜ್, ಮಾದೀಹಳ್ಳಿ ಪರಮೇಶ್ವರಪ್ಪ, ರೇಣುಕಮ್ಮ, ಅನಸೂಯಮ್ಮ, ಅಣಬೂರು ಮಹಾಲಕ್ಷ್ಮಿ, ಮರೀಕುಂಟೆ ಹನುಮಂತಪ್ಪ,  ಸೇರಿದಂತೆ ಗ್ರಾಕೂಸ್‌ನ ನೂರಾರು ಕೂಲಿ ಕಾರ್ಮಿಕರು ಹಾಜರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಯಾದಗಿರಿ | ಅತಿವೃಷ್ಟಿಯಿಂದ ಬೆಳೆ ಹಾನಿ: ರೈತರಿಗೆ ಪರಿಹಾರ ನೀಡುವಂತೆ ಆಗ್ರಹ

ಯಾದಗಿರಿ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ಬೆಳೆ ಹಾನಿದ ರೈತರಿಗೆ ಸಮೀಕ್ಷೆ ನಡೆಸಿ ಶೀಘ್ರದಲ್ಲಿ...

ಗುಬ್ಬಿ | ಜನಪದ ಸಾಹಿತ್ಯ ಎಂದೆಂದಿಗೂ ಜೀವಂತ : ಡಾ.ಮೂರ್ತಿ ತಿಮ್ಮನಹಳ್ಳಿ

ಕನ್ನಡ ಸಾಹಿತ್ಯ ಲೋಕದಲ್ಲಿ ಹಲವು ಪ್ರಕಾರಗಳ ಪೈಕಿ ಜನಪದ ಸಾಹಿತ್ಯ...

ಉಡುಪಿ | ಮಹೇಶ್‌ ಶೆಟ್ಟಿ ತಿಮರೋಡಿ ಬೆಂಬಲಿಗರ ಕಾರು ಪೊಲೀಸ್‌ ಅಧೀಕ್ಷರಕ ಕಾರಿಗೆ ಡಿಕ್ಕಿ !

ಬೆಳ್ತಂಗಡಿಯ ಸೌಜನ್ಯ ಪರ ಹೋರಾಟಗಾರ ಮಹೇಶ್‌ ಶೆಟ್ಟಿ ತಿಮರೋಡಿಯವರನ್ನು ಬ್ರಹ್ಮಾವರ ಪೊಲೀಸ್...

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

Download Eedina App Android / iOS

X