ಮಹಾರಾಷ್ಟ್ರದಲ್ಲಿ ಮರಾಠ ಮೀಸಲಾತಿಗಾಗಿ ಹೋರಾಟ ನಡೆಯುತ್ತಿದೆ. ಈ ವೇಳೆ, ಪ್ರತಿಭಟನಾಕಾರರು ಕರ್ನಾಟಕದ ಕೆಕೆಆರ್‌ಟಿಸಿ ಬಸ್‌ಗೆ ಬೆಂಕಿ ಹಚ್ಚಿದ ಘಟನೆ ಮಹಾರಾಷ್ಟ್ರದ ಉಸ್ಮಾನಬಾದ್ ಜಿಲ್ಲೆಯ ಉಮರ್ಗಾ ತಾಲೂಕಿನಲ್ಲಿ ನಡೆದಿದೆ.
ಬೀದರ್ ಜಿಲ್ಲೆಯ ಭಾಲ್ಕಿಯಿಂದ ಮಹಾರಾಷ್ಟ್ರದ ಪುಣೆಗೆ ತೆರಳುತ್ತಿದ್ದ ಬಸ್‌ಅನ್ನು (ಕೆಎ38 ಎಫ್. 1201) ಉಮರ್ಗಾ ಬಳಿಯ ಗ್ರಾಮವೊಂದರಲ್ಲಿ ಪ್ರತಿಭಟನಾಕಾರರು ತಡೆದಿದ್ದಾರೆ. ಪ್ರಯಾಣಿಕರನ್ನು ಕೆಳಗಿಳಿಸಿ ಬಸ್‌ಗೆ ಬೆಂಕಿ ಹಚ್ಚಿದ್ದಾರೆ. ಘಟನೆ ಹಿನ್ನೆಲೆಯಲ್ಲಿ ಮಹಾರಾಷ್ಟ್ರಕ್ಕೆ ಬಸ್ ಸಂಚಾರವನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಈ ಸುದ್ದಿ ಓದಿದ್ದೀರಾ? ಬೀದರ್ | ಕಾರ್ಮಿಕರ ಕಲ್ಯಾಣ ಮಂಡಳಿಯಲ್ಲಿ ಭಷ್ಟಾಚಾರ ಆರೋಪ; ಸಿಒಡಿ ತನಿಖೆಗೆ ಆಗ್ರಹ
ಬಸ್ ನಲ್ಲಿದ್ದ 39 ಪ್ರಯಾಣಿಕರಿಗೆ ಪೊಲೀಸರ ನೆರವಿನಿಂದ ಸುರಕ್ಷಿತವಾಗಿ ಪ್ರಯಾಣಿಸಲು ಪರ್ಯಾಯ ವ್ಯವಸ್ಥೆ ಮಾಡಲಾಗಿದೆ. ಮಹಾರಾಷ್ಟ್ರದ ಕಾರ್ಯಚರಣೆಯಲ್ಲಿ ಇರುವ ರಾಜ್ಯದ ಬಸ್ ಗಳನ್ನು ಸ್ಥಳೀಯ ಪೊಲೀಸ್ ಠಾಣೆ, ಬಸ್ ಡಿಪೊಗಳಲ್ಲಿ ಪಾರ್ಕ್ ಮಾಡಲು ಸಿಬ್ಬಂದಿಗೆ ನಿರ್ದೇಶಿಸಲಾಗಿದೆ ಎಂದು ತಿಳಿಸಿದ್ದಾರೆ.