ಕಾಂಗ್ರೆಸ್ ಒಂದೇ ಬಣ, ಸಿಎಂ ಹುದ್ದೆ ಖಾಲಿ ಇಲ್ಲ. ಕೆಲಸಕ್ಕೆ ಬಾರದವರು ಸಿಎಂ ಬದಲಾವಣೆ ಬಗ್ಗೆ ಚರ್ಚೆ ಮಾಡುತ್ತಿದ್ದಾರೆ ಎಂದು ಸಮಾಜ ಕಲ್ಯಾಣ ಸಚಿವ ಎಚ್ ಸಿ ಮಹಾದೇವಪ್ಪ ಡಿಕೆಶಿ ಬಣದ ಶಾಸಕರರಿಗೆ ತಿರುಗೇಟು ನೀಡಿದರು.
ವಿಜಯಪುರ ಜಿಲ್ಲೆಯ ಇಂಡಿ ತಾಲೂಕಿನ ಹಳಗುಣಕಿ ಗ್ರಾಮದಲ್ಲಿ ಅಂಬೇಡ್ಕರ್ ಪುತ್ಥಳಿ ಹಾಗೂ ಹಲವು ಕಾಮಗಾರಿಗಳನ್ನು ಉದ್ಘಾಟಿಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದರು.
ಈ ಸುದ್ದಿ ಓದಿದ್ದೀರಾ? ಹುಬ್ಬಳ್ಳಿ- ಧಾರವಾಡದಲ್ಲಿ ಏಮ್ಸ್ ಸ್ಥಾಪನೆ; ಕನ್ನಡಿಗರ ಕಿವಿಗೆ ಹೂವಿಟ್ಟ ಮೋದಿ: ಸಿದ್ದರಾಮಯ್ಯ ಟೀಕೆ
ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಬಣದ ಮಧ್ಯೆ ಸಿಎಂ ಹುದ್ದೆಗೆ ಗುದ್ದಾಟ ತಾರಕಕ್ಕೇರಿರುವ ವಿಚಾರವಾಗಿ ಪ್ರತಿಕ್ರಿಯಿಸಿದ ಅವರು, “ಮುಖ್ಯಮಂತ್ರಿ ಹುದ್ದೆಯಲ್ಲಿ ಸಿದ್ದರಾಮಯ್ಯ ಅವರು ಕೆಲಸ ಮಾಡುತ್ತಿದ್ದಾರೆ. ಕೆಲಸಕ್ಕೆ ಬಾರದವರು ಅವರನ್ನು ಬದಲಾಯಿಸುವ ಕುರಿತು ಮಾತನಾಡುತ್ತಿದ್ದಾರೆ” ಎಂದರು.