ಬೆಂಗಳೂರಿನ ಹೊರ ವಲಯದಲ್ಲಿರುವ ಬೊಮ್ಮನಹಳ್ಳಿಯ ಕೂಡ್ಲು, ಸಿಂಗಸಂದ್ರ ಬಳಿ ಕಳೆದ ಮೂರು ದಿನಗಳ ಹಿಂದೆ ಕಾಣಿಸಿಕೊಂಡ ಚಿರತೆ ಕೊನೆಗೂ ಬೋನಿಗೆ ಬಿದ್ದಿದೆ. ಸದ್ಯ ಬೊಮ್ಮನಹಳ್ಳಿ, ಬಿಟಿಎಂ ಲೇಔಟ್, ಹೆಚ್.ಎಸ್.ಆರ್ ಲೇಔಟ್ ಸೇರಿದಂತೆ ಸುತಮುತ್ತಲ ಜನರು ನಿಟ್ಟುಸಿರು ಬಿಟ್ಟಿದ್ದಾರೆ.
ಬೊಮ್ಮನಹಳ್ಳಿಯ ಕೈಗಾರಿಕಾ ಪ್ರದೇಶ ವಲಯದಲ್ಲಿ ಚಿರತೆ ಸೆರೆಯಾಗಿದೆ. ಮೈಸೂರು ಲ್ಯಾಪರ್ಡ್ ಟಾಸ್ಕ್ ಫೋರ್ಸ್‌ನ ಕಾರ್ಯಾಚರಣೆ ಯಶಸ್ವಿಯಾಗಿದೆ. ಕೂಡ್ಲು ಗೇಟ್ ಬಳಿಯ ಪಾಳು ಬಿದ್ದ ಕಟ್ಟಡದಲ್ಲಿ ಚಿರತೆಯನ್ನು ಸೆರೆಹಿಡಿಯಲಾಗಿದೆ.
ಬೆಂಗಳೂರಿನ ಹೊರ ವಲಯದಲ್ಲಿರುವ ಬೊಮ್ಮನಹಳ್ಳಿಯ ಕೂಡ್ಲು, ಸಿಂಗಸಂದ್ರ ಬಳಿ ಅ.29ರ ರಾತ್ರಿ ಕಾಣಿಸಿಕೊಂಡಿದ್ದ ಚಿರತೆ, ನಗರಕ್ಕೆ ಬಂದು ಮೂರು ದಿನ ಕಳೆದರೂ ಬೋನಿಗೆ ಬಿದ್ದಿರಲಿಲ್ಲ. ಇದರಿಂದ ಸುತ್ತಮುತ್ತಲಿನ ನಿವಾಸಿಗಳು ಆತಂಕಗೊಂಡಿದ್ದರು.
ಈ ಸುದ್ದಿ ಓದಿದ್ದೀರಾ? ಬೆಂಗಳೂರು | ಮೂರು ದಿನವಾದರೂ ಬೋನಿಗೆ ಬೀಳದ ಚಿರತೆ; ವೈದ್ಯ ಸೇರಿದಂತೆ ಮೂವರ ಮೇಲೆ ದಾಳಿ
ಬೊಮ್ಮನಹಳ್ಳಿ ಭಾಗದ ಕೂಡ್ಲು ಸಮೀಪ ಕಾಣಿಸಿಕೊಂಡಿದ್ದ ಚಿರತೆ ಮತ್ತೆ ಕೃಷ್ಣಾರೆಡ್ಡಿ ಕೈಗಾರಿಕಾ ಪ್ರದೇಶದಲ್ಲಿ ಪತ್ತೆಯಾಗಿತ್ತು. ಚಿರತೆ ಸೆರೆ ಹಿಡಿಯಲು ಅರಣ್ಯಾಧಿಕಾರಿಗಳು ಸತತವಾಗಿ ಮೂರು ದಿನಗಳಿಂದ ಕಾರ್ಯಾಚರಣೆ ನಡೆಸಿದ್ದರೂ ಕೂಡಾ ಚಿರತೆಯ ಕುರುಹು ಪತ್ತೆಯಾಗಿರಲಿಲ್ಲ. ನವೆಂಬರ್ 1 ರಂದು ಅರಣ್ಯ ಇಲಾಖೆ ಸಿಬ್ಬಂದಿ ಕಾರ್ಯಾಚರಣೆ ನಡೆಸಿ ಚಿರತೆ ಸೆರೆಹಿಡಿಯುವಲ್ಲಿ ಯಶಸ್ವಿಯಾಗಿದ್ದಾರೆ.