ಕೇರಳದ ಕಳಮಶ್ಶೇರಿಯಲ್ಲಿರುವ ಕನ್ವೆನ್ಸನ್ ಸೆಂಟರ್ನಲ್ಲಿ ಯಹೋವನ ಸಾಕ್ಷಿಗಳ ಪ್ರಾರ್ಥನಾ ಸಭೆಯಲ್ಲಿ ನಡೆದ ಸ್ಫೋಟ ಘಟನೆಗೆ ಸಂಬಂಧಿಸಿದಂತೆ ಹೇಳಿಕೆ ನೀಡಿರುವ ಕೇರಳದ ಡಿಜಿಪಿ ಡಾ.ಶೇಖ್ ದರ್ವೇಶ್ ಸಾಹೇಬ್, ‘ಸುಧಾರಿತ ಸ್ಫೋಟಕ ಸಾಧನ(ಐಇಡಿ) ಬಳಸಿ ಕೃತ್ಯ ನಡೆಸಿರುವುದು ಪ್ರಾಥಮಿಕ ತನಿಖೆಯಿಂದ ತಿಳಿದುಬಂದಿದೆ’ ಎಂದು ತಿಳಿಸಿದ್ದಾರೆ.
‘ಇಂದು ಬೆಳಗ್ಗೆ 9.40ರ ಸುಮಾರಿಗೆ ಕಳಮಶ್ಶೇರಿಯ ಝಮ್ರಾ ಇಂಟರ್ನ್ಯಾಷನಲ್ ಕನ್ವೆನ್ಸನ್ ಸೆಂಟರ್ನಲ್ಲಿ ಈ ಘಟನೆ ನಡೆದಿದೆ. ಓರ್ವ ಮಹಿಳೆ ಸಾವನ್ನಪ್ಪಿದ್ದಾರೆ. 36 ಮಂದಿ ಗಾಯಗೊಂಡಿರುವ ಬಗ್ಗೆ ನಮಗೆ ಮಾಹಿತಿ ಬಂದಿದೆ. ಕನ್ವೆನ್ಸನ್ ಸೆಂಟರ್ನಲ್ಲಿ ಯಹೋವನ ಸಾಕ್ಷಿಗಳ ಪ್ರಾರ್ಥನಾ ಸಭೆ ನಡೆಯುತ್ತಿದ್ದಾಗ ಈ ಸ್ಫೋಟ ಸಂಭವಿಸಿದೆ. ಪ್ರಾಥಮಿಕ ತನಿಖೆಯಲ್ಲಿ ಸುಧಾರಿತ ಸ್ಫೋಟಕ ಸಾಧನ(ಐಇಡಿ) ಬಳಸಿ ಕೃತ್ಯ ನಡೆಸಿರುವುದು ಗೊತ್ತಾಗಿದೆ. ಕೆಲವೊಂದು ಅವಶೇಷಗಳು ದೊರಕಿದ್ದು, ಪರಿಶೀಲನೆ ನಡೆಸುತ್ತಿದ್ದೇವೆ. ಇದರ ಹಿಂದಿರುವವರನ್ನು ಪತ್ತೆ ಹಚ್ಚಿ, ಕಠಿಣ ಕ್ರಮ ಕೈಗೊಳ್ಳಲಾಗುವುದು. ನಾನು ಕೂಡ ಸ್ಥಳಕ್ಕೆ ಇಂದು ಭೇಟಿ ನೀಡಲಿದ್ದೇನೆ’ ಎಂದು ಡಿಜಿಪಿ ಡಾ.ಶೇಖ್ ದರ್ವೇಶ್ ಸಾಹೇಬ್ ತಿಳಿಸಿದ್ದಾರೆ.
‘ಈ ಘಟನೆ ಗಂಭೀರವಾದುದು. ಹಾಗಾಗಿ, ಎಲ್ಲ ಆಯಮಾಗಳಲ್ಲೂ ತನಿಖೆ ನಡೆಸಲಿದ್ದೇವೆ. ತನಿಖೆಗೆ ಹೊಸ ತಂಡವೊಂದನ್ನು ರಚಿಸಲಾಗಿದೆ. ಇದೇ ವೇಳೆ, ಘಟನೆಗೆ ಸಂಬಂಧಿಸಿದಂತೆ ಸಾಮಾಜಿಕ ಜಾಲತಾಣಗಳಲ್ಲಿ ಪ್ರಚೋದನಕಾರಿ, ದ್ವೇಷದ ಸಂದೇಶಗಳನ್ನು ಪೋಸ್ಟ್ ಮಾಡಿದ್ದು ಕಂಡು ಬಂದರೆ ಸೂಕ್ತ ಕ್ರಮ ಕೈಗೊಳ್ಳಲಾಗುವುದು. ಯಾರು ಕೂಡ ಯಾವುದೇ ವದಂತಿಗಳನ್ನು ನಂಬಬೇಡಿ. ಜನರು ಶಾಂತಿ-ಸುವ್ಯವಸ್ಥೆ ಕಾಪಾಡಲು ಸಹಕಾರ ನೀಡಬೇಕು. ಈ ಆದೇಶ ಉಲ್ಲಂಘಿಸುವವರ ವಿರುದ್ಧ ಕಠಿಣ ಕ್ರಮ ಜರುಗಿಸಲಾಗುವುದು ಎಂದು ಪೊಲೀಸ್ ಮುಖ್ಯಸ್ಥ ಎಚ್ಚರಿಕೆ ನೀಡಿದ್ದಾರೆ.
#WATCH | Kerala: It was an accident. We all rushed out. That’s all that we know. And we all rushed out. Got everybody to safety. That’s all we can say is this now. We’re going to meet the officers so we’ll know what the situation is..,” says Aji, committee member https://t.co/jIJZEJgQ38 pic.twitter.com/069iJF1tT5
— ANI (@ANI) October 29, 2023
ಕೇರಳದ ಕಳಮಶ್ಶೇರಿಯ ಝಮ್ರಾ ಇಂಟರ್ನ್ಯಾಷನಲ್ ಕನ್ವೆನ್ಸನ್ ಸೆಂಟರ್ನಲ್ಲಿ ಮೂರು ದಿನಗಳ ಯಹೋವನ ಸಾಕ್ಷಿಗಳ ಪ್ರಾರ್ಥನಾ ಸಭೆಯನ್ನು ಆಯೋಜಿಸಲಾಗಿತ್ತು. ಇಂದು ಕೊನೆಯ ದಿನವಾಗಿತ್ತು. ಇಂದು(ಭಾನುವಾರ) ಪ್ರಾರ್ಥನಾ ಸಭೆ ಆರಂಭಗೊಳ್ಳುತ್ತಿದ್ದಂತೆಯೇ, ಈ ಸ್ಫೋಟ ಸಂಭವಿಸಿತ್ತು.
ಇದನ್ನು ಓದಿ : ಕೇರಳ | ಪ್ರಾರ್ಥನಾ ಸಭೆಯಲ್ಲಿ ಭೀಕರ ಸ್ಫೋಟ: ಓರ್ವ ಮಹಿಳೆ ಮೃತ್ಯು; ಹಲವರಿಗೆ ಗಾಯ
ಸ್ಫೋಟದಿಂದಾಗಿ ಓರ್ವ ಮಹಿಳೆ ಸ್ಥಳದಲ್ಲೇ ಸಾವನ್ನಪ್ಪಿದ್ದು, 36 ಮಂದಿ ಗಾಯಗೊಂಡಿದ್ದಾರೆ. ಮೃತಪಟ್ಟ ಮಹಿಳೆಯ ವಿವರ ಇನ್ನೂ ಲಭ್ಯವಾಗಿಲ್ಲ. ಗಾಯಾಳುಗಳನ್ನು ಸರ್ಕಾರಿ ಸೇರಿದಂತೆ ವಿವಿಧ ಖಾಸಗಿ ಆಸ್ಪತ್ರೆಗಳಿಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಸಮಾವೇಶದಲ್ಲಿ 2200ಕ್ಕೂ ಹೆಚ್ಚು ಮಂದಿ ಭಾಗವಹಿಸಿದ್ದರು ಎಂದು ವರದಿಯಾಗಿದೆ.
#WATCH | On the blast at Zamra International Convention & Exhibition Centre, Kalamassery, Kerala DGP Dr Shaik Darvesh Saheb says “We will be constituting a special team for this today itself after I reach the spot.”
On being asked if there was any information regarding the… pic.twitter.com/sEXJkQp9cV
— ANI (@ANI) October 29, 2023
ಬಾಂಬ್ ನಿಷ್ಕ್ರಿಯ ದಳ, ವಿಶೇಷ ತನಿಖಾ ತಂಡ ಹಾಗೂ ಎನ್ಐಎ ಅಧಿಕಾರಿಗಳ ತಂಡ ಕೂಡ ಘಟನಾ ಸ್ಥಳಕ್ಕೆ ಭೇಟಿ ನೀಡಿದೆ ಎಂದು ವರದಿಯಾಗಿದೆ.