ಯುದ್ಧ ನಿಲ್ಲಿಸಲ್ಲ, ನಿಲ್ಲಿಸಿದರೆ ಹಮಾಸ್‌ಗೆ ನಾವು ಶರಣಾದಂತೆ: ಇಸ್ರೇಲ್ ಪ್ರಧಾನಿ ನೆತನ್ಯಾಹು

Date:

Advertisements

ಯಾವುದೇ ಕಾರಣಕ್ಕೂ ಹಮಾಸ್ ವಿರುದ್ಧ ನಡೆಸುತ್ತಿರುವ ಯುದ್ಧವನ್ನು ನಿಲ್ಲಿಸುವುದಿಲ್ಲ. ಯುದ್ಧ ವಿರಾಮ ಘೋಷಿಸಿದರೆ ನಾವು ಹಮಾಸ್‌ಗೆ ಶರಣಾದಂತೆ ಎಂದು ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ತಿಳಿಸಿದ್ದಾರೆ.

ದೇಶವನ್ನುದ್ದೇಶಿಸಿ ಮಾತನಾಡಿದ ನೆತನ್ಯಾಹು, ಹಮಾಸ್ ವಿರುದ್ಧದ ಕದನ ಎರಡನೇ ಹಂತಕ್ಕೆ ತಲುಪಿದೆ. ಕದನ ವಿರಾಮಕ್ಕೆ ನಾವು ಕರೆ ಕೊಡುವುದೆಂದರೆ ಅದು ಹಮಾಸ್‌ಗೆ ಇಸ್ರೇಲ್ ಶರಣಾದಂತೆ. ಹಾಗಾಗಿ, ಅದು ಸಾಧ್ಯವಿಲ್ಲ ಎಂದು ತಿಳಿಸಿದ್ದಾರೆ.

ಹಮಾಸ್‌ ಒತ್ತೆಯಾಳಾಗಿ ಇರಿಸಿದವರನ್ನು ತಕ್ಷಣ ಯಾವುದೇ ಷರತ್ತುಗಳಿಲ್ಲದೆ ಬಿಡುಗಡೆಗೊಳಿಸಬೇಕೆಂದು ಅಂತಾರಾಷ್ಟ್ರೀಯ ಸಮುದಾಯ ಆಗ್ರಹಿಸಬೇಕು ಎಂದು ಅವರು ಹೇಳಿದ್ದಾರೆ.

Advertisements

ಈ ಹೇಳಿಕೆ ಮೂಲಕ ಕದನ ವಿರಾಮ ಇಲ್ಲ ಎಂದಿರುವ ಇಸ್ರೇಲ್ ಪ್ರಧಾನಿ ನೆತನ್ಯಾಹು, ಹಮಾಸ್‌ನ ಬಲ ಕುಗ್ಗಿಸುವುದು, ಒತ್ತೆಯಾಳುಗಳ ಬಿಡುಗಡೆ ಮಾಡುವುದು ನಮ್ಮ ಗುರಿ. ಈಗಾಗಲೇ ಉತ್ತರ ಗಾಝಾದಲ್ಲಿ ದಾಳಿ ಮುಂದುವರಿಸಲಾಗಿದೆ ಎಂದು ಹೇಳಿದ್ದಾರೆ.

ಅಕ್ಟೋಬರ್ 7ರಿಂದ ಆರಂಭಗೊಂಡಿರುವ ಇಸ್ರೇಲ್ ಹಾಗೂ ಹಮಾಸ್ ನಡುವಿನ ಸಂಘರ್ಷ ನಾಲ್ಕನೇ ವಾರಕ್ಕೆ ಕಾಲಿಟ್ಟಿದ್ದು, ಇದುವರೆಗೆ ಸಾವಿರಾರು ಮಂದಿ ಪ್ಯಾಲೆಸ್ತೀನಿಯರು ಹಾಗೂ ಇಸ್ರೇಲ್ ನಾಗರಿಕರು ಸಾವನ್ನಪ್ಪಿದ್ದಾರೆ.

ಇಸ್ರೇಲ್ ವೈಮಾನಿಕ ದಾಳಿಯನ್ನು ತೀವ್ರಗೊಳಿಸಿದ್ದು, ಇದುವರೆಗೆ ಕನಿಷ್ಠ 8,300 ಪ್ಯಾಲೆಸ್ತೀನಿಯರು ಮೃತಪಟ್ಟಿದ್ದಾರೆ. ಅದರಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಮಹಿಳೆಯರು ಹಾಗೂ ಮಕ್ಕಳೇ ಇದ್ದಾರೆ ಎಂದು ಪ್ಯಾಲೆಸ್ತೀನಿನ ಆರೋಗ್ಯ ಸಚಿವಾಲಯ ತಿಳಿಸಿದೆ.

ಹಮಾಸ್‌, ಇಸ್ರೇಲ್‌ನ ಪುರುಷರು, ಮಹಿಳೆಯರು ಹಾಗೂ ಮಕ್ಕಳು ಸೇರಿದಂತೆ ಸುಮಾರು 240 ಮಂದಿಯನ್ನು ತನ್ನ ಒತ್ತೆಯಾಳಾಗಿರಿಸಿಕೊಂಡಿದೆ. ಹಮಾಸ್ ಅನ್ನು ನಿರ್ನಾಮ ಮಾಡಿ, ಒತ್ತೆಯಾಳುಗಳನ್ನು ಕಾಪಾಡುವುದಾಗಿ ಇಸ್ರೇಲ್ ಪದೇ ಪದೇ ಹೇಳುತ್ತಲೇ ಇದೆ.

ಈ ಎಲ್ಲ ಬೆಳವಣಿಗಗಳ ನಡುವೆ ಹಮಾಸ್‌ನ ಒತ್ತೆಯಾಳಾಗಿದ್ದ ಇಸ್ರೇಲ್ ಯೋಧೆ ಒರಿ ಮೆಗಿದಿಶ್ ರಕ್ಷಿಸಿದ್ದೇವೆ. ಆರೋಗ್ಯವಾಗಿದ್ದು, ಆಕೆ ಈಗ ತನ್ನ ಕುಟುಂಬವನ್ನು ಸೇರಿಕೊಂಡಿದ್ದಾಳೆ ಎಂದು ಇಸ್ರೇಲ್​ ಸೇನೆ(ಇಸ್ರೇಲ್ ಡಿಫೆನ್ಸ್ ಫೋರ್ಸ್‌) ತಿಳಿಸಿದೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗೇಮಿಂಗ್​ ಆ್ಯಪ್​ಗಳಿಗೆ ಅಕ್ರಮ ಹಣ ವರ್ಗಾವಣೆ ಆರೋಪ: ಚಿತ್ರದುರ್ಗ ಶಾಸಕ ವೀರೇಂದ್ರ ಮನೆ ಮೇಲೆ ಇಡಿ ದಾಳಿ

ಶುಕ್ರವಾರ(ಆಗಸ್ಟ್ 22) ಬೆಳ್ಳಂಬೆಳಗ್ಗೆ ಚಿತ್ರದುರ್ಗದ ಶಾಸಕ ಕೆಸಿ ವೀರೇಂದ್ರ ಪಪ್ಪಿ ಅವರ...

ಚಿಕ್ಕಮಗಳೂರು l ಸಭಾಧ್ಯಕ್ಷರೇ ಮಲೆನಾಡಿನ ಸಮಸ್ಯೆ ಬಗ್ಗೆ ಚರ್ಚಿಸಲು ಅವಕಾಶ ಕಲ್ಪಿಸಿ; ಹೆಚ್.ಡಿ ತಮ್ಮಯ್ಯ

ಮಲೆನಾಡಿನಲ್ಲಿ ಕಾಡುತ್ತಿರುವ ಕಾಡು-ಪ್ರಾಣಿ-ಮಾನವ ಸಂಘರ್ಷದಿಂದ ಜನಜೀವನ ಅಸ್ತವ್ಯಸ್ಥವಾಗಿದೆ. ಇಂತಹ ಗಂಭೀರ ಸಮಸ್ಯೆಗಳ...

ಹಿಂಸಾಚಾರ ಪ್ರಕರಣ: ಪಾಕ್ ಮಾಜಿ ಪ್ರಧಾನಿ ಇಮ್ರಾನ್ ಖಾನ್‌ಗೆ ಜಾಮೀನು

ಪಾಕಿಸ್ತಾನದ ಮಾಜಿ ಪ್ರಧಾನಮಂತ್ರಿ ಇಮ್ರಾನ್ ಖಾನ್‌ಗೆ ಮೇ 9, 2023ರ ಹಿಂಸಾಚಾರ...

ದಾವಣಗೆರೆ | ಪರಿಶಿಷ್ಟ ಜಾತಿ ಒಳಮೀಸಲಾತಿ; ಅಲೆಮಾರಿಗಳಿಗೆ ಅನ್ಯಾಯ ವಿರೋಧಿಸಿ ಪ್ರತಿಭಟನೆ

""ಒಳ ಮೀಸಲಾತಿ ಹಂಚಿಕೊಳ್ಳುವಾಗ ನಿರ್ಗತಿಕ ಅಲೆಮಾರಿ ಜಾತಿಗಳನ್ನು ಸಂಪೂರ್ಣವಾಗಿ ಕಡೆಗಣಿಸಲಾಗಿದೆ. ಅಲೆಮಾರಿ...

Download Eedina App Android / iOS

X