ಬೆಂಗಳೂರು | ಲುಲು ಮಾಲ್‌ನಲ್ಲಿ ಯುವತಿಗೆ ವಯಸ್ಸಾದ ವ್ಯಕ್ತಿಯಿಂದ ಲೈಂಗಿಕ ಕಿರುಕುಳ; ವಿಡಿಯೋ ವೈರಲ್

Date:

Advertisements

ರಾಜ್ಯ ರಾಜಧಾನಿ ಬೆಂಗಳೂರಿನ ಪ್ರತಿಷ್ಠಿತ ಲುಲು ಮಾಲ್‌ನಲ್ಲಿ ವಯಸ್ಸಾದ ವ್ಯಕ್ತಿಯೋರ್ವ ಜನರ ನಡುವೆಯೇ ಮಹಿಳೆ ಮತ್ತು ಯುವತಿಯರಿಗೆ ಲೈಂಗಿಕ ಕಿರುಕುಳ ನೀಡಿದ ಘಟನೆ ನಡೆದಿದೆ. ಸದ್ಯ ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ನೆಟ್ಟಿಗರ ಆಕ್ರೋಶಕ್ಕೆ ಕಾರಣವಾಗಿದೆ.

ಅಕ್ಟೋಬರ್ 29ರಂದು ಸಾಯಂಕಾಲ ಸುಮಾರು 6:30ಕ್ಕೆ ಬೇಕಂತಲೇ ವಯಸ್ಸಾದ ವ್ಯಕ್ತಿಯೊಬ್ಬ ಮಹಿಳೆಯರು ಮತ್ತು ಯುವತಿಯರು ಇರುವ ಕಡೆ ತೆರಳಿ ಅವರ ಹಿಂಭಾಗವನ್ನು ಸ್ಪರ್ಶಿಸಿ ಬರುತ್ತಿದ್ದನು. ಮಾಲ್‌ನಲ್ಲಿ ಜನರು ಹೆಚ್ಚಾಗಿ ಇದ್ದ ಕಾರಣ ಈ ಘಟನೆಯನ್ನು ಯಾರೂ ಹೆಚ್ಚಾಗಿ ಗಮನಿಸಿಲ್ಲ. ಇದನ್ನು ಕಂಡ ಅಲ್ಲೇ ಇದ್ದ ವ್ಯಕ್ತಿಯೊಬ್ಬರು, ಈ ವಯಸ್ಸಾದ ವ್ಯಕ್ತಿಯನ್ನು ಹಿಂಬಾಲಿಸಿದ್ದಾರೆ.

ವಯಸ್ಸಾದ ವ್ಯಕ್ತಿ ಯುವತಿಯೊಬ್ಬರ ಹಿಂದೆ ತೆರಳಿ ಆಕೆಯ ಹಿಂಬದಿಯನ್ನು ಸ್ಪರ್ಶಿಸಿದ್ದಾನೆ. ಇದನ್ನು ಯಶವಂತ ತೊಗಟವೀರ ಎಂಬುವವರು ವಿಡಿಯೋ ಮಾಡಿ yesh_fitspiration ಎನ್ನುವ ಇನ್‌ಸ್ಟಾಗ್ರಾಮ್‌ ಖಾತೆಯಲ್ಲಿ ಅಪ್‌ಲೋಡ್ ಮಾಡಿದ್ದಾರೆ.

Advertisements

ವಿಡಿಯೋ ಅಪ್‌ಲೋಡ್ ಮಾಡಿದ್ದ ಯಶವಂತ ತೊಗಟವೀರ ಅವರ ಸಾಮಾಜಿಕ ಜಾಲತಾಣವಾದ ಇನ್‌ಸ್ಟಾಗ್ರಾಂನಲ್ಲಿ, “ಅ.29 ರಂದು ಸಂಜೆ 6:30ರ ಸುಮಾರಿಗೆ ಬೆಂಗಳೂರಿನ ಲುಲು ಮಾಲ್ ಫಂಟುರಾದಲ್ಲಿ ಈ ಘಟನೆ ನಡೆದಿದೆ. ವೀಡಿಯೋದಲ್ಲಿರುವ ಈ ವ್ಯಕ್ತಿ ಸುತ್ತಮುತ್ತಲಿನ ಮಹಿಳೆಯರು ಮತ್ತು ಹುಡುಗಿಯರಿಗೆ ಲೈಂಗಿಕ ಕಿರುಕುಳ ನೀಡುವ ಕೆಲಸ ಮಾಡುತ್ತಿದ್ದನು. ಮೊದಲಿಗೆ ಅವನು ತುಂಬಾ ಜನನಿಬಿಡ ಪ್ರದೇಶದಲ್ಲಿ ಇದ್ದುದನ್ನು ನಾನು ನೋಡಿದಾಗ, ನನಗೆ ಅವನ ಮೇಲೆ ಅನುಮಾನವಾಯಿತು. ಹಾಗಾಗಿ, ವೀಡಿಯೊ ರೆಕಾರ್ಡ್ ಮಾಡುತ್ತ ಹಿಂಬಾಲಿಸಿದೆ” ಎಂದು ಬರೆದುಕೊಂಡಿದ್ದಾರೆ.

ಈ ಸುದ್ದಿ ಓದಿದ್ದೀರಾ? ಭ್ರಷ್ಟ ಅಧಿಕಾರಿಗಳ ಮನೆ-ಕಚೇರಿಗಳ ಮೇಲೆ ಲೋಕಾಯುಕ್ತ ದಾಳಿ

“ವಿಡಿಯೋ ತೆಗೆದುಕೊಂಡ ನಂತರ ಮಾಲ್‌ನ ಸೆಕ್ಯುರಿಟಿಗೆ ಹೋಗಿ ಈ ಬಗ್ಗೆ ದೂರು ನೀಡಿದೆ. ಬಳಿಕ ಆ ವಯಸ್ಸಾದ ವ್ಯಕ್ತಿಯನ್ನು ಹುಡುಕಿದೆವು. ಆದರೆ, ಅಷ್ಟರಲ್ಲಾಗಲೇ ಆ ವ್ಯಕ್ತಿ ತಪ್ಪಿಸಿಕೊಂಡಿದ್ದನು. ಹೀಗಾಗಿ, ಮಾಲ್ ಮ್ಯಾನೇಜ್‌ಮೆಂಟ್ ಮತ್ತು ಸೆಕ್ಯುರಿಟಿಗೆ ಮಾಹಿತಿ ನೀಡಿದ್ದು, ಆ ವ್ಯಕ್ತಿಯನ್ನು ಪತ್ತೆ ಹಚ್ಚಿ ಕ್ರಮ ಕೈಗೊಳ್ಳುವುದಾಗಿ ಹೇಳಿದ್ದಾರೆ. ಇಂತಹ ವ್ಯಕ್ತಿಗಳು ಮಹಿಳೆಯರೊಂದಿಗೆ ಈ ರೀತಿ ಅನುಚಿತವಾಗಿ ವರ್ತಿಸಲು ನಾಚಿಕೆ ಆಗಬೇಕು” ಎಂದು ಹೇಳಿದ್ದಾರೆ.

ಇನ್ನು ಈ ವಿಡಿಯೋ ವೈರಲ್ ಆಗಿರುವ ಬಗ್ಗೆ ಮಾಗಡಿ ರೋಡ್ ಪೊಲೀಸರು ಪರಿಶೀಲನೆ ನಡೆಸಿದ್ದಾರೆ. ಕೃತ್ಯದ ಬಗ್ಗೆ ಇದುವರೆಗೂ ಯಾರು ಲಿಖಿತ ದೂರು ನೀಡಿಲ್ಲ. ಹಾಗಾಗಿ, ವಿಡಿಯೋ ಆಧರಿಸಿ ಪೊಲೀಸರು ತನಿಖೆ ನಡೆಸಲಿದ್ದಾರೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೂಕರ್ ಪ್ರಶಸ್ತಿ ಪುರಸ್ಕೃತೆ ಬಾನು‌ ಮುಷ್ತಾಕ್‌ರಿಂದ ಮೈಸೂರು ದಸರಾ ಉದ್ಘಾಟನೆ: ಸಿಎಂ ಸಿದ್ದರಾಮಯ್ಯ

ಈ ಬಾರಿಯ 'ಮೈಸೂರು ದಸರಾ' ಉದ್ಘಾಟನೆಯನ್ನು ಬೂಕರ್ ಪ್ರಶಸ್ತಿ ವಿಜೇತೆ ಲೇಖಕಿ...

ಮೈಸೂರು | ಖಾಸಗಿ ಶಾಲೆಗಳಿಗೆ ಸೆಡ್ಡು ಹೊಡೆದ ಅತ್ತಿಗೋಡು ಸರ್ಕಾರಿ ಪ್ರೌಢಶಾಲೆ

ಕರ್ನಾಟಕದಲ್ಲಿ ಸರ್ಕಾರಿ ಶಾಲೆಗಳ ಸಂಖ್ಯೆ ಕಡಿಮೆಯಾಗುತ್ತಿದೆ. ಸಾಕಷ್ಟು ಸವಾಲುಗಳನ್ನು ಸಹ ಎದುರಿಸುತ್ತಿದೆ....

ಗದಗ | ಹಾಸ್ಟೆಲ್‌ ವಿದ್ಯಾರ್ಥಿನಿ ಕೊಲೆ ಪ್ರಕರಣ; ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮಕ್ಕೆ ಎಸ್‌ಎಫ್‌ಐ ಆಗ್ರಹ

ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲೂಕಿನ ಕೋವೆರ ಹಟ್ಟಿಯ ವರ್ಷಿತಾ ಎಂಬ ಪದವಿ...

ಬೆಳ್ತಂಗಡಿ | ಸೌಜನ್ಯ ಹೋರಾಟಗಾರರ ಮೇಲೆ ನಿರಂತರ ಎಫ್‌ಐಆರ್: ಗಿರೀಶ್ ಮಟ್ಟಣ್ಣನವರ್ ಆಕ್ರೋಶ

ಗುರುವಾರ ಸೌಜನ್ಯಪರ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿ ಬಂಧನದ ವೇಳೆ ಪೊಲೀಸರ...

Download Eedina App Android / iOS

X