ಎಫ್‌ಡಿಎ ಪರೀಕ್ಷೆಯಲ್ಲಿ ಬ್ಲೂಟೂತ್ ಬಳಸಿ ಪರೀಕ್ಷೆ ಬರೆಯುತ್ತಿದ್ದ ಅಭ್ಯರ್ಥಿಯೊಬ್ಬರು ಪೊಲೀಸರು ಬಂಧಿಸಿರುವ ಘಟನೆ ಕಲಬುರಗಿ ಜಿಲ್ಲೆಯಲ್ಲಿ ನಡೆದಿದೆ.
ಅಕ್ಟೋಬರ್ 28 ಮತ್ತು 29ರಂದು ಕೆಇಎ, ಎಸ್‌ಡಿಎ ಮತ್ತು ಎಫ್‌ಡಿಎ ಪರೀಕ್ಷೆಗಳು ರಾಜ್ಯಾದ್ಯಂತ ನಡೆಯುತ್ತಿವೆ. ಆಹಾರ ಮತ್ತು ಕಾರ್ಮಿಕ ಇಲಾಖೆಯಲ್ಲಿ ಖಾಲಿ ಇರುವ ಎಫ್‌ಡಿಎ ಹುದ್ದೆಗಳಿಗೆ ಅಕ್ಟೋಬರ್ 28ರಂದು ಪರೀಕ್ಷೆ ನಡೆದಿದೆ. ಕಲಬುರಗಿಯ ಶರಣಬಸವೇಶ್ವರ ವಿಶ್ವವಿದ್ಯಾಲಯದ ಪರೀಕ್ಷಾ ಕೇಂದ್ರದಲ್ಲಿ ಅಭ್ಯರ್ಥಿಯೊಬ್ಬ ಬ್ಲೂಟೂತ್ ಬಳಸಿ, ಪರೀಕ್ಷೆ ಬರೆಯುವಾಗ ಸಿಕ್ಕಿಬಿದ್ದಿದ್ದಾನೆ. ಆರೋಪಿ ಅಭ್ಯರ್ಥಿಯನ್ನು ಪೊಲೀಸರು ಬಂಧಿಸಿದ್ದಾರೆ.
ಬಂಧತನನ್ನು ಅಫಜಲಪುರ ತಾಲೂಕಿನ ಸೊನ್ನ ಗ್ರಾಮದ ತ್ರೀಮೂರ್ತಿ ಎಂದು ಗುರುತಿಸಲಾಗಿದೆ. ಆತನ ವಿರುದ್ಧ ಆರ್‌ಜೆ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.