ಧಾರವಾಡ | ಧರ್ಮಸ್ಥಳ ಟ್ರಸ್ಟ್‌ನ ಹಣ ಕಳವು; ಮೂವರು ಟ್ರಸ್ಟ್‌ ನೌರಕರು ಸೇರಿ 10 ಮಂದಿ ಬಂಧನ

Date:

Advertisements

ಧಾರವಾಡದ ರಾಯಪುರದಲ್ಲಿರುವ ಧರ್ಮಸ್ಥಳ ಗ್ರಾಮಾಭಿವೃದ್ಧಿ ಟ್ರಸ್‌ನ ತಾಲೂಕು ಕಚೇರಿಯಲ್ಲಿ ಅಕ್ಟೋಬರ್​ 24ರಂದು ನಡೆದಿದ್ದ ಕಳ್ಳತನ ಪ್ರಕರಣವನ್ನು ಪೊಲೀಸರು ಭೇದಿಸಿದ್ದು, 10 ಮಂದಿ ಆರೋಪಿಗಳನ್ನು ಬಂಧಿಸಿದ್ದಾರೆ.

ಈ ಬಗ್ಗೆ ಹುಬ್ಬಳ್ಳಿ-ಧಾರವಾಡ ಪೊಲೀಸ್​ ಆಯುಕ್ತೆ ರೇಣುಕಾ ಸುಕುಮಾರ್​ ಧಾರವಾಡದಲ್ಲಿ ಮಾದ್ಯಮಗಳಿಗೆ ಮಾಹಿತಿ ನೀಡಿದ್ದಾರೆ. ಟ್ರಸ್ಟ್​ನ ನೌಕರರಾಗಿದ್ದ ಕುಶಾಲ್​ ಕುಮಾರ್​, ಬಸವರಾಜ್​, ಮಹಾಂತೇಶ್ ಪ್ರಮುಖ ಆರೋಪಿಗಳು.​ ಪ್ರಾಥಮಿಕವಾಗಿ ಇವರು ಕಳ್ಳತನಕ್ಕೆ ಯೋಜನೆ ರೂಪಿಸಿದ್ದು, ಇತರೆ ಏಳು ಮಂದಿ ಆರೋಪಿಗಳನ್ನು ಜೊತೆ ಸೇರಿಕೊಂಡು ಈ ಕೃತ್ಯ ಎಸಗಿದ್ದಾರೆ. ಜಿಲಾನಿ, ಪರಶುರಾಮ, ರಂಗಪ್ಪ, ಮಂಜುನಾಥ, ಕಿರಣ, ರಜಾಕ ಅಜ್ಯದ ಹಾಗೂ ವೀರೇಶ ಆ ಏಳುಜನ ಆರೋಪಿಗಳು.

ಆರೋಪಿಗಳನ್ನು ಬಂಧಿಸಿ 79,89ಲಕ್ಷ ನಗದು ಮತ್ತು ಅಪರಾಧಕ್ಕಾಗಿ ಬಳಸಿದ್ದ ಕಾರು, ಎರಡು ದ್ವಿಚಕ್ರವಾಹನ, ನಾಲ್ಕು ಮೊಬೈಲ್​ ಗಳನ್ನು ಬಂಧಿತರಿಂದ ಪೊಲೀಸರು ವಶಕ್ಕೆ ಪಡೆದಿದ್ದಾರೆ.

Advertisements

ಈ ಪ್ರಕರಣ ಪೊಲೀಸರಿಗೆ ಸವಾಲಾಗಿತ್ತು. ಘಟನಾ ಸ್ಥಳ ಪರಿಶೀಲನೆ ಮಾಡಿದಾಗ ಸಿಸಿಟಿವಿ ಕ್ಯಾಮೆರಾ ಸೇರಿದಂತೆ ಯಾವುದೇ ಕುರುಹು ಪೊಲೀಸರಿಗೆ ಸಿಕ್ಕಿರಲಿಲ್ಲ. ವಿದ್ಯಾನಗರ ಸಬ್​ ಇನ್ಸ್​ಪೆಕ್ಟರ್​ ಸಂಗಮೇಶ್​ ನೇತೃತ್ವದಲ್ಲಿ ತನಿಖೆಗಾಗಿ ವಿಶೇಷ ತಂಡವೊಂದನ್ನು ರಚಿಸಿ, ಈ ಪ್ರಕರಣವನ್ನು ವೈಜ್ಞಾನಿಕವಾಗಿ ಭೇದಿಸುವಲ್ಲಿ ತಂಡ ಯಶಸ್ವಿಯಾಗಿದೆ ಎಂದು ಆಯುಕ್ತೆ ರೇಣುಕಾ ಸುಕುಮಾರ್ ಮಾಹಿತಿ ನೀಡಿದರು.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದೀಕ್ಷಾ ಭೂಮಿ ಯಾತ್ರೆಗೆ ಡಾ. ಬಿ.ಆರ್.ಅಂಬೇಡ್ಕರ್ ಅನುಯಾಯಿಗಳ ನಿಯೋಜನೆ – ಅರ್ಜಿ ಆಹ್ವಾನ

ಸಮಾಜ ಕಲ್ಯಾಣ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಪರಿಶಿಷ್ಟ ಜಾತಿ ಮತ್ತು...

ಉಡುಪಿ | ಪರಿಸರ ಸ್ನೇಹಿ ಗೌರಿ, ಗಣೇಶ ಹಬ್ಬ ಆಚರಿಸಿ

ಪ್ರಸಕ್ತ ಸಾಲಿನ ಸ್ವರ್ಣಗೌರಿ ಹಾಗೂ ವರಸಿದ್ದಿ ವಿನಾಯಕ ಚತುರ್ಥಿ ಹಬ್ಬವು ಸಮೀಪಿಸುತ್ತಿದ್ದು....

ಜಾತಿ ನಿಂದನೆ ಆರೋಪ: ಬಿಗ್‌ಬಾಸ್‌ನ ಮಾಜಿ ಸ್ಪರ್ಧಿ ವಕೀಲ ಕೆ ಎನ್ ಜಗದೀಶ್ ಬಂಧನ

ಜಾತಿ ನಿಂದನೆ ಮಾಡಿದ ಆರೋಪದಲ್ಲಿ ಬಿಗ್‌ ಬಾಸ್‌ನಲ್ಲಿ ಸ್ಪರ್ಧಿಸಿದ ಬಳಿಕ ಸೋಷಿಯಲ್...

ಕಲಬುರಗಿ | ಚುನಾವಣಾ ನೀತಿ ಬದಲಾಗಬೇಕೆಂಬುದು ಸಿಪಿಐ(ಎಂ) ನಿಲುವು : ಕೆ.ಪ್ರಕಾಶ

ದೇಶದಲ್ಲಿ ಸರ್ವಾಧಿಕಾರವು ತಾಂಡವವಾಡುತ್ತಿದ್ದು, ಅಘೋಷಿತವಾಗಿ ತುರ್ತುಸ್ಥಿತಿ ಎದುರಿಸುತ್ತಿದ್ದೇವೆ. ಚುನಾವಣೆ ಆಯೋಗದ ಇಂದಿನ...

Download Eedina App Android / iOS

X