ದಕ್ಷಿಣ ಕನ್ನಡ | ಸರ್ಕಾರಿ ಬಸ್ ಸೇವೆ ಒದಗಿಸುವಂತೆ ಆಗ್ರಹಿಸಿ ಕೆಎಸ್‌ಆರ್‌ಟಿಸಿ ಕಚೇರಿ ಮುಂದೆ ಪ್ರತಿಭಟನೆ

Date:

Advertisements

ಸರ್ಕಾರಿ ಬಸ್ ಸೇವೆಗೆ ಆಗ್ರಹಿಸಿ‌ ದಕ್ಷಿಣ ಕನ್ನಡ ಜಿಲ್ಲೆ ಬೈಂದೂರು ತಾಲೂಕಿನ ನಾಡ, ಪಡುಕೋಣೆ, ಹಡವು, ಬಡಾಕೆರೆ, ಹಕ್ಲಾಡಿ ಗ್ರಾಮಸ್ಥರಿಂದ ಮಂಗಳೂರಿನ ಕೆಎಸ್‌ಆರ್‌ಟಿಸಿ ವಿಭಾಗೀಯ ಕಚೇರಿ ಮುಂಭಾಗ ಪ್ರತಿಭಟನೆ ನಡೆಸಿದರು.

ಗ್ರಾಮಸ್ಥರು ಡಿವೈಎಫ್ಐ, ಜನವಾದಿ ಮಹಿಳಾ ಸಂಘಟನೆ, ಸಿಐಟಿಯು ನೇತೃತ್ವದಲ್ಲಿ ಪ್ರತಿಭಟನೆ ನಡೆಸಿದ್ದು, ಬೈಂದೂರು ತಾಲೂಕು ನಾಡ, ಹಡವು, ಬಡಾಕೆರೆ, ಕೊಲ್ಲೂರು, ಕುಂದಾಪುರ ತಾಲೂಕು ಆಲೂರು, ಹಕ್ಲಾಡಿ, ಗುಲ್ವಾಡಿ ಗ್ರಾಮಗಳಿಗೆ ಸರ್ಕಾರಿ ಬಸ್ ಸೇವೆ ಒದಗಿಸಬೇಕು ಎಂದು ಒತ್ತಾಯಿಸಿದರು.

“ಕಳೆದ ನಾಲ್ಕು ತಿಂಗಳಿನಿಂದ ಗ್ರಾಮ ಪಂಚಾಯಿತಿ ಮುಂಭಾಗಗಳಲ್ಲಿ ಪ್ರತಿಭಟನೆಗಳನ್ನು ನಡೆಸುತ್ತಿದ್ದರೂ ಬೇಡಿಕೆ ಈಡೇರದೇ ಇರುವುದರಿಂದ 100 ಕಿಮೀ ಗೂ ಹೆಚ್ಚು ದೂರ ಇರುವ ಮಂಗಳೂರಿಗೆ ಬಂದು ವಿಭಾಗೀಯ ಕಚೇರಿ ಮುಂಭಾಗ ಪ್ರತಿಭಟನೆ ನಡೆಸುವಂತಾಗಿದೆ” ಎಂದು ಪ್ರತಿಭಟನಾಕಾರರು ಹೇಳಿದರು.

Advertisements

ಮಹಿಳೆಯರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಶಕ್ತಿ ಯೋಜನೆಯ ಫಲ ತಮಗೆ ಸಿಗದಿರುವುದಕ್ಕೆ ಆಕ್ರೋಶ ವ್ಯಕ್ತಪಡಿಸಿದ್ದು, “ಗ್ರಾಮಗಳಲ್ಲಿ ಸರ್ಕಾರಿ, ಖಾಸಗಿ ಬ‌ಸ್‌ಗಳು ಓಡಾಡದೆ ಇರುವುದರಿಂದ ವಿದ್ಯಾರ್ಥಿಗಳು ಶಾಲೆ-ಕಾಲೇಜುಗಳಿಗೆ ತಲುಪಲು, ಕಾರ್ಮಿಕರು, ನೌಕರರು ಉದ್ಯೋಗದ ಸ್ಥಳಗಳಿಗೆ ಸಮಯಕ್ಕೆ ಸರಿಯಾಗಿ ತಲುಪಲು ಸಾಧ್ಯವಾಗುತ್ತಿಲ್ಲ” ಎಂದು ಅಲವತ್ತುಕೊಂಡರು.

ಮಂಗಳೂರು ವಿಭಾಗೀಯ ನಿಯಂತ್ರಣಾಧಿಕಾರಿ ಪ್ರತಿಭಟನಾ ಸ್ಥಳಕ್ಕೆ ಆಗಮಿಸಿ ಅಹವಾಲು ಆಲಿಸಿ, ಮನವಿ ಸ್ವೀಕರಿಸಿದರು.

ಶೀಘ್ರವೇ ಗ್ರಾಮಗಳಿಗೆ ಭೇಟಿ ನೀಡಿ ಪರಿಹಾರ ಒದಗಿಸಲು ಯತ್ನಿಸುವುದಾಗಿ ತಿಳಿಸಿದ್ದು, ಸದರಿ ಗ್ರಾಮಗಳಿಗೆ ಬಸ್ ಓಡಿಸಲು ಕೆಎಸ್‌ಆರ್‌ಟಿಸಿಗೆ ಅನುಮತಿ ನೀಡುವಂತೆ ಈಗಾಗಲೆ ಆರ್‌ಟಿಒಗೆ ಪತ್ರ ಬರೆದಿರುವುದಾಗಿ ತಿಳಿಸಿದರು.

ಈ ಸುದ್ದಿ ಓದಿದ್ದೀರಾ? ವಿಜಯಪುರ | ಕೆ-ಸೆಟ್ ಪರೀಕ್ಷೆ-2023; ಆನ್‌ಲೈನ್ ತರಬೇತಿಗೆ ಚಾಲನೆ

ಡಿವೈಎಫ್ಐ ರಾಜ್ಯಾಧ್ಯಕ್ಷ ಮುನೀರ್ ಕಾಟಿಪಳ್ಳ, ಜನವಾದಿ ಮಹಿಳಾ ಸಂಘಟನೆಯ ರಾಜ್ಯ ಕಾರ್ಯದರ್ಶಿ ದೇವಿ, ನಾಡ ಗ್ರಾಮ ಪಂಚಾಯತ್ ಸದಸ್ಯ, ಕಾರ್ಮಿಕ ನಾಯಕ ರಾಜು ಪಡುಕೋಣೆ, ಸಿಪಿಐಎಂ ಹಿರಿಯ ನೇತಾರ ಕೆ ಶಂಕರ್, ವೆಂಕಟೇಶ ಕೋಣಿ, ಸ್ಥಳೀಯ ಪ್ರಮುಖರುಗಳಾದ ರಾಜೇಶ್ ಪಡುಕೋಣೆ, ನಾಗರತ್ನ ನಾಡ, ಶೀಲಾವತಿ ಹಡವು, ಗ್ರಾಪಂ ಸದಸ್ಯೆ ಶೋಭಾ, ನಿಸರ್ಗ ಪಡುವರಿ, ನಿಸರ್ಗ ಪಡುಕೋಣೆ, ಬಲ್ಕೀಸ್ ಕುಂದಾಪುರ, ರೊನಾಲ್ಡ್ ರಾಜೇಶ್ ಬೈಂದೂರು, ಡಿವೈಎಫ್ಐ ದಕ ಜಿಲ್ಲಾ ಮುಖಂಡರಾದ ಬಿಕೆ ಇಮ್ತಿಯಾಜ್, ಸಂತೋಷ್ ಬಜಾಲ್, ಮನೋಜ್ ವಾಮಂಜೂರು, ರಿಜ್ವಾನ್ ಹರೇಕಳ, ಮಾಜಿ ಕಾರ್ಪೊರೇಟರ್ ಜಯಂತಿ ಶೆಟ್ಟಿ ಸೇರಿದಂತೆ ಇತರರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

Download Eedina App Android / iOS

X