ವಿಜಯಪುರ | ಕೆ-ಸೆಟ್ ಪರೀಕ್ಷೆ-2023; ಆನ್‌ಲೈನ್ ತರಬೇತಿಗೆ ಚಾಲನೆ

Date:

Advertisements

ಆನ್‌ಲೈನ್‌ ತರಗತಿಗಳಲ್ಲಿ ತಜ್ಞರು ನೀಡುವ ಮಾಹಿತಿಯನ್ನು ಚೆನ್ನಾಗಿ ಗ್ರಹಿಸಿದರೆ ಮಾತ್ರ ಕೆ-ಸೆಟ್ ಪರೀಕ್ಷೆಯಲ್ಲಿ ಯಶಸ್ಸು ಸಾಧಿಸಲು ಸಾಧ್ಯ ಎಂದು ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾಲಯದ ಕುಲಪತಿ ಪ್ರೊ ಬಿ ಕೆ ತುಳಸಿಮಾಲ ಹೇಳಿದರು.

ವಿಜಯಪುರದಲ್ಲಿರುವ ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾಲಯದ ಸ್ಪರ್ಧಾತ್ಮಕ ಪರೀಕ್ಷಾ ಕೋಚಿಂಗ್ ಅಕಾಡೆಮಿ, ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ವಿಭಾಗದ ಅಕ್ಕ ಟಿವಿ, ಯೂಟ್ಯೂಬ್, ನ್ಯೂಸ್ ಚಾನೆಲ್ ಜಂಟಿಯಾಗಿ ಹಮ್ಮಿಕೊಂಡಿರುವ ಕೆ-ಸೆಟ್ ಪರೀಕ್ಷೆಯ ಆನ್‌ಲೈನ್ ತರಬೇತಿ ಕಾರ್ಯಕ್ರಮಕ್ಕೆ ಆನ್‌ಲೈನ್ ಮೂಲಕ ಚಾಲನೆ ನೀಡಿ ಮಾತನಾಡಿದರು.

“ಆನ್‌ಲೈನ್‌ ತರಗತಿಗಳಲ್ಲಿ ಪ್ರಜ್ಞಾಪೂರ್ವಕವಾಗಿ ಭಾಗಿಗಳಾಗಬೇಕು. ಇಲ್ಲಿ ನಡೆಯುವ ಆನ್‌ಲೈನ್ ತರಗತಿಗಳಿಂದ ಮಾಹಿತಿ ಪಡೆದುಕೊಂಡು ಹಳೆಯ ಪಶ್ನೆ ಪತ್ರಿಕೆಗಳನ್ನು ಸೂಕ್ಷ್ಮವಾಗಿ ಅಧ್ಯಯನ ಮಾಡುವ ಮೂಲಕ ಸಂಭವನೀಯ ಪ್ರಶ್ನೆಗಳಿಗೆ ಉತ್ತರಗಳನ್ನು ಸಿದ್ಧಪಡಿಸಿಕೊಳ್ಳುವ ಕಲೆ ಸಿದ್ಧಿಸಿಕೊಳ್ಳಬೇಕು” ಎಂದು ಅಭ್ಯರ್ಥಿಗಳಿಗೆ ಸಲಹೆ ನೀಡಿದರು.

Advertisements

“ಕೆ-ಸೆಟ್ ಪರೀಕ್ಷೆಗಳಲ್ಲಿ ಸ್ನಾತಕೋತ್ತರ ಪರೀಕ್ಷೆಗಳಲ್ಲಿ ಬರುವ ಪ್ರಶ್ನೆಗಳಿಗಿಂತ ಭಿನ್ನವಾದ ರೀತಿಯ  ಪ್ರಶ್ನೆಗಳಿರುತ್ತವೆ. ಈ ಪ್ರಶ್ನೆಗಳನ್ನು ಸರಿಯಾಗಿ ಅರ್ಥೈಸಿಕೊಂಡು ಉತ್ತರಿಸುವ ಜಾಣ್ಮೆಯನ್ನು ಪರೀಕ್ಷಾರ್ಥಿಗಳು ಕಲಿತುಕೊಳ್ಳಬೇಕು” ಎಂದು ಪ್ರೊ.ತುಳಸಿಮಾಲ ಹೇಳಿದರು.

“ಕಠಿಣ ವಿಷಯಗಳನ್ನು ಅನೈನ್ ತರಗತಿಗಳಲ್ಲಿ ಮನನ ಮಾಡಿಕೊಂಡು ಸಹಪಾಠಿಗಳ ಜತೆಗೆ ಗುಂಪು ಚರ್ಚೆಗಳನ್ನು ನಡೆಸುವ ಮೂಲಕ ಸುಲಭ ದಾರಿಗಳನ್ನು ಕಂಡುಕೊಳ್ಳಬೇಕು. ಸ್ಪರ್ಧಾತ್ಮಕ ಪರೀಕ್ಷೆಯ ಯಶಸ್ಸಿಗೆ ಈ ಆನ್‌ಲೈನ್‌ ತರಬೇತಿ ಕಾರ್ಯಕ್ರಮ ಹೆಚ್ಚಿನ ಪ್ರಮಾಣದಲ್ಲಿ ಸಹಕಾರಿಯಾಗಲಿದೆ” ಎಂದು ತಿಳಿಸಿದರು.

ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದ ಕುಲಸಚಿವ ಶಂಕರಗೌಡ ಸೋಮನಾಳ ಮಾತನಾಡಿ, “ಆನ್‌ಲೈನ್‌ ತರಬೇತಿ ಕಾರ್ಯಕ್ರಮಕ್ಕೆ ಅಭೂತ ಪೂರ್ವ ಪ್ರತಿಕ್ರಿಯೆ ವ್ಯಕ್ತವಾಗಿದೆ. ನಿರೀಕ್ಷೆ ಮೀರಿ ಅಭ್ಯರ್ಥಿಗಳು ಹೆಸರು ನೋಂದಾಯಿಸಿಕೊಂಡಿದ್ದಾರೆ. ಈಗಾಗಲೇ ರಾಜ್ಯದ 30 ಜಿಲ್ಲೆಗಳ 2,223 ಅಭ್ಯರ್ಥಿಗಳು ಹೆಸರು ನೋಂದಾಯಿಸಿಕೊಂಡಿದ್ದಾರೆ. ಈ ಸಂಖ್ಯೆ ಮೂರು ಸಾವಿರಕ್ಕೂ ಹೆಚ್ಚಾಗುವ ನಿರೀಕ್ಷೆಯಿದೆ. ಈಗಾಗಲೇ ಈ ಆನ್‌ಲೈನ್‌ ತರಬೇತಿ ಕಾರ್ಯಕ್ರಮಕ್ಕೆ ಹೆಸರು ನೋಂದಾಯಿಸಿಕೊಂಡಿರುವವರ ಪೈಕಿ ಶೇ. 66ರಷ್ಟು ಮಹಿಳೆಯರಿರುವುದು ವಿಶೇಷವಾಗಿದೆ” ಎಂದು ಸಂತಸ ವ್ಯಕ್ತಪಡಿಸಿದರು.

“ಒಟ್ಟು 35 ಕೋರ್ಸ್‌ಗಳ ಅಭ್ಯರ್ಥಿಗಳು ಹೆಸರು ನೋಂದಾಯಿಸಿಕೊಂಡಿದ್ದು, ಇದರಲ್ಲಿ ರಾಜ್ಯದ ಒಟ್ಟು 23 ಸರ್ಕಾರಿ, ಖಾಸಗಿ ವಿಶ್ವವಿದ್ಯಾಲಯಗಳ ಸ್ನಾತಕೋತ್ತರ ಪದವೀಧರರು ಸೇರಿದ್ದಾರೆ. ಈ ತರಬೇತಿ ಕಾರ್ಯಕ್ರಮಕ್ಕೆ ಹೆಸರು ನೋಂದಾಯಿಸಿಕೊಂಡಿರುವವರಲ್ಲಿ ಶೇ. 33.4ರಷ್ಟು ಸ್ನಾತಕೋತ್ತರ ಅಧ್ಯಯನ ಮಾಡುತ್ತಿರುವವರು, ಶೇ.26.5ರಷ್ಟು ನಿರುದ್ಯೋಗಿಗಳು, ಶೇ.23.7 ರಷ್ಟು ನೌಕರರು, ಶೇ. 98ರಷ್ಟು ಇತರೆ ಅಭ್ಯರ್ಥಿಗಳು ಮತ್ತು ಶೇ. 6.6ರಷ್ಟು ಅಭ್ಯರ್ಥಿಗಳು ಸಂಶೋಧನಾ ವಿದ್ಯಾರ್ಥಿಗಳು ಸೇರಿದ್ದಾರೆ” ಎಂದು ತಿಳಿಸಿದರು.

“ಈ ತರಬೇತಿ, ಕನ್ನಡ ಮತ್ತು ಇಂಗ್ಲಿಷ್ ಭಾಷೆಗಳೆರಡರಲ್ಲಿಯೂ ನಡೆಯಲಿದೆ. ಕೆ-ಸೆಟ್ ಪರೀಕ್ಷೆಯ ಮೊದಲ ಪತ್ರಿಕೆಯ 10 ವಿಷಯಗಳ ಕುರಿತು ತರಬೇತಿ ಆಯೋಜಿಸಲಾಗಿದ್ದು, 16ಕ್ಕೂ ಹೆಚ್ಚು ವಿವಿಧ ವಿಷಯಗಳ ತಜ್ಞರು ಉಪನ್ಯಾಸ ನೀಡಲಿದ್ದಾರೆ. ಈ ತರಬೇತಿ ಕಾರ್ಯಕ್ರಮದಲ್ಲಿ ವಿಜಯಪುರ, ರಾಯಚೂರು, ಶಿವಮೊಗ್ಗ, ಬೆಂಗಳೂರು, ಮೈಸೂರು ಮತ್ತಿತರ ಕಡೆಗಳಲ್ಲಿನ ತಜ್ಞರು ವಿಶೇಷ ಉಪನ್ಯಾಸ ನೀಡಲಿದ್ದಾರೆ” ಎಂದು ವಿವರಿಸಿದರು.

ಮೌಲ್ಯಮಾಪನ ಕುಲಸಚಿವ ಪ್ರೊ ಎಚ್‌ ಎಂ ಚಂದ್ರಶೇಖರ್ ಮಾತನಾಡಿ, “ಕೆ-ಸೆಟ್ ಪರೀಕ್ಷೆಯಲ್ಲಿ ಯಶಸ್ಸು ಗಳಿಸಬೇಕಾದರೆ ಪ್ರತಿಯೊಬ್ಬ ಅಭ್ಯರ್ಥಿಯೂ ಆಯಾ ವಿಷಯಗಳ ಪಠ್ಯಕ್ರಮ, ಪ್ರಶ್ನೆಗಳ ಮಾದರಿ ಎಲ್ಲವನ್ನೂ ಅರ್ಥೈಸಿಕೊಳ್ಳಬೇಕು. ಅಂತಹ ಒಂದು ಪ್ರಯತ್ನವನ್ನು ಮಾಡಲು ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾನಿಲಯದ ಕೋಚಿಂಗ್ ಅಕಾಡೆಮಿ ಹಮ್ಮಿಕೊಂಡಿರುವ ಈ ಆನ್‌ಲೈನ್‌ ತರಬೇತಿ ಕಾರ್ಯಕ್ರಮ ಅಭ್ಯರ್ಥಿಗಳಿಗೆ ಸದವಕಾಶ ಒದಗಿಸಿದ್ದು, ಈ ಅವಕಾಶವನ್ನು ಎಲ್ಲರೂ ಸಮರ್ಥವಾಗಿ ಬಳಸಿಕೊಳ್ಳಬೇಕು” ಎಂದು ಸಲಹೆ ಮಾಡಿದರು.

ಈ ಸುದ್ದಿ ಓದಿದ್ದೀರಾ? ಬೀದರ್‌ | ಕನ್ನಡ ಭಾಷೆಯೊಂದಿಗೆ ಇತರ ಭಾಷೆಗಳನ್ನು ಗೌರವಿಸುವುದು ತಪ್ಪಲ್ಲ: ಶಾಸಕ ಪ್ರಭು ಚವ್ಹಾಣ

“ರಾಜ್ಯದ ಬೇರೆ ಬೇರೆ ವಿಶ್ವವಿದ್ಯಾಲಯಗಳು ತಮ್ಮ ತಮ್ಮ ವಿಶ್ವವಿದ್ಯಾಲಯಗಳ ವಿದ್ಯಾರ್ಥಿಗಳಿಗೆ ಸೀಮಿತವಾಗಿ ಇಂಥ ತರಬೇತಿ ಕಾರ್ಯಕ್ರಮಗಳನ್ನು ಆಯೋಜಿಸುತ್ತವೆ. ಆದರೆ ಮಹಿಳಾ ವಿಶ್ವವಿದ್ಯಾಲಯ ರಾಜ್ಯದ ಎಲ್ಲ ವಿದ್ಯಾರ್ಥಿಗಳಿಗೆ ಅನುಕೂಲ ಕಲ್ಪಿಸುವ ನಿಟ್ಟಿನಲ್ಲಿ ಆನ್‌ಲೈನ್ ತರಗತಿಗಳನ್ನು ಆಯೋಜಿಸಿರುವುದು ಮಾದರಿ ಕೆಲಸವಾಗಿದೆ” ಎಂದು ಅವರು ಪ್ರಶಂಸಿಸಿದರು.

ಸಹಾಯಕ ಪ್ರಾಧ್ಯಾಪಕ ಡಾ.ಪ್ರಕಾಶ್ ಬಡಿಗೇರ, ತರಬೇತಿ ಕಾರ್ಯಕ್ರಮದ ಸಂಯೋಜಕಿ ಡಾ.ತಹಮೀನಾ ಕೋಲಾರ, ಸಹಾಯಕ ಪ್ರಾಧ್ಯಾಪಕ ಸಂದೀಪ್, ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ವಿಭಾಗದ ಮುಖ್ಯಸ್ಥ ಪ್ರೊ ಓಂಕಾರ ಕಾಕಡೆ ಇದ್ದರು.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ಕಡಿಮೆ ದರದಲ್ಲಿ ಊಟ ಉಪಾಹಾರ ಒದಗಿಸುವ ಅಕ್ಕ ಕೆಫೆ ಪ್ರಾರಂಭ

ಉಡುಪಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಉಡುಪಿ ವತಿಯಿಂದ ಜಿಲ್ಲಾಧಿಕಾರಿಗಳ ಕಚೇರಿ ಆವರಣದಲ್ಲಿ...

ಸಕಲೇಶಪುರ | ಸಮಾಜ ವ್ಯಸನಮುಕ್ತವಾದಾಗ ಮಾತ್ರ ನೆಮ್ಮದಿಯ ಬದುಕು ಸಾಧ್ಯ: ಅವಿನಾಶ್‌ ಕಾಕಡೆ

ಸಮಾಜ ವ್ಯಸನಮುಕ್ತವಾದಾಗ ಮಾತ್ರ ನೆಮ್ಮದಿಯ ಬದುಕು ಸಾಧಿಸಲು ಸಾಧ್ಯ. ಹಾಗಾಗಿ ಮನೆಯಿಂದಲೇ...

ಕರ್ನಾಟಕ ಕೃಷಿ ಇಲಾಖೆಯಿಂದ ರೈತರಿಗೆ ಡಿಜಿಟಲ್ ಬಲ: ಬಿಇಎಲ್ ಜೊತೆ ಒಡಂಬಡಿಕೆ

ಕೃಷಿ ಸೇವೆಗಳು ರೈತರಿಗೆ ಇನ್ನಷ್ಟು ಸುಲಭವಾಗಿ ದತ್ತಾಂಶ ಆಧಾರಿತವಾಗಿ ಮತ್ತು ಅವಶ್ಯಕತೆಗೆ...

ಯಾದಗಿರಿ | ಅತಿವೃಷ್ಟಿಯಿಂದ ಬೆಳೆ ಹಾನಿ: ರೈತರಿಗೆ ಪರಿಹಾರ ನೀಡುವಂತೆ ಆಗ್ರಹ

ಯಾದಗಿರಿ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ಬೆಳೆ ಹಾನಿದ ರೈತರಿಗೆ ಸಮೀಕ್ಷೆ ನಡೆಸಿ ಶೀಘ್ರದಲ್ಲಿ...

Download Eedina App Android / iOS

X