ವಿಧಾನಸೌಧದ ಬ್ಯಾಂಕ್ವೆಟ್ ಸಭಾಂಗಣದಲ್ಲಿ ಶನಿವಾರ ಆಯೋಜಿಸಿದ್ದ ಮಹರ್ಷಿ ವಾಲ್ಮೀಕಿ ಜಯಂತಿ ಕಾರ್ಯಕ್ರಮವನ್ನು ಉದ್ಘಾಟಿಸಿ, ಮಹರ್ಷಿ ವಾಲ್ಮೀಕಿ ಪ್ರಶಸ್ತಿಗಳನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಾಧಕರಿಗೆ ಪ್ರದಾನ ಮಾಡಿದರು.
ಪ್ರಶಸ್ತಿ ಪ್ರದಾನಕ್ಕೂ ಮುನ್ನ ಸಿದ್ದರಾಮಯ್ಯ ಅವರು ವಾಲ್ಮೀಕಿ ಪ್ರತಿಮೆಗೆ ಮಾಲಾರ್ಪಣೆ ಮಾಡಿ ಪುಷ್ಪ ನಮನ ಸಲ್ಲಿಸಿದರು.
ಪ್ರಶಸ್ತಿ ಪಡೆದ ಸಾಧಕರು
ನ್ಯಾಯಾಂಗ ಕ್ಷೇತ್ರದಿಂದ ಹೈಕೋರ್ಟ್‌ನ ನಿವೃತ್ತ ಮುಖ್ಯ ನ್ಯಾಯಮೂರ್ತಿ ಎನ್ ವೈ ಹನುಮಂತಪ್ಪ, ಧಾರ್ಮಿಕ ಕ್ಷೇತ್ರದಿಂದ ಮಹಾದೇವಮ್ಮ, ಶಿಕ್ಷಣ ಕ್ಷೇತ್ರದಿಂದ ರಾಮಣ್ಣ ಮಹಾದೇವ ಗಸಿ, ಸಮಾಜ ಸೇವೆ ಕ್ಷೇತ್ರದಿಂದ ಜಿ ಓ ಮಹಾಂತಪ್ಪ, ಸಾಮಾಜಿಕ ಸಂಘಟನೆ ವಲಯದಿಂದ ಸೋಮಣ್ಣ, ವೈದ್ಯಕೀಯ ಕ್ಷೇತ್ರದಿಂದ ಶಾರದ ಪ್ರಭು ಹುಲಿ ನಾಯಕ, ಸಾಹಿತ್ಯ ಕ್ಷೇತ್ರದಿಂದ ಸುಕನ್ಯಾ ಮಾರುತಿ ಹಾಗೂ ರಂಗಭೂಮಿಯಿಂದ ಸುಜಾತಮ್ಮ.
ಈ ಸಂದರ್ಭದಲ್ಲಿ ರಾಜನಹಳ್ಳಿ ಗುರುಪೀಠದ ವಾಲ್ಮೀಕಿ ಪ್ರಸನ್ನಾನಂದಪುರಿ ಸ್ವಾಮೀಜಿ, ಸಚಿವರಾದ ಡಾ. ಹೆಚ್.ಸಿ.ಮಹದೇವಪ್ಪ, ಕೆ.ಎನ್.ರಾಜಣ್ಣ, ಸತೀಶ್ ಜಾರಕಿಹೊಳಿ, ಬಿ.ನಾಗೇಂದ್ರ, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಗೋವಿಂದರಾಜು, ಮಾಜಿ ಸಚಿವ ಆಂಜನೇಯ, ಮಾಜಿ ಸಂಸದ ಉಗ್ರಪ್ಪ ಹಾಗೂ ವಾಲ್ಮೀಕಿ ಸಮಾಜದ ಮುಖಂಡರು ಉಪಸ್ಥಿತರಿದ್ದರು.
ಪ್ರಸಕ್ತ ಸಾಲಿನ 'ರಾಜ್ಯ ಮಟ್ಟದ ವಾಲ್ಮೀಕಿ ಪ್ರಶಸ್ತಿ'ಗೆ ಭಾಜನರಾಗಿರುವ ಎಲ್ಲಾ ಗಣ್ಯರಿಗೆ ಅಭಿನಂದನೆಗಳು.
ತಮ್ಮ ಬದುಕು ಮತ್ತು ಸಾಧನೆ ಸಮಾಜಕ್ಕೆ ಸ್ಪೂರ್ತಿಯಾಗಲಿದೆ ಎಂದು ಭಾವಿಸಿದ್ದೇನೆ.
– ಮುಖ್ಯಮಂತ್ರಿ @siddaramaiah #ವಾಲ್ಮೀಕಿಪ್ರಶಸ್ತಿ pic.twitter.com/zs0keFm7Nr— CM of Karnataka (@CMofKarnataka) October 28, 2023