ಹುಲಿ ದಾಳಿಯಿಂದ ರೈತರೊಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ. ಘಟನೆಗೆ ಸಂಬಂಧಿಸಿದಂತೆ ದಾಳಿ ನಡೆದ ಸ್ಥಳಕ್ಕೆ ಅರಣ್ಯಾಧಿಕಾರಿ ಭೇಟಿ ನೀಡಿದ್ದು, ಆ ವೇಳೆ ಸಿಬ್ಬಂದಿ ಮೇಲೆ ಗ್ರಾಮಸ್ಥರು ಹಲ್ಲೆ ಮಾಡಿರುವ ಘಟನೆ ಮೈಸೂರು ಜಿಲ್ಲೆಯಲ್ಲಿ ನಡೆದಿದೆ.
ಜಿಲ್ಲೆಯ ನಂಜನಗೂಡು ತಾಲೂಕಿನ ಮಹದೇವನಗರ ಗ್ರಾಮದಲ್ಲಿ ರೈತ ಮಹದೇವೇಗೌಡ ಮೇಲೆ ಹುಲಿ ದಾಳಿ ಮಾಡಿತ್ತು. ಗಾಯಗೊಂಡ ರೈತನನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಆತ ಸಾವು-ಬದುಕಿನ ನಡುವೆ ಹೋರಾಟ ನಡೆಸುತ್ತಿದ್ದಾರೆ.
ಇತ್ತ, ಗ್ರಾಮಕ್ಕೆ ಅರಣ್ಯ ಇಲಾಖೆಯ ಸಿಬ್ಬಂದಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಹುಲಿ ದಾಳಿಯಿಂದ ಬೇಸತ್ತಿದ್ದ ಗ್ರಾಮಸ್ಥರು ಸಿಬ್ಬಂದಿ ಮೇಲೆ ಹಲ್ಲೆ ನಡೆಸಿದ್ದಾರೆ. ಅರಣ್ಯ ಇಲಾಖೆ ಸಿಬ್ಬಂದಿ ಮಹಾಂತೇಶ್ ಹಲ್ಲೆಗೀಡಾಗಿದ್ದಾರೆ.