ತಮಿಳುನಾಡಿಗೆ ನವೆಂಬರ್ ಒಂದರಿಂದ 15ರವರೆಗೆ ಪ್ರತಿದಿನ 2,600 ಸಾವಿರ ಕ್ಯುಸೆಕ್ ನೀರು ಹರಿಸಬೇಕು ಎಂದು ಕರ್ನಾಟಕಕ್ಕೆ ಮತ್ತೆ ಕಾವೇರಿ ನೀರು ನಿಯಂತ್ರಣ ಸಮಿತಿ ಸೂಚನೆ ನೀಡಿದೆ.
ಅಕ್ಟೋಬರ್ ಅಂತ್ಯದವರೆಗೆ ಪ್ರತಿದಿನ 3ಸಾವಿರ ಕ್ಯುಸೆಕ್ ನೀರು ಹರಿಸಲು ಕಾವೇರಿ ನೀರು ನಿಯಂತ್ರಣ ಸಮಿತಿ ಕಳೆದ ಬಾರಿ ಸಭೆಯಲ್ಲಿ ಆದೇಶಿಸಿತ್ತು. ಆದೇಶದ ಅವಧಿ ಮುಕ್ತಾಯವಾಗುತ್ತಿರುವ ಬೆನ್ನಲ್ಲೇ ಅಕ್ಟೋಬರ್ 30, ಸೋಮವಾರ ಕಾವೇರಿ ನೀರು ನಿಯಂತ್ರಣ ಸಮಿತಿಯು ನಡೆಸಿದ ಸಭೆಯಲ್ಲಿ ಕರ್ನಾಟಕದಿಂದ ನೀರು ಹರಿಸಲು ಸೂಚನೆ ನೀಡಿದೆ.
ಕಾವೇರಿ ನದಿ ನೀರು ಹಂಚಿಕೆ ವಿವಾದ ಬಗೆಹರಿಸಲು ಸುಪ್ರೀಂಕೋರ್ಟ್ ಆದೇಶದಂತೆ ರಚಿಸಲಾದ ಕಾವೇರಿ ನೀರು ನಿಯಂತ್ರಣಾ ಸಮಿತಿ ಹಾಗೂ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರದಿಂದ ಪ್ರತಿ 15 ದಿನಗಳಿಗೊಮ್ಮೆ ಸಭೆಯನ್ನು ನಡೆಸಿ ನೀರು ಬಿಡುವ ವಿಚಾರಕ್ಕೆ ಕರ್ನಾಟಕಕ್ಕೆ ಆದೇಶ ನೀಡಲಾಗುತ್ತಿದೆ.