ನಿನ್ನೆ(ಅಕ್ಟೋಬರ್ 29) ಆಂಧ್ರಪ್ರದೇಶದ ವಿಜಯನಗರಂ ಜಿಲ್ಲೆಯ ಹೌರಾ – ಚೆನ್ನೈ ಮಾರ್ಗದಲ್ಲಿ ಸಂಭವಿಸಿದ ರೈಲು ಅಪಘಾತದಲ್ಲಿ ಮೃತಪಟ್ಟವರ ಸಂಖ್ಯೆ 14ಕ್ಕೆ ಏರಿದ್ದು, 50ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ.
ಮೃತರಲ್ಲಿ ಏಳು ಮಂದಿಯನ್ನು ಈಗಾಗಲೇ ಗುರುತಿಸಲಾಗಿದ್ದು, ಉಳಿದವರನ್ನು ಗುರುತಿಸುವ ಪ್ರಕ್ರಿಯೆ ನಡೆಯುತ್ತಿದೆ. ಅಪಘಾತದಲ್ಲಿ ಒಟ್ಟು 54 ಮಂದಿ ಗಾಯಗೊಂಡಿದ್ದು, ಇವರಲ್ಲಿ 39 ಮಂದಿಯನ್ನು ವಿಜಯನಗರಂನ ಆಸ್ಪತ್ರೆಗೆ ಹಾಗೂ ಉಳಿದವರನ್ನು ಇತರೆ ಆಸ್ಪತ್ರೆಗಳಿಗೆ ಚಿಕಿತ್ಸೆಗಾಗಿ ದಾಖಲಿಸಲಾಗಿದೆ.
ಹಳಿತಪ್ಪಿದ ಮತ್ತು ತೊಂದರೆಗೀಡಾದ ಕೋಚ್‌ಗಳನ್ನು ಹೊರತುಪಡಿಸಿ, ಉಳಿದ ಎಲ್ಲ ಕೋಚ್‌ಗಳನ್ನು ಸ್ಥಳದಿಂದ ತೆರವುಗೊಳಿಸಲಾಗಿದೆ.
“ರಕ್ಷಣಾ ಕಾರ್ಯಾಚರಣೆಗಳು ನಡೆಯುತ್ತಿವೆ. ಎಲ್ಲ ಪ್ರಯಾಣಿಕರು ಸ್ಥಳಾಂತರಗೊಂಡಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಅವರು ಪರಿಸ್ಥಿತಿಯನ್ನು ಪರಿಶೀಲಿಸಿದ್ದಾರೆ. ಆಂಧ್ರಪ್ರದೇಶದ ಮುಖ್ಯಮಂತ್ರಿ ವೈ.ಎಸ್ ಜಗನ್ ಮೋಹನ್ ರೆಡ್ಡಿ ಅವರೊಂದಿಗೆ ಮಾತನಾಡಿದ್ದಾರೆ. ರಾಜ್ಯ ಸರ್ಕಾರ ಮತ್ತು ರೈಲ್ವೆ ತಂಡಗಳು ಸಮನ್ವಯದಿಂದ ಕೆಲಸ ಮಾಡುತ್ತಿವೆ” ಎಂದು ಕೇಂದ್ರ ರೈಲ್ವೇ ಸಚಿವ ಅಶ್ವಿನಿ ವೈಷ್ಣವ್ ತಿಳಿಸಿದ್ದಾರೆ.
Andhra train collision: Death toll rises to 14, track restoration in progress
Read @ANI Story | https://t.co/4ixqePRfQy#AndhraPradesh #trainaccident #TrackRestoration pic.twitter.com/KomZ4159tW
— ANI Digital (@ani_digital) October 30, 2023
ಆಂಧ್ರಪ್ರದೇಶ ಮುಖ್ಯಮಂತ್ರಿ ಜಗನ್ ಮೋಹನ್ ರೆಡ್ಡಿ ಮೃತರ ಕುಟುಂಬಕ್ಕೆ ತಲಾ 10 ಲಕ್ಷ ರೂ. ಹಾಗೂ ಗಾಯಗೊಂಡವರಿಗೆ 2 ಲಕ್ಷ ರೂ. ಪರಿಹಾರ ನೀಡುವಂತೆ ಅಧಿಕಾರಿಗಳಿಗೆ ಸೂಚಿಸಿದ್ದಾರೆ.
ಮೃತರ ಕುಟುಂಬಗಳಿಗೆ 10 ಲಕ್ಷ ರೂ. ಹಾಗೂ ಗಾಯಾಳುಗಳಿಗೆ 50 ಸಾವಿರ ರೂ. ಪರಿಹಾರ ಘೋಷಿಸಲಾಗಿದೆ ಎಂದು ಕೇಂದ್ರ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಹೇಳಿದ್ದಾರೆ.
ಈ ಸುದ್ದಿ ಓದಿದ್ದೀರಾ? ನಾರಾಯಣ ಮೂರ್ತಿಯ ವಾರಕ್ಕೆ 70 ಗಂಟೆ ದುಡಿಮೆ ಹೇಳಿಕೆ: ನೆಟ್ಟಿಗರಿಂದ ಆಕ್ರೋಶ
ಪ್ರಧಾನಿ ನರೇಂದ್ರ ಮೋದಿ ರಾಷ್ಟ್ರೀಯ ಪರಿಹಾರ ನಿಧಿಯಿಂದ ಮೃತರ ಕುಟುಂಬಕ್ಕೆ 2 ಲಕ್ಷ ರೂ. ಹಾಗೂ ಗಾಯಾಳುಗಳಿಗೆ 50 ಸಾವಿರ ರೂ. ಧನಸಹಾಯ ಘೋಷಿಸಿದ್ದಾರೆ ಎಂದು ಪಿಎಂಒ ಕಚೇರಿ ತಿಳಿಸಿದೆ.
ಪ್ರಾಥಮಿಕ ಮಾಹಿತಿಗಳ ಪ್ರಕಾರ ರೈಲು ದುರಂತಕ್ಕೆ ಮಾನವ ವೈಫಲ್ಯವೇ ಪ್ರಮುಖ ಕಾರಣ ಎಂದು ಶಂಕಿಸಲಾಗಿದೆ.
ರೈಲು ದುರಂತದ ಹಿನ್ನೆಲೆಯಲ್ಲಿ ದೇಶಾದ್ಯಂತ ಹಲವಾರು ರೈಲುಗಳ ಮಾರ್ಗಗಳನ್ನು ರದ್ದುಗೊಳಿಸಲಾಗಿದೆ ಅಥವಾ ಅಲ್ಪಾವಧಿಗೆ ಸ್ಥಗಿತಗೊಳಿಸಲಾಗಿದೆ ಎಂದು ರೈಲ್ವೆ ಸಚಿವಾಲಯವು ಟ್ವಿಟರ್‌ನಲ್ಲಿ ತಿಳಿಸಿದೆ.
ಜೂನ್ 2 ರಂದು ಒಡಿಶಾದ ಬಹನಾಗಾ ಬಜಾರ್ ನಿಲ್ದಾಣದ ಬಾಲಸೋರ್‌ನಲ್ಲಿ ನಡೆದ ದುರಂತದಲ್ಲಿ 288 ಮಂದಿ ಮೃತಪಟ್ಟು, 1,100 ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದರು.