ಕರ್ನಾಟಕದಲ್ಲಿ ಪ್ರತಿ ವರ್ಷ ಶೇ.1ರಷ್ಟು ಕ್ಯಾನ್ಸರ್ ಪ್ರಕರಣಗಳು ಹೆಚ್ಚಳ

Date:

Advertisements

ಕರ್ನಾಟಕದಲ್ಲಿ ಪ್ರತಿ ವರ್ಷ ಶೇಕಡಾ 1ರಷ್ಟು ಕ್ಯಾನ್ಸರ್ ಪ್ರಕರಣಗಳು ಹೆಚ್ಚುತ್ತಿವೆ. ಮಹಿಳೆಯರು ಹೆಚ್ಚಾಗಿ ಈ ರೋಗಕ್ಕೆ ತುತ್ತಾಗುತ್ತಿದ್ದಾರೆ ಎಂದು ಅಂದಾಜಿಸಲಾಗಿದೆ. ಮಹಿಳೆಯರಲ್ಲಿ ಹೆಚ್ಚಾಗಿ ಸ್ತನ ಕ್ಯಾನ್ಸರ್ ಪ್ರಕರಣಗಳು ಕಂಡು ಬರುತ್ತಿವೆ. ಅಲ್ಲದೆ, ಗರ್ಭಕಂಠದ ಕ್ಯಾನ್ಸರ್ ಮತ್ತು ಅಂಡಾಶಯದ ಕ್ಯಾನ್ಸರ್‌ಗಳು ಕಂಡು ಬರುತ್ತಿವೆ ಎಂದು ವರದಿಯಾಗಿದೆ.

ಕಿದ್ವಾಯಿ ಮೆಮೋರಿಯಲ್ ಇನ್‌ಸ್ಟಿಟ್ಯೂಟ್ ಆಫ್ ಆಂಕೊಲಾಜಿಯ (ಕೆಎಂಐಒ) ವೈದ್ಯಕೀಯ ಆಂಕೊಲಾಜಿಸ್ಟ್ ಡಾ.ಸುರೇಶ್ ಬಾಬು ಮಾತನಾಡಿ, “ಈ ಹಿಂದೆ, ಮಹಿಳೆಯರಲ್ಲಿ ಗರ್ಭಕಂಠದ ಕ್ಯಾನ್ಸರ್ ಪ್ರಕರಣಗಳು ಅತಿ ಹೆಚ್ಚು ಸಂಭವಿಸುತ್ತಿದ್ದವು. ಆದರೆ, ಈಗ ಸುಧಾರಿತ ಸ್ಕ್ರೀನಿಂಗ್‌ನಿಂದಾಗಿ ಗರ್ಭಕಂಠ ಕ್ಯಾನ್ಸರ್‌ಗಳಲ್ಲಿ ಇಳಿಮುಖ ಕಂಡಿದೆ. ಕಳೆದ ಕೆಲವು ವರ್ಷಗಳಿಂದ ಬದಲಾಗುತ್ತಿರುವ ಜೀವನಶೈಲಿಯಿಂದ ಸ್ತನ ಕ್ಯಾನ್ಸರ್ ಪ್ರಕರಣಗಳು ಹೆಚ್ಚಿನ ಸಂಖ್ಯೆಯಲ್ಲಿ ಕಂಡುಬರುತ್ತಿವೆ” ಎಂದಿದ್ದಾರೆ.

“ಸ್ತನ ಕ್ಯಾನ್ಸರ್ ತಪಾಸಣೆಯು ನಗರ ಪ್ರದೇಶಗಳಲ್ಲಿ ಸುಧಾರಿಸಿದರೂ, ಗ್ರಾಮೀಣ ಮಹಿಳೆಯರಲ್ಲಿ ಇನ್ನೂ ಜಾಗೃತಿ ಮೂಡಿಸುವ ಅಗತ್ಯವಿದೆ. ಕರ್ನಾಟಕದ ಗ್ರಾಮೀಣ ಭಾಗಗಳಲ್ಲಿನ ಮಹಿಳೆಯರು ಸ್ತನದಲ್ಲಿ ಉಂಡೆಯಾಕಾರ ಗಡ್ಡೆ ಇದ್ದರೂ ತಪಾಸಣೆ ಮಾಡುವುದನ್ನು ತಪ್ಪಿಸುತ್ತಾರೆ. ತಪಾಸಣೆ ಮಾಡುವುದನ್ನು ತಪ್ಪಿಸುವುದರಿಂದ ರೋಗ ಹರಡಲು ಕಾರಣವಾಗುತ್ತದೆ” ಎಂದು ಹೇಳಿದರು.

Advertisements

“ಸ್ತನ ಕ್ಯಾನ್ಸರ್‌ ಹೊಂದಿರುವ ಗ್ರಾಮೀಣ ಮಹಿಳೆಯರು ನಿಯಮಿತವಾಗಿ ತಪಾಸಣೆಗೆ ಒಳಪಡುವುದನ್ನು ಮೀರಿ ಅಲ್ಟ್ರಾಸೌಂಡ್ ಮತ್ತು ಮ್ಯಾಮೊಗ್ರಫಿ ಪರೀಕ್ಷೆಗಳಂತಹ ಸೌಲಭ್ಯಗಳನ್ನು ಪಡೆಯಲು ಸಾಧ್ಯವಿಲ್ಲ. ಏಕೆಂದರೆ, ಈ ಪರೀಕ್ಷೆಗಳು ಮೆಟಾಸ್ಟಾಟಿಕ್ ಹಂತದಲ್ಲಿ ರೋಗನಿರ್ಣಯ ಮಾಡಲು ಆರ್ಥಿಕ ಹೊರೆಯನ್ನು ಹೆಚ್ಚಿಸುತ್ತದೆ” ಎಂದು ಡಾ ಬಾಬು ವಿವರಿಸಿದರು.

“ಮತ್ತೊಂದು ಅಂಶವೆಂದರೆ, ಮಹಿಳೆಯರ ಸ್ತನಗಳಲ್ಲಿ ಉದ್ಭವಾಗಿರುವ ಉಂಡೆಯಾಕಾರದ ಗಡ್ಡೆಗಳು ನೋವುರಹಿತವಾಗಿರುತ್ತವೆ. ಇದರಿಂದ ಮಹಿಳೆಯರು ಪರೀಕ್ಷೆ ಮಾಡಿಸಲು ಹಿಂದೇಟು ಹಾಕುತ್ತಾರೆ. ಅಕ್ಟೋಬರ್ ಅನ್ನು ಸ್ತನ ಕ್ಯಾನ್ಸರ್ ಜಾಗೃತಿ ತಿಂಗಳಾಗಿ ಆಚರಿಸಲಾಗುತ್ತದೆ” ಎಂದರು.

ಮಣಿಪಾಲ್ ಆಸ್ಪತ್ರೆಯ ಶಸ್ತ್ರ ಚಿಕಿತ್ಸಾ ಆಂಕೊಲಾಜಿ ಮತ್ತು ರೊಬೊಟಿಕ್ ಸರ್ಜರಿ ವಿಭಾಗದ ಮುಖ್ಯಸ್ಥರು ಮತ್ತು ಸಲಹೆಗಾರರಾದ ಡಾ ಶಬ್ಬರ್ ಜವೇರಿ ಅವರು ಚಿಕ್ಕ ವಯಸ್ಸಿನ ಮಹಿಳೆಯರಲ್ಲಿ ಹೆಚ್ಚು ಸ್ತನ ಕ್ಯಾನ್ಸರ್ ಪ್ರಕರಣಗಳು ಕಂಡುಬರುತ್ತಿವೆ ಎಂದು ಹೇಳಿದರು.

ಹಿಂದೆ, 50-60ರ ವಯಸ್ಸಿನ ಮಹಿಳೆಯರಲ್ಲಿ ಸ್ತನ ಕ್ಯಾನ್ಸರ್ ರೋಗ ಕಂಡುಬರುತ್ತಿತ್ತು. ಆದರೆ, ಈಗ 30ರ ಹರೆಯದ ಮಹಿಳೆಯರಲ್ಲಿ ಸಹ ರೋಗ ಕಂಡು ಬರುತ್ತಿದೆ.ಇದಕ್ಕೆ ಜೀವನಶೈಲಿಯಲ್ಲಿನ ಬದಲಾವಣೆಗಳು, ತಡವಾಗಿ ಮದುವೆಯಾಗುವುದು, ಕಡಿಮೆ ಹಾಲುಣಿಸುವ ಅವಧಿ ಅಥವಾ ಕೆಲಸ-ಸಂಬಂಧಿತ ಒತ್ತಡವು ಕಾರಣವೆಂದು ಹೇಳಲಾಗುತ್ತದೆ” ಎಂದು ತಿಳಿಸಿದರು.

ಈ ಸುದ್ದಿ ಓದಿದ್ದೀರಾ? ಬೆಂಗಳೂರು – ಹೊಸ ಭುವನೇಶ್ವರ ನಡುವೆ ಒಂದು ಟ್ರಿಪ್ ವಿಶೇಷ ರೈಲು ಓಡಿಸಲು ನೈರುತ್ಯ ರೈಲ್ವೆ ನಿರ್ಧಾರ

ಕೆಎಮ್‌ಐಒ ಸೆಪ್ಟೆಂಬರ್ 2023 ರಲ್ಲಿ ಬಿಡುಗಡೆ ಮಾಡಿದ ವರದಿಯು, “ರಾಜ್ಯದಲ್ಲಿ 87,000 ಹೊಸ ಕ್ಯಾನ್ಸರ್ ಪ್ರಕರಣಗಳನ್ನು ಅಂದಾಜಿಸಲಾಗಿದೆ. ಭಾರತದಲ್ಲಿ 37.5 ಲಕ್ಷಕ್ಕೂ ಹೆಚ್ಚು ಪ್ರಕರಣಗಳಿದ್ದು, ಅದರಲ್ಲಿ 2.3 ಲಕ್ಷ ಪ್ರಕರಣಗಳು ಕರ್ನಾಟಕದಿಂದ ಬಂದಿವೆ. ಬೆಂಗಳೂರಿನಲ್ಲಿ ಶ್ವಾಸಕೋಶ, ಹೊಟ್ಟೆ, ಪ್ರಾಸ್ಟೇಟ್ ಮತ್ತು ಅನ್ನನಾಳದ ಕ್ಯಾನ್ಸರ್‌ಗಳು ಪುರುಷರಲ್ಲಿ ಪ್ರಧಾನವಾಗಿರುತ್ತವೆ. ಮಹಿಳೆಯರಲ್ಲಿ ಸ್ತನ, ಗರ್ಭಕಂಠ, ಅಂಡಾಶಯ ಮತ್ತು ಕಾರ್ಪಸ್ ಗರ್ಭಾಶಯಗಳು ಪ್ರಮುಖ ಕ್ಯಾನ್ಸರ್‌ಗಳಾಗಿವೆ” ಎಂದು ಹೇಳಿದೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಿವಮೊಗ್ಗ | ಒಳಮೀಸಲಾತಿ ಪುನರ್ ಪರಿಶೀಲಿಸಿ, ನ್ಯಾಯ ಒದಗಿಸಿ ; ಅಖಿಲ ಕರ್ನಾಟಕ ಕೊರಚ ಮಹಾ ಸಂಘ ಆಗ್ರಹ

ಶಿವಮೊಗ್ಗ, ಅಖಿಲ ಕರ್ನಾಟಕ ಕೊರಚ ಮಹಾ ಸಂಘವು ಸರ್ಕಾರದ ಒಳಮೀಸಲಾತಿಯನ್ನು ಪುನರ್...

ಮಂಡ್ಯ | ಕಿರುಗಾವಲು ಜ್ಯುವೆಲರಿ ಶಾಪ್ ಕಳ್ಳತನ; ಆರೋಪಿ ಕಾಲಿಗೆ ಗುಂಡು

ಮಂಡ್ಯ ಜಿಲ್ಲೆ, ಕಿರುಗಾವಲು ಜ್ಯುವೆಲರಿ ಶಾಪ್ ನಲ್ಲಿ ನಡೆದ ಕಳ್ಳತನ ಹಾಗೂ...

ಬಾಗಲಕೋಟೆ | ಬೀದಿ ನಾಯಿಗಳ ಹಾವಳಿ; ಶೀಘ್ರ ಕ್ರಮಕ್ಕೆ ಡಿಸಿ ಸಂಗಪ್ಪ ಸೂಚನೆ

ಬಾಗಲಕೋಟೆ ಜಿಲ್ಲೆಯ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿನ ಬೀದಿನಾಯಿಗಳ ಹಾವಳಿಯಿಂದ ಸಾರ್ವಜನಿಕರು ಹಾಗೂ...

ಶಿವಮೊಗ್ಗ | ಡಿ.ಎ.ಆರ್.ಸಭಾಂಗಣದಲ್ಲಿ ಜಿಲ್ಲಾಧಿಕಾರಿ ನೇತೃತ್ವದಲ್ಲಿ ಶಾಂತಿ ಸಮಿತಿ ಸಭೆ

ಎಲ್ಲಾ ಧರ್ಮದವರು ಹಬ್ಬಗಳನ್ನು ಸಡಗರ-ಸಂಭ್ರಮಗಳಿಂದ ಆಚರಿಸುವಂತೆ ಜಿಲ್ಲಾಧಿಕಾರಿ ಗುರುದತ್ ಹೆಗಡೆ ಕರೆ...

Download Eedina App Android / iOS

X