ಉಡುಪಿ | ಕರ್ನಾಟಕಕ್ಕೆ ಬಂಟರ ಕೊಡುಗೆ ಅಪಾರ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್

Date:

Advertisements

ಕರ್ನಾಟಕಕ್ಕೆ ಬಂಟ ಸಮುದಾಯದ ಕೊಡುಗೆ ಅಪಾರ. ಎಲ್ಲೆ ಹೋದರೂ ತಮ್ಮತನವನ್ನು ಕಾಪಾಡಿಕೊಂಡು ಬರುತ್ತಿದ್ದಾರೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ವಿಕಲಚೇತನರ ಹಾಗೂ ಹಿರಿಯನಾಗರೀಕರ ಸಬಲೀಕರಣ ಸಚಿವೆ ಲಕ್ಷ್ಮೀ ಆರ್ ಹೆಬ್ಬಾಳ್ಕರ್ ಹೇಳಿದರು.

ಉಡುಪಿಯಲ್ಲಿ ಜಾಗತಿಕ ಬಂಟರ ಸಂಘಗಳ ಒಕ್ಕೂಟ ಆಯೋಜಿಸಿದ್ದ ‘ವಿಶ್ವ ಬಂಟರ ಸಮ್ಮೇಳನ’ದಲ್ಲಿ ಅವರು ಮಾತನಾಡಿದರು. “ಕಲೆ, ಕ್ರೀಡೆ, ಸಾಹಿತ್ಯ ಹೀಗೆ ಪ್ರತಿಯೊಂದು ಕ್ಷೇತ್ರಗಳಲ್ಲೂ ಬಂಟರ ಸಮುದಾಯದವರನ್ನು ಕಾಣಬಹುದು. ಸ್ವಾತಂತ್ರ್ಯ ಹೋರಾಟದಲ್ಲೂ ಸಮುದಾಯದ ಹಲವು ಮಂದಿ ಪಾಲ್ಗೊಂಡಿದ್ದರು” ಎಂದು ಸ್ಮರಿಸಿದರು.

“ಹೊರ ರಾಜ್ಯ, ವಿದೇಶಗಳಲ್ಲಿ ಇರುವ ಬಂಟ ಸಮುದಾಯದವರನ್ನ ಒಗ್ಗೂಡಿಸುವ ಕೆಲಸವನ್ನು ಉಡುಪಿ-ಮಂಗಳೂರು ಬಂಟ ಸಮಾಜದವರು ಈ ಸಮ್ಮೇಳನದ ಮೂಲಕ ಮಾಡಿದ್ದಾರೆ ಎಂದರು ಸಚಿವರಾದ ಲಕ್ಷ್ಮೀ ಹೆಬ್ಬಾಳ್ಕರ್ ಹೇಳಿದರು. ನನ್ನ ತವರು ಬೆಳಗಾವಿಯಲ್ಲಿ ಬಂಟ ಸಮುದಾಯದವರ ಜೊತೆ ನಾನು ಉತ್ತಮ ಬಾಂಧವ್ಯ ಹೊಂದಿದ್ದೇನೆ. ಹೋಟೆಲ್ ಉದ್ಯಮಕ್ಕೆ ಬಂಟರ ಕೊಡುಗೆ ಅನನ್ಯ. ಬಂಟರ ಸಾಧನೆ ನೋಡಿದರೆ ಈ ಸಮುದಾಯದ ಮೇಲೆ ದೇವರ ಆಶೀರ್ವಾದವಿದೆ ಅಂತಾನೆ ಅರ್ಥ” ಎಂದರು.

Advertisements

“ಬಂಟ ಸಮುದಾಯ ಹೃದಯ ಶ್ರೀಮಂತಿಕೆಯ ಸಮಾಜ, ತಾವು ಬೇಳಿತಾರೆ, ಇತರ ಸಮಾಜದವರನ್ನು ಒಟ್ಟಿಗೆ ಕರೆದೊಯ್ಯುತ್ತಾರೆ. ವಿಶ್ವ ಬಂಟರ ಸಮ್ಮೇಳನ ಯಶಸ್ವಿಯಾಗಲಿ” ಎಂದು ಲಕ್ಷ್ಮೀ ಹೆಬ್ಬಾಳ್ಕರ್ ಹಾರಿಸಿದರು. ವಿಶ್ವ ಬಂಟರ ಸಮ್ಮೇಳನಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಚಾಲನೆ ನೀಡಿದರು.

ಈ ವೇಳೆ ಉಡುಪಿಯ ಪುತ್ತಿಗೆ ಮಠದ ಶ್ರೀ ಶ್ರೀ ಶ್ರೀ ಸುಗುಣೇಂದ್ರ ತೀರ್ಥ ಶ್ರೀಪಾದರು, ಪಲಿಮಾರು ಮಠದ ವಿದ್ಯಾಧೀಶ ತೀರ್ಥ ಶ್ರೀಪಾದರು, ವಿಧಾನಸಭೆಯ ಸಭಾಪತಿಗಳಾದ ಯು.ಟಿ.ಖಾದರ್, ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಅಧ್ಯಕ್ಷರಾದ ಐಕಳ ಹರೀಶ್ ಶೆಟ್ಟಿ, ಶಾಸಕರಾದ ಗಣೇಶ್ ಹುಕ್ಕೇರಿ, ಯಶ್ಪಾಲ್ ಸುವರ್ಣ, ಅಶೋಕ್ ಕುಮಾರ್ ರೈ, ಮಂಜುನಾಥ್ ಭಂಡಾರಿ, ಮಾಜಿ ಸಚಿವ ರಮಾನಾಥ್ ರೈ, ವಿಶೇಷ ಅತಿಥಿಗಳಾಗಿ ಕನ್ಯಾನ ಸದಾಶಿವ ಶೆಟ್ಟಿ, ತೋನ್ಸೆ ಆನಂದ ಶೆಟ್ಟಿ, ಶಶಿರೇಖಾ ಆನಂದ ಶೆಟ್ಟಿ, ಎಂ.ಆರ್.ಜಿ ಗ್ರೂಪ್ ನ ಕೆ.ಪ್ರಕಾಶ್ ಶೆಟ್ಟಿ, ಮಾಜಿ ಸಭಾಪತಿ ಕೆ.ಪ್ರತಾಪಚಂದ್ರ ಶೆಟ್ಟಿ, ಕಾಂಗ್ರೆಸ್ ಮುಖಂಡ ಐವನ್ ಡಿಸೋಜಾ, ಅಭಯ ಚಂದ್ರ ಜೈನ್, ಜಿ.ಎ.ಭಾವ ಸೇರಿದಂತೆ ಹಲವು ಮುಖಂಡರು ಸೇರಿದಂತೆ ಬಂಟರ ಸಮುದಾಯದ ಹಲವು ಗಣ್ಯರು ಉಪಸ್ಥಿತರಿದ್ದರು.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಹಾವೇರಿ | ಗಣೇಶ ಚತುರ್ಥಿ ಪ್ರಯುಕ್ತ 265 ಹೆಚ್ಚುವರಿ ಸಾರಿಗೆ ಸೌಲಭ್ಯ

ಚತುರ್ಥಿಯ ಪ್ರಯುಕ್ತ ಸಾರ್ವಜನಿಕರು ತಮ್ಮ ಸ್ವಂತ ಊರುಗಳಿಗೆ ತೆರಳಲು ಅನುಕೂಲವಾಗುವಂತೆ ವಾಯವ್ಯ...

ಗದಗ | ಆಗಸ್ಟ್ 25ಕ್ಕೆ ಲೋಕಾಯುಕ್ತ ಜನ ಸಂಪರ್ಕ ಸಭೆ

ಸಾರ್ವಜನಿಕ ಕುಂದು-ಕೊರತೆಗಳ ಅಹವಾಲು ಸ್ವೀಕರಿಸಲು ಆಗಸ್ಟ್ 25 ಸೋಮವಾರದಂದು  ಗದಗ ಶಿರಹಟ್ಟಿ...

ಬೀದರ್‌ | ಅತಿವೃಷ್ಟಿ : ತ್ವರಿತ ಬೆಳೆ ಹಾನಿ ಪರಿಹಾರಕ್ಕೆ ಕಿಸಾನ್‌ ಸಭಾ ಒತ್ತಾಯ

ಮೇ ತಿಂಗಳಿಂದ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ಉದ್ದು, ಹೆಸರು, ತೊಗರಿ ಸೇರಿದಂತೆ ಹಲವು...

ಚಿಕ್ಕಬಳ್ಳಾಪುರ | ಬಾಲಕಾರ್ಮಿಕ ಪದ್ಧತಿ ನಿರ್ಮೂಲನೆಗೆ ಎಲ್ಲರೂ ಕೈಜೋಡಿಸಿ: ಹಿರಿಯ ನ್ಯಾ. ಶಿಲ್ಪಾ

ಜಾಗತೀಕರಣ ಯುಗದಲ್ಲಿ ನಮ್ಮ ಜಾಗೃತಿ ನಮಗೆ ಗುರುವಾಗಬೇಕು. ಪೋಷಕರು ಮಕ್ಕಳನ್ನು...

Download Eedina App Android / iOS

X