ಧರ್ಮಸ್ಥಳಕ್ಕೆ ತೆರಳುತ್ತಿದ್ದ ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ಕೆರೆಗೆ ಉರುಳಿಬಿದ್ದು, ಕಾರಿನಲ್ಲಿದ್ದ ಒಂದೇ ಕುಟುಂಬದ ಮೂವರು ಸಾವನ್ನಪ್ಪಿರುವ ಘಟನೆ ತುಮಕೂರು ಜಿಲ್ಲೆಯ ಸಿರಾ ತಾಲೂಇನಲ್ಲಿ ನಡೆದಿದೆ.
ತಾಲೂಕಿನ ರಾಮಲಿಂಗಾಪುರ ಗ್ರಾಮದಬಳಿ ಘಟನೆ ನಡೆದಿದೆ. ವೀರಾಪುರ ಗ್ರಾಮದ ದೊಡ್ಡಣ್ಣ (75), ಸಣ್ಣಮ್ಮ (70) ಮತ್ತು ಯಮುನಾ (30) ಮೃತ ದುರ್ದೈವಿಗಳು. ಕಾರಿನಲ್ಲಿದ್ದ ಯುಮುನಾ ಅವರ ಪತಿ ಪ್ರವೀಣ್ ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ಈ ನಾಲ್ವರೂ ಕಾರಿನಲ್ಲಿ ಧರ್ಮಸ್ಥಳಕ್ಕೆ ತೆರಳುತ್ತಿದ್ದರು. ಈ ವೇಳೆ, ರಾಮಲಿಂಗಾಪುರದ ಬಳಿ ಕಾರು ನಿಯಂತ್ರಣ ತಪ್ಪಿ ಕೆರೆಗೆ ಉರುಳಿಬಿದ್ದಿದೆ.
ಸ್ಥಳಕ್ಕೆ ಸಿರಾ ನಗರ ಪೋಲಿಸರು ಭೇಟಿ ನೀಡಿ ಮೃತದೇಹಗಳನ್ನು ಹೊರತೆಗೆದಿದ್ದಾರೆ. ಪ್ರಕರಣ ದಾಖಲಿಸಿಕೊಂಡಿದ್ದಾರೆ.