ಸರ್ಕಾರಿ ಶಾಲೆಗಳಿಗೆ ಉಚಿತ ನೀರು, ವಿದ್ಯುತ್: ಸಿಎಂ ಸಿದ್ದರಾಮಯ್ಯ ಘೋಷಣೆ

Date:

Advertisements
  • ‘ಕನ್ನಡ ಹೆಸರಿನಲ್ಲಿ ಇಡೀ ವರ್ಷ ಸ್ವಾಭಿಮಾನಿ ಕನ್ನಡ ಸಾಂಸ್ಕೃತಿಕ ಸಂಭ್ರಮ’
  • ಕನ್ನಡ ಶಾಲೆಗಳಿಗೆ ಮೂಲ ಸೌಕರ್ಯ ಹೆಚ್ಚಿಸಲು ಸರ್ಕಾರದಿಂದ ನಿರಂತರ ಶ್ರಮ

ಇಂದಿನಿಂದ ಎಲ್ಲ ಸರ್ಕಾರಿ ಶಾಲೆಗಳಿಗೆ ಉಚಿತ ನೀರು ಮತ್ತು ವಿದ್ಯುತ್ ನೀಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಘೋಷಣೆ ಮಾಡಿದರು.

ಶಾಲಾ ಶಿಕ್ಷಣ ಸಾಕ್ಷರತಾ ಇಲಾಖೆಯು ಕಂಠೀರವ ಕ್ರೀಡಾಂಗಣದಲ್ಲಿ ಆಯೋಜಿಸಿದ್ದ 68ನೇ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಕನ್ನಡ ಧ್ವಜಾರೋಹಣ ನೆರವೇರಿಸಿ ಅವರು ಮಾತನಾಡಿದರು.

“ಕನ್ನಡಿಗರನ್ನು ಆರ್ಥಿಕವಾಗಿ, ಸಾಮಾಜಿಕವಾಗಿ ಶಕ್ತಿಶಾಲಿಗಳನ್ನಾಗಿ ಮಾಡುವ ಜತೆಗೆ ಶಿಕ್ಷಣದ ಗುಣಮಟ್ಟ ಹೆಚ್ಚಿಸುವ, ಕನ್ನಡ ಶಾಲೆಗಳಿಗೆ ಮೂಲ ಸೌಕರ್ಯ ಹೆಚ್ಚಿಸಲು ನಮ್ಮ ಸರ್ಕಾರ ನಿರಂತರವಾಗಿ ಶ್ರಮಿಸುತ್ತಿದೆ. ದೇವರಾಜು ಅರಸು ಅವರು ‘ಮೈಸೂರು’ ರಾಜ್ಯಕ್ಕೆ ‘ಕರ್ನಾಟಕ’ ಎಂದು ಹೆಸರಿಟ್ಟು 50 ವರ್ಷಗಳು ತುಂಬಿವೆ. ಈ ದಿನ ನಾವು ಒಂದು ಪ್ರತಿಜ್ಞೆ ಮಾಡಬೇಕಿದೆ. ಕನ್ನಡದಲ್ಲೇ ವ್ಯವಹರಿಸುವ ಪ್ರತಿಜ್ಞೆಯನ್ನು ನಾವು ಮಾಡುವ ಮೂಲಕ ನಮ್ಮ ತಾಯ್ನೆಲದ ಋಣ ತೀರಿಸುವ ಕೆಲಸ ಮಾಡಬೇಕಿದೆ. ಇಲ್ಲಿ ವಾಸ ಮಾಡುವ ಪ್ರತಿಯೊಬ್ಬರೂ ಕನ್ನಡದ ವಾತಾವರಣವನ್ನು ಸೃಷ್ಟಿಸಬೇಕು, ಸಂಭ್ರಮಿಸಬೇಕು” ಎಂದು ಕರೆ ನೀಡಿದರು.

Advertisements

“ಕನ್ನಡ ನೆಲದಲ್ಲಿದ್ದೂ ಕನ್ನಡ ಮಾತನಾಡದವರು ಹಲವು ಭಾಗಗಳಲ್ಲಿ ಇದ್ದಾರೆ. ನಮ್ಮ ಆಡಳಿತ ಭಾಷೆ ಕನ್ನಡ. ಆದ್ದರಿಂದ ನಾವು ಕನ್ನಡದಲ್ಲೇ ವ್ಯವಹರಿಸಬೇಕು. ಪ್ರತಿಯೊಬ್ಬರ, ಪ್ರತಿಯೊಂದು ಭಾಷೆಗೂ ನಾವು ಗೌರವ ಕೊಡಬೇಕು. ಆದರೆ ನಮ್ಮ ನಾಡಿನಲ್ಲಿ ವ್ಯವಹರಿಸುವಾಗ, ಆಡಳಿತದಲ್ಲಿ ಕನ್ನಡ ಬಳಕೆ ಆಗಬೇಕು. ಇದನ್ನು ಪ್ರತಿಯೊಬ್ಬ ಅಧಿಕಾರಿಯೂ ಚಾಚೂ ತಪ್ಪದೆ ಪಾಲಿಸಬೇಕು” ಎಂದರು.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಶರವೇಗದಲ್ಲಿ ಸಾವಿನತ್ತ ಧಾವಿಸಿದೆ RTI!

ಕರ್ನಾಟಕದಲ್ಲಿ ಕನ್ನಡ ಭಾಷೆಯಲ್ಲೇ ಪರೀಕ್ಷೆ ನಡೆಯಬೇಕು

“ಕೇಂದ್ರ ಸರ್ಕಾರ ಕರ್ನಾಟಕದಲ್ಲಿ ಇಂಗ್ಲಿಷ್, ಹಿಂದಿಯಲ್ಲಿ ಮಾತ್ರ ಸ್ಪರ್ಧಾತ್ಮಕ ಪರೀಕ್ಷೆ ನಡೆಸುವುದನ್ನು ಒಪ್ಪಲು ಸಾಧ್ಯವಿಲ್ಲ. ಕನ್ನಡದಲ್ಲೂ ಪ್ರವೇಶ ಪರೀಕ್ಷೆ ನಡೆಸಲು ಈ ಹಿಂದೆಯೂ ಒತ್ತಾಯಿಸಿದ್ದೆ. ಅಗತ್ಯ ಬಿದ್ದರೆ ಮತ್ತೆ ಕೇಂದ್ರಕ್ಕೆ ಪತ್ರ ಬರೆದು ಒತ್ತಾಯಿಸುತ್ತೇನೆ” ಎಂದು ಹೇಳಿದರು.

“ಕನ್ನಡದಲ್ಲಿ ಕಲಿತರೆ ಉದ್ಯೋಗ ಸಿಗುವುದಿಲ್ಲ, ಜ್ಞಾನ ಸಂಪಾದನೆ ಸಾಧ್ಯವಿಲ್ಲ ಎನ್ನುವ ತಪ್ಪು ಕಲ್ಪನೆಯಿಂದ ಇಂಗ್ಲಿಷ್ ಕಾನ್ವೆಂಟ್ ವ್ಯಾಮೋಹ ಬೆಳೆಸಿಕೊಂಡಿದ್ದಾರೆ. ಇದು ಸರಿಯಲ್ಲ. ಸಮಾಜದ ಎಲ್ಲ ಕ್ಷೇತ್ರಗಳಲ್ಲೂ ಕನ್ನಡ ಮಾಧ್ಯಮದಲ್ಲಿ ಕಲಿತವರು ಉನ್ನತ ಹುದ್ದೆಗಳಲ್ಲಿ ಇದ್ದಾರೆ. ಉನ್ನತ ಮಟ್ಟದ ಸಾಧನೆ ಮಾಡಿದ್ದಾರೆ” ಎಂದರು.

Karnataka Rajyotsava

ಮಾತೃಭಾಷೆಯ ಮಾಧ್ಯಮ ಉತ್ತಮ

“ಗುಣಮಟ್ಟದ ಶಿಕ್ಷಣ ಮತ್ತು ಉತ್ತಮ ಕಲಿಕಾ ವಾತಾವರಣ ಹಾಗೂ ಶಾಲೆಗಳ ಗುಣಮಟ್ಟ ಹೆಚ್ಚಿಸುವುದು, ಅಗತ್ಯ ಸವಲತ್ತುಗಳನ್ನು ಒದಗಿಸುವುದು ನಮ್ಮ ಸರ್ಕಾರದ ಆದ್ಯತೆ. ತಮ್ಮ ಮಕ್ಕಳನ್ನು ಅವರ ಇಷ್ಟದ ಭಾಷೆಯಲ್ಲಿ ಕಲಿಸುವುದು ಪೋಷಕರ ನಿರ್ಧಾರಕ್ಕೆ ಬಿಟ್ಟ ವಿಷಯ ಎಂದು ಸುಪ್ರೀಂಕೋರ್ಟ್ ಹೇಳಿದೆ. ಆದರೆ, ಮಾತೃಭಾಷೆಯ ಮಾಧ್ಯಮದಲ್ಲೇ ಕಲಿಯುವುದು ಅತ್ಯಂತ ವೈಜ್ಞಾನಿಕ ಎನ್ನುವುದನ್ನು ಗ್ರಹಿಸಬೇಕು” ಎಂದು ತಿಳಿಸಿದರು.

ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಪ್ರಾಥಮಿಕ ಶಿಕ್ಷಣ ಸಚಿವರಾದ ಮಧು ಬಂಗಾರಪ್ಪ, ಶಾಸಕ ರಿಝ್ವಾನ್ ಹರ್ಷದ್, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಗೋವಿಂದರಾಜು ಸೇರಿ ಹಲವು ಗಣ್ಯರು ಉಪಸ್ಥಿತರಿದ್ದರು.

ಕರ್ನಾಟಕದ ಜನತೆಗೆ ಕನ್ನಡ ರಾಜ್ಯೋತ್ಸವದ ಶುಭಾಶಯ ಕೋರಿದ ರಾಜ್ಯಪಾಲರು

ಕರ್ನಾಟಕದ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ಕರ್ನಾಟಕದ ಜನತೆಗೆ ಕನ್ನಡ ರಾಜ್ಯೋತ್ಸವ ದಿನಾಚರಣೆ ಶುಭಾಶಯಗಳನ್ನು ಕೋರಿದ್ದಾರೆ.

“ಕರ್ನಾಟಕ ರಾಜ್ಯದ ಜನತೆಗೆ ಕನ್ನಡ ರಾಜ್ಯೋತ್ಸವದ ಶುಭಾಶಯಗಳನ್ನು ಕೋರುತ್ತೇನೆ. ನಮ್ಮ ಶ್ರೀಮಂತ ಪರಂಪರೆ, ವೈವಿಧ್ಯಮಯ ಸಂಸ್ಕೃತಿ ಮತ್ತು ಏಕತೆಯ ಮನೋಭಾವವನ್ನು ಒಟ್ಟಾಗಿ ಆಚರಿಸೋಣ. ನಾವು ಕರ್ನಾಟಕವನ್ನು ಪ್ರಗತಿ ಮತ್ತು ಅವಕಾಶಗಳ ನಾಡಾಗಿ ಮಾಡುವುದನ್ನು ಮುಂದುವರಿಸೋಣ. ಜೈ ಕರ್ನಾಟಕ!” ಎಂದು ಟ್ವೀಟ್ ಮಾಡುವ ಮೂಲಕ ಥಾವರ್ ಚಂದ್ ಗೆಹ್ಲೋಟ್ ಶುಭ ಕೋರಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಧರ್ಮಸ್ಥಳ | 20 ವರ್ಷಗಳ ಅಸಹಜ ಸಾವು ಪ್ರಕರಣ; ತನಿಖೆ ತೀವ್ರಗೊಳಿಸಲು ಸಮಾನ ಮನಸ್ಕರ ಆಗ್ರಹ

ಬೆಂಗಳೂರಿನ ಪ್ರಮುಖ ಸಮಾನ ಮನಸ್ಕ ಸಂಘಟನೆಗಳು ಗುರುವಾರ ಸಭೆ ಸೇರಿ ಧರ್ಮಸ್ಥಳ...

ಬ್ರಹ್ಮಾವರ | ಮಹೇಶ್ ಶೆಟ್ಟಿ ತಿಮರೋಡಿಗೆ 14 ದಿನಗಳ ಕಾಲ ನ್ಯಾಯಾಂಗ ಬಂಧನ

ಬಿಜೆಪಿ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿಎಲ್ ಸಂತೋಷ್ ವಿರುದ್ಧ ಅವಹೇಳನಾಕಾರಿ ಹೇಳಿಕೆ...

ಚಿಕ್ಕಮಗಳೂರು l ಸಭಾಧ್ಯಕ್ಷರೇ ಮಲೆನಾಡಿನ ಸಮಸ್ಯೆ ಬಗ್ಗೆ ಚರ್ಚಿಸಲು ಅವಕಾಶ ಕಲ್ಪಿಸಿ; ಹೆಚ್.ಡಿ ತಮ್ಮಯ್ಯ

ಮಲೆನಾಡಿನಲ್ಲಿ ಕಾಡುತ್ತಿರುವ ಕಾಡು-ಪ್ರಾಣಿ-ಮಾನವ ಸಂಘರ್ಷದಿಂದ ಜನಜೀವನ ಅಸ್ತವ್ಯಸ್ಥವಾಗಿದೆ. ಇಂತಹ ಗಂಭೀರ ಸಮಸ್ಯೆಗಳ...

ಧರ್ಮಸ್ಥಳ ಪ್ರಕರಣಗಳ ಸಮಗ್ರ ತನಿಖೆಗೆ ಎಡಪಕ್ಷಗಳ ಒತ್ತಾಯ

ಧರ್ಮಸ್ಥಳದಲ್ಲಿ ನಡೆದಿರುವ ವೇದವಲ್ಲಿ, ಪದ್ಮಲತಾ, ನಾರಾಯಣ, ಯಮುನಾ ಮತ್ತು ಸೌಜನ್ಯ, ಮುಂತಾದ...

Download Eedina App Android / iOS

X