ಯಾದಗಿರಿ | ಒಳಮೀಸಲಾತಿ ವರ್ಗೀಕರಣದ ವಿರುದ್ಧ ಪ್ರತಿಭಟನೆ; ನಿಷೇಧಾಜ್ಞೆ ಜಾರಿ

Date:

Advertisements

ಒಳಮೀಸಲಾತಿ ವರ್ಗೀಕರಣದ ವಿರುದ್ಧ ಮೀಸಲು ಸಂರಕ್ಷಣಾ ಒಕ್ಕೂಟವು ಶಹಾಪುರದಲ್ಲಿ ಗುರುವಾರ ಪ್ರತಿಭಟನೆಗೆ ಕರೆ ನೀಡಿದ್ದರಿಂದ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಜಾರಿಗೊಳಿಸಿ ಯಾದಗಿರಿ ಜಿಲ್ಲಾಧಿಕಾರಿ ಸ್ನೇಹಲ್ ಆರ್ ಆದೇಶ ಹೊರಡಿಸಿದ್ದಾರೆ.‌

ಸಾರ್ವಜನಿಕ ಹಿತಾಸಕ್ತಿ ಕಾಪಾಡುವ ಹಿತದೃಷ್ಟಿಯಿಂದ, ಕಾನೂನು ಸುವ್ಯವಸ್ಥೆ ಹಾಗೂ ಶಾಂತಿ ಪಾಲನೆಗಾಗಿ ಗುರುವಾರ ಬೆಳಿಗ್ಗೆ 6 ಗಂಟೆಯಿಂದ ರಾತ್ರಿ 10 ಗಂಟೆಯವರೆಗೆ ಭಾರತೀಯ ದಂಡ ಸಂಹಿತೆ-1973ರ ಕಲಂ 14ರನ್ವಯ ನಿಷೇಧಾಜ್ಞೆ ಜಾರಿ ಮಾಡಲಾಗಿದೆ.

ಮೀಸಲು ಸಂರಕ್ಷಣಾ ಒಕ್ಕೂಟವು ಶಹಾಪುರದಲ್ಲಿ ಗುರುವಾರ ಬೆಳಿಗ್ಗೆ 10 ಗಂಟೆಯಿಂದ ಮಧ್ಯಾಹ್ನ 1 ಗಂಟೆಯವರೆಗೆ ಬಸವೇಶ್ವರ ವೃತ್ತದಿಂದ ಹೊಸ ತಹಶೀಲ್ದಾರ್ ಕಾರ್ಯಾಲಯದವರೆಗೆ ಕಾಲ್ನಡಿಗೆಯ ಬೃಹತ್‌ ಪ್ರತಿಭಟನಾ ರ್‍ಯಾಲಿ ಹಮ್ಮಿಕೊಂಡಿರುವುದಾಗಿ ತಿಳಿಸಿತ್ತು.

Advertisements

ಈ ಬೆನ್ನಲ್ಲೇ, “ಪ್ರಸ್ತುತ ಚುನಾವಣಾ ನೀತಿ ಸಂಹಿತೆ ಜಾರಿಯಲ್ಲಿರುವುದರಿಂದ ಮತ್ತು ಎಸ್‌ಎಸ್‌ಎಲ್‌ಸಿ ವಾರ್ಷಿಕ ಪರೀಕ್ಷೆಗಳು ನಡೆಯುತ್ತಿರುವುದರಿಂದ ಶಹಾಪುರ ನಗರ ಮತ್ತು ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಸಾರ್ವಜನಿಕ ಶಾಂತಿ ಹಾಗೂ ಕಾನೂನು ಸುವ್ಯವಸ್ಥೆ ಕಾಪಾಡಬೇಕು. ಈ ನಿಟ್ಟಿನಲ್ಲಿ ಶಹಾಪುರ ನಗರದಾದ್ಯಂತ ಹಾಗೂ ಶಹಾಪುರ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಜಾರಿಗೊಳಿಸಬೇಕು” ಎಂದು ಪೊಲೀಸರು ಜಿಲ್ಲಾಧಿಕಾರಿಗೆ ಪತ್ರ ಬರೆದಿದ್ದರು. ‌

ಪತ್ರವನ್ನು ಪರಿಗಣಿಸಿರುವ ಜಿಲ್ಲಾಧಿಕಾರಿ, “ಶಹಾಪುರ ನಗರದಲ್ಲಿ ಮತ್ತು ಶಹಾಪುರ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ನಾಲ್ಕು ಅಥವಾ ನಾಲ್ಕಕ್ಕಿಂತ ಹೆಚ್ಚಿನ ಯಾವುದೇ ವ್ಯಕ್ತಿ, ಗುಂಪು ಕೂಡುವುದು, ಮೆರವಣಿಗೆ ಸಭೆ ಸಮಾರಂಭ ಬಹಿರಂಗ ಘೋಷಣೆ ಕೂಗುವುದನ್ನು ನಿಷೇಧಿಸಲಾಗಿದೆ” ಎಂದು ಹೇಳಿದ್ದು, ನಿಷೇಧಾಜ್ಞೆ ಹೊರಡಿಸಿದ್ದಾರೆ.

“ಯಾವುದೇ ಮಾರಕಾಸ್ತ್ರ (ಬಂದೂಕು, ಭರ್ಚಿ, ಕತ್ತಿ, ಚಾಕು, ಕುಡುಗೋಲು, ಕೊಡಲಿ, ಬಡಿಗೆ, ಇತ್ಯಾದಿ) ಮತ್ತು ಸ್ಫೋಟಕ ವಸ್ತುಗಳನ್ನು ಸಂಗಡ ಕೊಂಡೊಯ್ಯುವುದನ್ನು ನಿಷೇಧಿಸಿದೆ. ಸಾರ್ವಜನಿಕವಾಗಿ ಭಾಷಣ, ಕೂಗಾಡುವುದು, ಹಾಡುವುದು, ವಾದ್ಯ ಭಾರಿಸುವುದು, ಅಣಕವಾಡುವುದು ಮುಂತಾದ ಕಾರ್ಯಗಳನ್ನು ನಿಷೇಧಿಸಲಾಗಿದೆ” ಎಂದು ಹೇಳಿದ್ದಾರೆ.

ಈ ಸುದ್ದಿ ಓದಿದ್ದೀರಾ? ರಾಮನಗರ | ಇದ್ರೀಸ್‌ ಪಾಷಾ ಸಾವು ಪ್ರಕರಣ: ‘ಬೆಕ್ಕು ಮತ್ತು ಇಲಿ ಆಟ ಮುಗಿದಿದೆ’ ಎಂದ ಅಲೋಕ್‌ ಕುಮಾರ್

“ಚುನಾವಣಾ ಮಾದರಿ ನೀತಿ ಸಂಹಿತೆ ಉಲ್ಲಂಘನೆ ಆಗದಂತೆ ಸಂಬಂಧಿಸಿದ ಅಧಿಕಾರಿಗಳು ಸೂಕ್ತ ಕ್ರಮ ವಹಿಸಬೇಕು. ಈ ಆದೇಶವನ್ನು ಉಲ್ಲಂಘಿಸಿದವರ ವಿರುದ್ಧ ದಂಡ ಸಂಹಿತೆ 1973ರ ಕಲಂ 14ರನ್ವಯ ನಿಷೇಧಾಜ್ಞೆ ಕಾಯಿದೆ ಪ್ರಕಾರ ಸೂಕ್ತ ಕ್ರಮ ಜರುಗಿಸಲಾಗುವುದು” ಎಂದಿದ್ದಾರೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಿವಮೊಗ್ಗ | ಮತ್ತೆ ಸದ್ದು ಮಾಡುತ್ತಿದೆ ವಾಹನಗಳ ಕರ್ಕಶ ಸೈಲೆಂಸರ್ ; ಕ್ರಮ ಕೈಗೊಳ್ಳುವರೆ ಟ್ರಾಫಿಕ್ ಪೊಲೀಸ್?

ಶಿವಮೊಗ್ಗ ನಗರದಲ್ಲಿ ಕೆಲವು ತಿಂಗಳು ಹಿಂದೆ ಸೈಲೆಂಟ್ ಆಗಿದ್ದ ಸೈಲೆಂಸರ್ ಕರ್ಕಶ...

ಕೋಲಾರ | ಎಫ್ಆರ್‌ಎಸ್ ನಿಲ್ಲಿಸುವಂತೆ ಅಂಗನವಾಡಿ ಕಾರ್ಯಕರ್ತೆಯರ ಪ್ರತಿಭಟನೆ

ಅಂಗನವಾಡಿ ಕಾರ್ಯಕರ್ತೆಯರ ಮುಖಚರ್ಯೆ ಗುರುತಿಸುವ ಕ್ರಮಕ್ಕೆ (ಎಫ್ಆರ್‌ಎಸ್) ತಡೆ ಹಾಗೂ ಐಸಿಡಿಎಸ್...

ಬೀದರ್‌ | ಬಸವಲಿಂಗ ಪಟ್ಟದ್ದೇವರ ಅಮೃತ ಮಹೋತ್ಸವ : ಎರಡು ದಿನ ರಾಷ್ಟ್ರೀಯ ವಿಚಾರ ಸಂಕಿರಣ

ಭಾಲ್ಕಿ ಹಿರೇಮಠ ಸಂಸ್ಥಾನದ ನಾಡೋಜ ಡಾ.ಬಸವಲಿಂಗ ಪಟ್ಟದ್ದೇವರ ಅಮೃತ ಮಹೋತ್ಸವ ...

ಶಿರಸಿ | NWKRTC ವತಿಯಿಂದ ಅಪ್ರೆಂಟಿಸ್ ಹುದ್ದೆಗಳಿಗೆ WALK-IN-INTERVIEW

ಕರ್ನಾಟಕ ರಾಜ್ಯ ವಾಯುವ್ಯ ಸಾರಿಗೆ ಸಂಸ್ಥೆ, ಶಿರಸಿ ವಿಭಾಗದಲ್ಲಿ ವಿವಿಧ ಅಪ್ರೆಂಟಿಸ್...

Download Eedina App Android / iOS

X